Home
ಸುದ್ದಿಜಾಲ

ಭಾರತದಲ್ಲಿ ವಿವೋ Y200e 5G ಈಗ ಖರೀದಿಗೆ ಲಭ್ಯ!..ನೇರ ಡಿಸ್ಕೌಂಟ್‌ ಆಫರ್‌ ಇದೆ!

ವಿವೋ ಸಂಸ್ಥೆಯು ಇತ್ತೀಚಿಗಷ್ಟೆ ನೂತನವಾಗಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿರುವ ವಿವೋ Y200e 5G ಸ್ಮಾರ್ಟ್‌ಫೋನ್‌ ಸ್ಟೈಲಿಶ್‌ ಡಿಸೈನ್‌ ಹಾಗೂ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ. ಅಂದಹಾಗೆ ಈ ಫೋನ್‌ ಇದೀಗ ಸಂಸ್ಥೆಯ ಅಧಿಕೃತ ವೆಬ್‌ಸೈಟ್‌, ಅಮೆಜಾನ್‌ ಹಾಗೂ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣಗಳ ಮೂಲಕ ಮೊದಲ ಬಾರಿಗೆ ಖರೀದಿಗೆ ಲಭ್ಯ ಇದೆ.

ಹೌದು, ಸಂಸ್ಥೆಯ ಅಧಿಕೃತ ವೆಬ್‌ಸೈಟ್‌, ಅಮೆಜಾನ್‌ ಹಾಗೂ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಗಳ ಮೂಲಕ ವಿವೋ Y200e 5G ಸ್ಮಾರ್ಟ್‌ಫೋನ್‌ ಖರೀದಿಗೆ ದೊರೆಯುತ್ತದೆ. ಇನ್ನು ಈ ಫೋನ್‌ ಕ್ವಾಲ್ಕಮ್‌ ಸ್ನಾಪ್‌ಡ್ರಾಗನ್ 4 ಜೆನ್‌ 2 ಪ್ರೊಸೆಸರ್‌ ಬಲದಲ್ಲಿ ಕೆಲಸ ನಿರ್ವಹಿಸಲಿದ್ದು, 5,000mAh ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಸಹ ಒಳಗೊಂಡಿದೆ.

ಭಾರತದಲ್ಲಿ ವಿವೋ Y200e 5G ಈಗ ಖರೀದಿಗೆ ಲಭ್ಯ!..ನೇರ ಡಿಸ್ಕೌಂಟ್‌ ಆಫರ್‌ ಇದೆ!

ಇನ್ನು ಈ ಫೋನ್‌ ಎರಡು ವೇರಿಯಂಟ್‌ ಆಯ್ಕೆಗಳನ್ನು ಪಡೆದಿದ್ದು, ಅವುಗಳು ಕ್ರಮವಾಗಿ 6GB + 128GB ಹಾಗೂ 8GB + 128GB ಸ್ಟೋರೇಜ್‌ ವೇರಿಯಂಟ್‌ ಆಗಿವೆ. 6GB + 128GB ವೇರಿಯಂಟ್‌ 19,999ರೂ. ಬೆಲೆ ಪಡೆದಿದ್ದು, 8GB + 128GB ವೇರಿಯಂಟ್‌ 20,999ರೂ. ದರದಲ್ಲಿ ಲಭ್ಯ.

ಹಾಗೆಯೇ ಎಸ್‌ಬಿಐ, ಎಚ್‌ಡಿಎಫ್‌ಸಿ ಬ್ಯಾಂಕ್, ಐಡಿಎಫ್‌ಸಿ ಫಸ್ಟ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ, ಯೆಸ್ ಬ್ಯಾಂಕ್, ಇಂಡಸ್‌ಇಂಡ್ ಬ್ಯಾಂಕ್ ಹಾಗೂ ಫೆಡರಲ್ ಬ್ಯಾಂಕ್ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ ಬಳಕೆದಾರರಿಗೆ 1,500ರೂ. ಗಳ ವರೆಗೆ ಇನ್‌ಸ್ಟಂಟ್‌ ಡಿಸ್ಕೌಂಟ್‌ ದೊರೆಯಲಿದೆ. ಹಾಗಾದರೇ ವಿವೋ Y200e 5G ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಭಾರತದಲ್ಲಿ ವಿವೋ Y200e 5G ಈಗ ಖರೀದಿಗೆ ಲಭ್ಯ!..ನೇರ ಡಿಸ್ಕೌಂಟ್‌ ಆಫರ್‌ ಇದೆ!

ವಿವೋ Y200e 5G - ಫೀಚರ್ಸ್

ವಿವೋ Y200e 5G ಮೊಬೈಲ್‌ 6.67 ಇಂಚಿನ ಸ್ಯಾಮ್‌ಸಂಗ್ E4 AMOLED ಡಿಸ್‌ಪ್ಲೇ ಅನ್ನು ಹೊಂದಿದೆ. ಈ ಡಿಸ್‌ಪ್ಲೇಯು 2400 × 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿದೆ. ಇದು 120Hz ರಿಫ್ರೆಶ್ ರೇಟ್‌ ಬೆಂಬಲ ಪಡೆದಿದ್ದು, 1800 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ನೀಡಲಿದೆ. ಅಲ್ಲದೇ 100% DCI-P3 ಮತ್ತು 107% NTSC ಕಲರ್ ಗ್ಯಾಮಟ್ ಅನ್ನು ಹೊಂದಿದೆ.

ವಿವೋ Y200e 5G ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 4 ಜೆನ್‌ 2 SoC ಪ್ರೊಸೆಸರ್‌ ಪವರ್‌ ಅನ್ನು ಪಡೆದಿದ್ದು, ಆಂಡ್ರಾಯ್ಡ್‌ 14 ಆಧಾರಿತ FunTouch OS 14 ಸಪೋರ್ಟ್‌ ಜೊತೆಗೆ ರನ್‌ ಆಗಲಿದೆ. ಹಾಗೆಯೇ 6GB + 128GB ಹಾಗೂ 8GB + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದಿದ್ದು, ಇದಲ್ಲದೆ 8GB ವರೆಗಿನ ವರ್ಚುವಲ್ RAM ಅನ್ನು ಸಹ ಪಡೆದಿದೆ. ಇದರಲ್ಲಿ ಮೆಮೊರಿ ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ವಿವೋದ ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಆಗಿದೆ. ಎರಡನೇ ಕ್ಯಾಮೆರಾ 2-ಮೆಗಾ ಪಿಕ್ಸೆಲ್ ಬೊಕೆ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಫ್ಲಿಕರ್‌ ಸೆನ್ಸಾರ್‌ನಲ್ಲಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ವಿವೋ Y200e 5G ಮೊಬೈಲ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದ್ದು 44W ಫಾಸ್ಟ್‌ ಚಾರ್ಜಿಂಗ್ ಅನ್ನು ಸಪೋರ್ಟ್‌ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಡ್ಯುಯಲ್ ಸಿಮ್, 5G, Wi-Fi 802.11ac, ಬ್ಲೂಟೂತ್ 5.0, GPS ಮತ್ತು USB-C ಪೋರ್ಟ್‌ನಂತಹ ಆಯ್ಕೆಗಳನ್ನು ನೀಡುತ್ತದೆ. ಇದು IP54-ರೇಟೆಡ್ ಧೂಳು ನಿರೋಧಕ ಮತ್ತು ನೀರು-ನಿರೋಧಕ ಚಾಸಿಸ್ ಅನ್ನು ಹೊಂದಿದೆ.

Best Mobiles in India

English summary
Vivo Y200e 5G Now Available to Buy in India. Check here Offer price, Features and other details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+