ಬಿಡುಗಡೆಗೂ ಮುನ್ನವೇ ವಿವೋ Y200e 5G ಫೋನ್ ಬೆಲೆ ವಿವರ ಬಹಿರಂಗ!
ವಿವೋ ಕಂಪೆನಿ ಮತ್ತೊಂದು ಹೊಸ ಸ್ಮಾರ್ಟ್‌ಫೋನ್ Vivo Y200e 5G ಪರಿಚಯಿಸಲು ತಯಾರಿ ನಡೆಸಿದೆ. ಈ ಸ್ಮಾರ್ಟ್‌ಫೋನ್ ಇನ್ನೇನು ಕೆಲವೇ ದಿನಗಳಲ್ಲಿ ಭಾರತದ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ ಎನ್ನಲಾಗಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 4 Gen 2 ಪ್ರೊಸೆಸರ್‌ನಿಂದ ಕಾರ್ಯನಿರ್ವಹಿಸಲಿದೆ. ಇನ್ನು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿರಲಿದೆ.
ಹೌದು, Vivo Y200e 5G ಸ್ಮಾರ್ಟ್‌ಫೋನ್ ವಿನ್ಯಾಸದ ರೆಂಡರ್‌ಗಳು, ಫೀಚರ್ಸ್‌ಗಳು ಆನ್‌ಲೈನ್‌ನಲ್ಲಿ ಬಹಿರಂಗವಾಗಿದೆ. ಈ ಸ್ಮಾರ್ಟ್‌ಫೋನ್ 44W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ ಬರಲಿದೆ ಎಂದು ಹೇಳಲಾಗಿದೆ. ಇದಲ್ಲದೆ ಸ್ಮಾರ್ಟ್‌ಫೋನ್ ದೇಶದಲ್ಲಿ 20,000ರೂ ಆರಂಭಿಕ ಬೆಲೆಯನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ನೊಂದಿಗೆ ಬರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

Vivo Y200e 5G ಫೀಚರ್ಸ್ ನಿರೀಕ್ಷೆ ಏನು?
Vivo Y200e 5G ಸ್ಮಾರ್ಟ್‌ಫೋನ್ 6.67-ಇಂಚಿನ AMOLED ಡಿಸ್ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿ ಬರಲಿದೆ. ಇದು 20:9 ಡಿಸ್‌ಪ್ಲೇ ರಚನೆಯ ಅನುಪಾತವನ್ನು ಪಡೆದಿದ್ದು, 120Hz ರಿಫ್ರೆಶ್ ರೇಟ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಡಿಸ್‌ಪ್ಲೇ 1200nits ಪೀಕ್ ಬ್ರೈಟ್‌ನೆಸ್ ಅನ್ನು ಹೊಂದಿರಲಿದ್ದು, ಸೆಂಟರ್ಡ್ ಪಂಚ್ ಹೋಲ್ ನೋಚ್ ಅನ್ನು ಹೊಂದಿದೆ.
Vivo Y200e 5G ಪ್ರೊಸೆಸರ್ ಯಾವುದು?
Vivo Y200e 5G ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 4 Gen 2 ಪ್ರೊಸೆಸರ್‌ನಿಂದ ಚಾಲಿತವಾಗಲಿದೆ. ಇದು ಆಂಡ್ರಾಯ್ಡ್ 14 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಹಾಗೂ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯದಲ್ಲಿ ಬರಲಿದೆ ಎನ್ನಲಾಗಿದೆ. ಇದು ಮೆಮೊರಿ ಕಾರ್ಡ್ ಬೆಂಬಲಿಸುವುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
Vivo Y200e 5G ಕ್ಯಾಮೆರಾ ಸೆಟಪ್ ಏನಿದೆ?
Vivo Y200e 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ನೊಂದಿಗೆ ಬರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ನಲ್ಲಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಲಿದೆ ಎಂದು ವರದಿಯಾಗಿದೆ.
Vivo Y200e 5G ಬ್ಯಾಟರಿ ಮತ್ತು ಇತರೆ ಸೌಲಭ್ಯ
Vivo Y200e 5G ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 44W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್, ಹಾಟ್‌ಸ್ಪಾಟ್, ವೈಫೈ, ಯುಎಸ್‌ಬಿ ಟೈಪ್ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಹೊಂದಿರಲಿದೆ ಎನ್ನಲಾಗಿದೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್, ಅಕ್ಸಿಲೆರೊಮೀಟರ್ ಅನ್ನು ಒಳಗೊಂಡಿರಲಿದೆ ಎಂದು ಅಂದಾಜಿಸಲಾಗಿದೆ.
Vivo Y200e 5G ಬೆಲೆ ಮತ್ತು ಲಭ್ಯತೆ
Vivo Y200e 5G ಸ್ಮಾರ್ಟ್‌ಫೋನ್ 6GB RAM ಮತ್ತು 128GB ಹಾಗೂ 8GB RAM ಮತ್ತು 128GB ಸ್ಟೋರೇಜ್ ಸಾಮರ್ಥ್ಯದ ಎರಡು ವೇರಿಯೆಂಟ್ ಆಯ್ಕೆಗಳಲ್ಲಿ ಬರಲಿದೆ. ಇದರಲ್ಲಿ 6GB RAM ಮತ್ತು 128GB ಸಾಮರ್ಥ್ಯದ ಆಯ್ಕೆಗೆ 20,000ರೂ ಬೆಲೆಯನ್ನು ಹೊಂದಿರಲಿದೆ. ಇನ್ನು 8GB RAM ಮತ್ತು 128GB ಸಾಮರ್ಥ್ಯದ ಆಯ್ಕೆಗೆ 21,000ರೂ ಬೆಲೆಯಲ್ಲಿ ಬರಲಿದೆ ಎಂದು ಅಂದಾಜಿಸಲಾಗಿದೆ.


Click it and Unblock the Notifications








