ವಿವೋ Y20s G ಸ್ಮಾರ್ಟ್‌ಫೋನ್‌ ಬಿಡುಗಡೆ! ವಿಶೇಷತೆ ಏನು?

|

ವಿವೋ ಕಂಪೆನಿ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ತನ್ನ ಆಕರ್ಷಕ ಸ್ಮಾರ್ಟ್‌ಫೋನ್‌ಗಳ ಮೂಲಕ ಜನಪ್ರಿಯತೆಯನ್ನು ಪಡೆದುಕೊಂಡಿದೆ. ಸದ್ಯ ಇದೀಗ ಹೊಸ ವಿವೋ Y20s G ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಇದು ಈ ವರ್ಷದ ಜನವರಿಯಲ್ಲಿ ಭಾರತದಲ್ಲಿ ಬಿಡುಗಡೆಯಾದ ವಿವೋ Y20G ಸ್ಮಾರ್ಟ್‌ಫೋನ್‌ನ ರಿಬ್ರಾಂಡೆಡ್ ಆವೃತ್ತಿಯಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಪಡೆದುಕೊಂಡಿದೆ.

ವಿವೋ Y20s G

ಹೌದು, ವಿವೋ ಕಂಪೆನಿ ವಿವೋ Y20s G ಸ್ಮಾರ್ಟ್‌ಫೋನ್‌ ಅನ್ನು ಫಿಲಿಪೈನ್ಸ್‌ ಮಾರುಕಟ್ಟೆಯಲ್ಲಿ ಲಾಂಚ್‌ ಮಾಡಿದೆ. ಇದು 6.51 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೊ G80 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ವಿಶೇಷತೆಗಳನ್ನು ಒಳಗೊಂಡಿವೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿಶೇಷ

ಡಿಸ್‌ಪ್ಲೇ ವಿಶೇಷ

ವಿವೋ Y20s G ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.51 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತವನ್ನು ಹೊಂದಿದ್ದು, 81.6% ಸ್ಕ್ರೀನ್‌ ಟು ಬಾಡಿ ಅನುಪಾತವನ್ನು ಪಡೆದುಕೊಂಡಿದೆ. ಜೊತೆಗೆ ಈ ಡಿಸ್‌ಪ್ಲೇ 270PPI ಪಿಕ್ಸೆಲ್‌ ಸಾಂದ್ರತೆಯನ್ನು ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G80 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ ಫಂಟೌಚ್ ಓಎಸ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಇಮೇಜ್‌ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ವೈ-ಫೈ, ಬ್ಲೂಟೂತ್ 5.0 ಮತ್ತು ಮೈಕ್ರೋ-ಯುಎಸ್‌ಬಿ ಪೋರ್ಟ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ವಿವೋ ಫಿಲಿಪೈನ್ಸ್ ವೆಬ್‌ಸೈಟ್‌ನ ಪ್ರಕಾರ, ವಿವೋ Y20s G ಸ್ಮಾರ್ಟ್‌ಫೋನ್‌ ಏಕೈಕ 6GB RAM + 128GB ಶೇಖರಣಾ ರೂಪಾಂತರಕ್ಕೆ PHP 9,999 (ಸರಿಸುಮಾರು ರೂ. 15,400) ಬೆಲೆಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಅಬ್ಸಿಡಿಯನ್ ಬ್ಲ್ಯಾಕ್ ಮತ್ತು ಪ್ಯೂರಿಸ್ಟ್ ಬ್ಲೂ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

Best Mobiles in India

English summary
Vivo Y20s G launched in the Philippines:price, specifications.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X