ಭಾರತದಲ್ಲಿ ವಿವೋ Y20T ಸ್ಮಾರ್ಟ್‌ಫೋನ್‌ ಲಾಂಚ್; ಬಜೆಟ್‌ ಬೆಲೆಗೆ ಲಭ್ಯ!

|

ಪ್ರಮುಖ ಸ್ಮಾರ್ಟ್‌ಫೋನ್‌ ತಯಾರಕ ಕಂಪನಿಗಳಲ್ಲಿ ಒಂದಾದ 'ವಿವೋ' ಸಂಸ್ಥೆಯು ಈಗಾಗಲೇ ಹಲವು ಭಿನ್ನ ಶ್ರೇಣಿಯಲ್ಲಿ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿದೆ. ಕಂಪನಿಯು ಇದೀಗ ದೇಶಿಯ ಮಾರುಕಟ್ಟೆಗೆ ಹೊಸದಾಗಿ ವಿವೋ Y20T ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್‌ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಇದರೊಂದಿಗೆ ಸ್ನ್ಯಾಪ್‌ಡ್ರಾಗನ್ 662 ಪ್ರೊಸೆಸರ್‌ ಬಲವನ್ನು ಪಡೆದಿದೆ.

ಬ್ಯಾಕ್‌ಅಪ್‌

ಹೌದು, ವಿವೋ ಸ್ಮಾರ್ಟ್‌ಫೋನ್‌ ಕಂಪೆನಿಯು ಹೊಸದಾಗಿ ವಿವೋ Y20T ಸ್ಮಾರ್ಟ್‌ಫೋನ್‌ ಅನ್ನು ಭಾರತೀಯ ಮೊಬೈಲ್‌ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. 5,000mAh ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿದ್ದು, 13 ಮೆಗಾ ಪಿಕ್ಸಲ್‌ ಸಾಮರ್ಥ್ಯದ ಮುಖ್ಯ ಕ್ಯಾಮೆರಾ ಸೆನ್ಸಾರ್‌ ಪಡೆದಿದೆ. ಹಾಗೆಯೇ ಈ ಫೋನ್ 6GB RAM + 64GB ಸ್ಟೋರೇಜ್ ವೇರಿಯಂಟ್‌ನ ಆಯ್ಕೆಯನ್ನು ಒಳಗೊಂಡಿದೆ. ಇದಕ್ಕೆ ಪೂರಕವಾಗಿ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಹೊಂದಿದೆ. ಗೇಮಿಂಗ್ ಉತ್ಸಾಹಿಗಳಿಗಾಗಿ ಈ ಫೋನ್ ಮಲ್ಟಿ ಟರ್ಬೊ 5.0 ಜೊತೆಗೆ ಅಲ್ಟ್ರಾ ಗೇಮ್ ಮೋಡ್, ಎಸ್‌ಪೋರ್ಟ್ಸ್ ಮೋಡ್, 4 ಡಿ ಗೇಮ್ ವೈಬ್ರೇಶನ್ ಮತ್ತು ಗೇಮ್ ಪಿಕ್ಚರ್ ಇನ್ ಪಿಕ್ಚರ್‌ ಆಯ್ಕೆ ಪಡೆದಿದೆ. ಹಾಗಾದರೇ ವಿವೋ Y20T ಸ್ಮಾರ್ಟ್‌ಫೋನ್‌ ಇತರೆ ಯಾವೆಲ್ಲಾ ಆಕರ್ಷಕ ಫೀಚರ್ಸ್‌ ಪಡೆದಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ವಿವೋ Y20T ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದ್ದು, 6.51-ಇಂಚಿನ ಪೂರ್ಣ-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಈ ಫೋನ್‌ ಫುಲ್‌ ವ್ಯೂವ್‌ ಡಿಸ್‌ಪ್ಲೇಯನ್ನು ಹಾಗೂ ಸೆಲ್ಫಿ ನಾಚ್‌ ಅನ್ನು ಒಳಗೊಂಡಿದೆ. ಇನ್ನು ಈ ಫೋನ್ 164.41x76.32x8.41mm ಸುತ್ತಳತೆಯ ರಚನೆಯನ್ನು ಪಡೆದಿದೆ.

ಪ್ರೊಸೆಸರ್‌ ಬಲ ಯಾವುದು

ಪ್ರೊಸೆಸರ್‌ ಬಲ ಯಾವುದು

ವಿವೋ Y20T ಸ್ಮಾರ್ಟ್‌ಫೋನ್‌ ಸ್ನ್ಯಾಪ್‌ಡ್ರಾಗನ್ 662 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 ಓಎಸ್ ಸಪೋರ್ಟ್‌ ಅನ್ನು ಪಡೆದಿದೆ. ಹಾಗೆಯೇ 6GB RAM + 64 GB ಸ್ಟೋರೇಜ್ ವೇರಿಯಂಟ್‌ನ ಆಯ್ಕೆಯನ್ನು ಪಡೆದಿದೆ. ಹಾಗೆಯೇ 1GB ಎಕ್ಸ್‌ಟೆಂಡ್‌ RAM ಆಯ್ಕೆ ಸಹ ಇದು ಪಡೆದಿದೆ. ಇದರೊಂದಿಗೆ ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿಯನ್ನು 1 TB ವರೆಗೂ ವಿಸ್ತರಿಸಲು ಅವಕಾಶ ನೀಡಿದೆ.

ಕ್ಯಾಮೆರಾ ಸೆನ್ಸಾರ್ ಸ್ಪೆಷಲ್

ಕ್ಯಾಮೆರಾ ಸೆನ್ಸಾರ್ ಸ್ಪೆಷಲ್

ವಿವೋ Y20T ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ f/2.4 ಅಪರ್ಚರ್ ನೊಂದಿಗೆ 2 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಹಾಗೂ ತೃತೀಯ ಕ್ಯಾಮೆರಾವು ಸಹ 2 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ವಿವೋ Y20T ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಬ್ಯಾಂಡ್ ವೈ-ಫೈ, 4 ಜಿ, ಬ್ಲೂಟೂತ್ ವಿ 5 ಮತ್ತು ಮೈಕ್ರೋ-ಯುಎಸ್‌ಬಿ ಪೋರ್ಟ್ ಸೇರಿವೆ. ಆನ್‌ಬೋರ್ಡ್‌ನಲ್ಲಿರುವ ಸೆನ್ಸರ್‌ಗಳು ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಇ-ಕಂಪಾಸ್, ಗೈರೋಸ್ಕೋಪ್ ಮತ್ತು ಸಾಮೀಪ್ಯ ಸೆನ್ಸರ್ ಅನ್ನು ಒಳಗೊಂಡಿವೆ. ಸೈಡ್ ಮೌಂಟೆಡ್ ಫಿಂಗರ್ ಪ್ರಿಂಟ್ ಸ್ಕ್ಯಾನರ್ ಇದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ವಿವೋ Y20T ಸ್ಮಾರ್ಟ್‌ಫೋನ್‌ 6GB RAM + 64GB ಸ್ಟೋರೇಜ್‌ನ ಸಿಂಗಲ್ ವೇರಿಯಂಟ್ ಆಯ್ಕೆ ಹೊಂದಿದೆ. ಭಾರತದಲ್ಲಿ ಇದರ ಬೆಲೆಯು 15,490ರೂ. ಆಗಿದೆ. ಇನ್ನು ಈ ಫೋನ್ ಅಬ್ಸಿಡಿಯನ್ ಕಪ್ಪು ಮತ್ತು ಪ್ಯೂರಿಸ್ಟ್ ನೀಲಿ ಬಣ್ಣಗಳ ಆಯ್ಕೆಯನ್ನು ಪಡೆದಿದೆ. ವಿವೋ ಇಂಡಿಯಾ ಇ-ಸ್ಟೋರ್, ಅಮೆಜಾನ್, ಫ್ಲಿಪ್‌ಕಾರ್ಟ್, ಪೇಟಿಎಂ, ಟಾಟಾ ಕ್ಲಿಕ್, ಬಜಾಜ್ ಫಿನ್‌ಸರ್ವ್ ಇಎಂಐ ಸ್ಟೋರ್ ಸೇರಿದಂತೆ ಪ್ರಮುಖ ರಿಟೇಲ್ ಸ್ಟೋರ್‌ಗಳ ಮೂಲಕ ಈ ಹೊಸ ಫೋನ್ ಖರೀದಿಗೆ ಲಭ್ಯವಿದೆ.

Best Mobiles in India

English summary
The handset features an AI triple rear camera setup, a large battery and supports fast charging.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X