ಭಾರತದಲ್ಲಿ ವಿವೋ Y21 ಮತ್ತು Y21e ಸ್ಮಾರ್ಟ್‌ಫೋನ್ ಬೆಲೆ ಕಡಿತ!
ವಿವೋ ಕಂಪೆನಿ ಸ್ಮಾರ್ಟ್‌ಫೋನ್ ಪ್ರಿಯರಿಗೆ ಗುಡ್ ನ್ಯೂಸ್ ನೀಡಿದೆ. ತನ್ನ ವಿವೋ Y21 ಮತ್ತು Y21e ಸ್ಮಾರ್ಟ್‌ಫೋನ್ ಬೆಲೆಯನ್ನು ಕಡಿತಗೊಳಿಸಿದೆ. ವರದಿಯ ಪ್ರಕಾರ ವಿವೋ Y21 ಮತ್ತು Y21e ಸ್ಮಾರ್ಟ್‌ಫೋನ್‌ಗಳ ಬೆಲೆಯಲ್ಲಿ 500ರೂ.ಗಳನ್ನು ಕಡಿತ ಮಾಡಿದೆ. ಇನ್ನು ಈ ಎರಡೂ ವಿವೋ ಫೋನ್‌ಗಳು ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿವೆ. ಜೊತೆಗೆ ವಾಟರ್‌ಡ್ರಾಪ್ ಸ್ಟೈಲ್ ಡಿಸ್‌ಪ್ಲೇ ನಾಚ್ ವಿನ್ಯಾಸವನ್ನು ಒಳಗೊಂಡಿವೆ.

ಹೌದು, ವಿವೋ Y21 ಮತ್ತು Y21e ಸ್ಮಾರ್ಟ್‌ಫೋನ್‌ಗಳು ಬೆಲೆ ಕಡಿತವನ್ನು ಪಡೆದುಕೊಂಡಿವೆ. ಇನ್ನು ಈ ಎರಡೂ ಫೋನ್‌ಗಳು ವಿಭಿನ್ನ ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದುಕೊಂಡಿವೆ. ಇದರಲ್ಲಿ ವಿವೋ Y21e ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಆದರೆ ವಿವೋ Y21 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ P35 ಪ್ರೊಸೆಸರ್ ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಬೆಲೆ ಇಳಿಕೆಯ ನಂತರದ ಬೆಲೆ
ಭಾರತದಲ್ಲಿ ವಿವೋ Y21 ಸ್ಮಾರ್ಟ್‌ಫೋನ್ ಬೆಲೆ ಇಳಕೆಯ ನಂತರ ಇದೀಗ 4GB RAM + 64GB ಸ್ಟೋರೇಜ್ ಮಾದರಿಗೆ 13,499ರೂ.ಬೆಲೆಯಲ್ಲಿ ದೊರೆಯಲಿದೆ. ಇನ್ನು ವಿವೋ Y21e ಸ್ಮಾರ್ಟ್‌ಫೋನ್ ಬೆಲೆ ಈಗ 12,499ರೂ.ಬೆಲೆಯಲ್ಲಿ ಲಭ್ಯವಾಗಲಿದೆ.

ವಿವೋ Y21 ಸ್ಮಾರ್ಟ್‌ಫೋನ್ ಫೀಚರ್ಸ್
ವಿವೋ Y21 ಸ್ಮಾರ್ಟ್‌ಫೋನ್ 6.51 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ P35 SoC ಪ್ರೊಸೆಸರ್ ಬಲವನ್ನು ಹೊಂದಿದೆ. ಆಂಡ್ರಾಯ್ಡ್ 11 ಫನ್‌ಟಚ್ OS 11.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ವಿವೋ Y21e ಸ್ಮಾರ್ಟ್‌ಫೋನ್ ಫೀಚರ್ಸ್
ವಿವೋ Y21e ಸ್ಮಾರ್ಟ್‌ಫೋನ್ 6.51 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 12 ಅನ್ನು ಫನ್‌ಟಚ್ OS 12 ಜೊತೆಗೆ ರನ್ ಆಗಲಿದೆ. ಹಾಗೆಯೇ 3GB RAM ಮತ್ತು 64GB ಇಂಟರ್ ಸ್ಟೋರೇಜ್ ಬಲವನ್ನು ಹೊಂದಿದೆ. ಜೊತೆಗೆ ಮೈಕ್ರೊ SD ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಆಯ್ಕೆಯನ್ನು ಸಹ ನೀಡಲಾಗಿದೆ. ಇನ್ನು ಈ ಫೋನ್ ಕೂಡ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಬ್ಲೂಟೂತ್, ಯುಎಸ್‌ಬಿ ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಕೂಡ ಹೊಂದಿದೆ.


Click it and Unblock the Notifications








