ಭಾರತದಲ್ಲಿ ಅಗ್ಗದ ವಿವೋ Y20A ಸ್ಮಾರ್ಟ್‌ಫೋನ್‌ ಬಿಡುಗಡೆ!

|

ಜನಪ್ರಿಯ ವಿವೋ ಕಂಪೆನಿಯು ಹಲವು ಬಜೆಟ್ ದರದ ಸ್ಮಾರ್ಟ್‌ಫೋನ್‌ಗಳಿಂದ ಮಾರುಕಟ್ಟೆಯಲ್ಲಿ ಗುರುತಿಸಿಕೊಂಡಿದೆ. ವಿವೋ ಇದೀಗ ಹೊಸದಾಗಿ ವಿವೋ Y20A ಸ್ಮಾರ್ಟ್‌ಫೋನ್‌ ಅನ್ನು ದೇಶಿಯ ಮಾರುಕಟ್ಟೆಗೆ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್‌ಗಳು ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾವು 13ಎಂಪಿ ಸೆನ್ಸಾರ್‌ನಲ್ಲಿದೆ. ಹಾಗೆಯೇ ಈ ಫೋನ್ ಅಗ್ಗದ ಪ್ರೈಸ್‌ಟ್ಯಾಗ್‌ನಿಂದ ಗ್ರಾಹಕರನ್ನು ಸೆಳೆದಿದೆ.

 ವಿವೋ Y20A

ಹೌದು, ವಿವೋ ಕಂಪನಿಯು ಇದೀಗ ಭಾರತದಲ್ಲಿ ನೂತನವಾಗಿ ವಿವೋ Y20A ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಸೆಟ್‌ಅಪ್‌ ಪಡೆದಿದೆ. ಇದರೊಂದಿಗೆ 3GB RAM ಮತ್ತು 64GB ಸ್ಟೋರೇಜ್‌ ಸಾಮರ್ಥ್ಯದ ವೇರಿಯಂಟ್‌ ಆಯ್ಕೆಯನ್ನು ಒಳಗೊಂಡಿದ್ದು, ಈ ಫೋನ್ ಸ್ನಾಪ್ಡ್ರಾಗನ್ 439 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನುಳಿದಂತೆ ವಿವೋ Y20A ಸ್ಮಾರ್ಟ್‌ಫೋನಿನ ಬೆಲೆ ಎಷ್ಟು?..ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ವಿವೋ Y20A- ಡಿಸ್‌ಪ್ಲೇ

ವಿವೋ Y20A- ಡಿಸ್‌ಪ್ಲೇ

ವಿವೋ Y20A ಸ್ಮಾರ್ಟ್‌ಫೋನ್‌ 6.51-ಇಂಚಿನ ಪೂರ್ಣ ಹೆಚ್‌ಡಿ + ಮಾದರಿಯ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು 720x1,600 ಪಿಕ್ಸೆಲ್ ರೆಸಲ್ಯೂಶನ್ ಹೊಂದಿರಲಿದೆ. ಹಾಗೆಯೇ ಡಿಸ್‌ಪ್ಲೇಯ ಅನುಪಾತ 20:9 ಆಗಿದೆ.

ವಿವೋ Y20A- ಪ್ರೊಸೆಸರ್‌

ವಿವೋ Y20A- ಪ್ರೊಸೆಸರ್‌

ವಿವೋ Y20A ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 439 SoC ನಿಂದ ನಿಯಂತ್ರಿಸಲ್ಪಡುತ್ತದೆ. ಇನ್ನು ಈ ಫೋನ್3GB RAM ಮತ್ತು 64GB ಸ್ಟೋರೇಜ್ ಆಯ್ಕೆ ಪಡೆದಿದೆ. ಎಸ್‌ಡಿ ಕಾರ್ಡ್‌ ಮೂಲಕ ಮೆಮೊರಿ ಹೆಚ್ಚಿಸುವ ಅವಕಾಶ ಇದೆ.

ವಿವೋ Y20A- ಕ್ಯಾಮೆರಾ

ವಿವೋ Y20A- ಕ್ಯಾಮೆರಾ

ವಿವೋ Y20A ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಒಳಗೊಂಡಿದೆ. ಮುಖ್ಯ ಕ್ಯಾಮೆರಾವು 13 ಮೆಗಾಪಿಕ್ಸೆಲ್ ಸೆನ್ಸಾರ್‌ನಲ್ಲಿ ಇದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾ 2ಎಂಪಿ ಮತ್ತು ತೃತೀಯ ಕ್ಯಾಮೆರಾ 2ಎಂಪಿ ಸೆನ್ಸಾರ್‌ನಲ್ಲಿರಲಿದೆ. ಸೆಲ್ಫಿ ಕ್ಯಾಮೆರಾವು 8ಎಂಪಿ ಸೆನ್ಸಾರ್‌ ನಲ್ಲಿದೆ.

ವಿವೋ Y20A-ಬ್ಯಾಟರಿ

ವಿವೋ Y20A-ಬ್ಯಾಟರಿ

ವಿವೋ Y20A ಸ್ಮಾರ್ಟ್‌ಫೋನ್ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿರಲಿದೆ. ಇದರೊಂದಿಗೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಇದೆ. ಸಂಪರ್ಕ ಆಯ್ಕೆಗಳಲ್ಲಿ ಬ್ಲೂಟೂತ್ 4.2, ಮೈಕ್ರೋ-ಯುಎಸ್‌ಬಿ ಪೋರ್ಟ್, ಜಿಪಿಎಸ್, ಎಫ್‌ಎಂ ರೇಡಿಯೋ ಮತ್ತು ಹೆಚ್ಚಿನವು ಸೇರಿವೆ.

ವಿವೋ Y20A ಬೆಲೆ ಎಷ್ಟು?

ವಿವೋ Y20A ಬೆಲೆ ಎಷ್ಟು?

ವಿವೋ Y20A ಸ್ಮಾರ್ಟ್‌ಫೋನ್ 3GB RAM ಮತ್ತು 64GB ವೇರಿಯಂಟ್‌ ಬೆಲೆಯು 11,490ರೂ.ಗಳು ಆಗಿದೆ. ಇನ್ನು ಈ ಫೋನ್ ಬ್ಲೂ ಮತ್ತು ವೈಟ್‌ ಬಣ್ಣಗಳ ಆಯ್ಕೆಯನ್ನು ಪಡೆದಿದೆ.

Most Read Articles
Best Mobiles in India

English summary
Vivo Y20A is priced at Rs. 11,490 in India for the lone 3GB + 64GB storage model.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X