Home
ಸುದ್ದಿಜಾಲ

ಭಾರತದಲ್ಲಿ ಬಿಡುಗಡೆಗೂ ಮುನ್ನವೇ ವಿವೋ Y200e 5G ಫೋನಿನ ಬೆಲೆ ಬಹಿರಂಗ!

ಸೆಲ್ಫಿ ಪ್ರಿಯರ ನೆಚ್ಚಿನ ಬ್ರ್ಯಾಂಡ್‌ ವಿವೋ ಕಂಪೆನಿ ಹೊಸ ಫೋನ್‌ ಬಿಡುಗಡೆಗೆ ತಯಾರಿ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಅನ್ನು Vivo Y200e 5G ಎಂದು ಹೆಸರಿಸಲಾಗಿದ್ದು, ಭಾರತದಲ್ಲಿ ಫೆಬ್ರವರಿ 22 ರಂದು ಬಿಡುಗಡೆಯಾಗಲಿದೆ. ಆದರೆ ಈ ಸ್ಮಾರ್ಟ್‌ಫೋನ್‌ನ ಬೆಲೆ ವಿವರಗಳು ಬಿಡುಗಡೆಗೂ ಮುನ್ನವೇ ಬಹಿರಂಗವಾಗಿದ್ದು, ಎಲ್ಲೆಡೆ ಹಲ್‌ಚಲ್‌ ಎಬ್ಬಿಸಿದೆ.

ಹೌದು, Vivo Y200e 5G ಸ್ಮಾರ್ಟ್‌ಫೋನಿನ ಬೆಲೆ ವಿವರಗಳು ಬಹಿರಂಗವಾಗಿದ್ದ, ಭಾರಿ ಸಂಚಲನ ಸೃಷ್ಟಿಸಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 4 Gen 2 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬರಲಿದೆ. ಹಾಗಾದ್ರೆ Vivo Y200e 5G ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ನೊಂದಿಗೆ ಬರಲಿದೆ? ಇದರ ಬೆಲೆ ಎಷ್ಟಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಭಾರತದಲ್ಲಿ ಬಿಡುಗಡೆಗೂ ಮುನ್ನವೇ ವಿವೋ Y200e 5G ಫೋನಿನ ಬೆಲೆ ಬಹಿರಂಗ!

Vivo Y200e 5G ಬೆಲೆ ನಿರೀಕ್ಷೆ ಏನು?
Vivo Y200e 5G ಸ್ಮಾರ್ಟ್‌ಫೋನ್‌ 6GB RAM + 128GB ರೂಪಾಂತರದ ಆಯ್ಕೆಗೆ 23,999ರೂ ಬೆಲೆಯನ್ನು ಹೊಂದಿರಲಿದೆ. ಇನ್ನು ಸ್ಮಾರ್ಟ್‌ಫೋನ್‌ 8GB RAM+ 128GB ಆಯ್ಕೆಯು 25,999ರೂ ಬೆಲೆಯಲ್ಲಿ ಬರಲಿದೆ. ಈ ಸ್ಮಾರ್ಟ್‌ಫೋನ್‌ ಡೈಮಂಡ್ ಬ್ಲ್ಯಾಕ್ ಮತ್ತು ಕೇಸರಿ ಡಿಲೈಟ್ ಕಲರ್‌ ಆಯ್ಕೆಯಲ್ಲಿ ಎಂಟ್ರಿ ಕೊಡಲಿದೆ ಎಂದು ಸೂಚಿಸಲಾಗಿದೆ.

Vivo Y200e 5G ಫೀಚರ್ಸ್‌ ಹೇಗಿದೆ?
Vivo Y200e 5G ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್‌ ಬೆಂಬಲದೊಂದಿಗೆ ಬರಲಿದೆ. ಜೊತೆಗೆ ಡಿಸ್‌ಪ್ಲೇಯು 1200nits ಗರಿಷ್ಠ ಬ್ರೈಟ್ನೆಸ್‌ ಅನ್ನು ಪಡೆಯುವ ಸಾಧ್ಯತೆಯಿದೆ ಎಂದು ಸೂಚಿಸಿದೆ.

Vivo Y200e 5G ಪ್ರೊಸೆಸರ್‌ ಯಾವುದು?
Vivo Y200e 5G ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 4 Gen 2 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು FunTouch OS 14-ಆಧಾರಿತ Android 14 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM + 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದಲ್ಲಿ ಬರಲಿದೆ. ಇದಲ್ಲದೆ ಸ್ಮಾರ್ಟ್‌ಫೋನ್‌ 8GB ವರೆಗೆ ಹೆಚ್ಚುವರಿ RAM ಅನ್ನು ನೀಡಲಿದೆ.

ಭಾರತದಲ್ಲಿ ಬಿಡುಗಡೆಗೂ ಮುನ್ನವೇ ವಿವೋ Y200e 5G ಫೋನಿನ ಬೆಲೆ ಬಹಿರಂಗ!

Vivo Y200e 5G ಕ್ಯಾಮೆರಾ ಸೆಟಪ್‌ ಏನು?
Vivo Y200e 5G ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ನಲ್ಲಿ ಬರಲಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾದಲ್ಲಿ ಬರಲಿದೆ ಎಂದು ಅಂದಾಜಿಸಲಾಗಿದೆ.

Vivo Y200e 5G ಬ್ಯಾಟರಿ ಮತ್ತು ಇತರೆ
Vivo Y200e 5G ಸ್ಮಾರ್ಟ್‌ಫೋನ್‌ 44W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ 5,000mAh ಸಾಮರ್ಥ್ಯದ ಬ್ಯಾಟರಿಯಲ್ಲಿ ಬರಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಟೈಪ್‌ ಸಿ ಅನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್ ಭಾರತದ ಮೊದಲ ಬಾಳಿಕೆ ಬರುವ ಇಕೋ-ಫೈಬರ್ ಲೆದರ್ ಫಿನಿಶ್ ಅನ್ನು ಹಿಂಭಾಗದಲ್ಲಿ ಹೊಂದಿದೆ ಎಂದು ಖಚಿತಪಡಿಸಿದೆ.

ಇದಲ್ಲದೆ ಸದ್ಯದಲ್ಲೇ ವಿವೋ ಕಂಪೆನಿ ವಿವೋ V30 ಪ್ರೊ ಮೊಬೈಲ್‌ ಪರಿಚಯಿಸುವ ಸಾಧ್ಯತೆಯಿದೆ. ಈ ಫೋನ್‌ ಸೂಪರ್-ಸ್ಮೂತ್ 120Hz ರಿಫ್ರೆಶ್ ರೇಟ್‌ ಸೌಲಭ್ಯ ಪಡೆದಿರುವ ಸಾಧ್ಯತೆಗಳು ಇದ್ದು, ಅಲ್ಲದೇ ಇದು 3D ಕರ್ವ್ ಡಿಸ್‌ಪ್ಲೇ ಅನ್ನು ಹೊಂದಿರಲಿದೆ ಎನ್ನಲಾಗಿದೆ. ಹಾಗೆಯೇ ಈ ಫೋನಿನ ಡಿಸ್‌ಪ್ಲೇಯು ತಲ್ಲೀನಗೊಳಿಸುವ ವೀಕ್ಷಣೆಯ ಅನುಭವವನ್ನು ಒದಗಿಸಲಿದೆ.

Best Mobiles in India

English summary
Vivo Y200e 5G price Details leaked ahead of launch in India
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+