ಭಾರತದಲ್ಲಿ ವಿವೋ Y21 ಸ್ಮಾರ್ಟ್‌ಫೋನ್ ಬಿಡುಗಡೆ! ಬೆಲೆ ಎಷ್ಟು?
ಟೆಕ್ ವಲಯದಲ್ಲಿ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ವಿವೋ ಕಂಪೆನಿ ಹೆಸರುವಾಸಿಯಾಗಿದೆ. ಈಗಾಗಲೇ ತನ್ನ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಹೊಸ ವಿವೋ Y21 ಅನ್ನು ಲಾಂಚ್ ಮಾಡಿದೆ. ಈ ಫೋನ್ ವಾಟರ್‌ಡ್ರಾಪ್ ಶೈಲಿಯ ನಾಚ್ ಡಿಸ್‌ಪ್ಲೇ ಹೊಂದಿದೆ. ಇದು 13 ಮೆಗಾಪಿಕ್ಸೆಲ್ ಪ್ರೈಮರಿ ಕ್ಯಾಮೆರಾ ಒಳಗೊಂಡ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ.

ಹೌದು, ವಿವೋ ಕಂಪೆನಿ ಭಾರತದಲ್ಲಿ ವಿವೋ Y21 ಅನ್ನು ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್ 6.5-ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್ ಹಿಲಿಯೋ P35 SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನುಳಿದಂತೆ ಈ ಹೊಸ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ
ವಿವೋ Y21 ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ HD+ (ಗಳು) IPS LCD ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ವಾಟರ್‌ಡ್ರಾಪ್ ನಾಚ್ ಶೈಲಿಯನ್ನು ಪಡೆದುಕೊಂಡಿದೆ.

ಪ್ರೊಸೆಸರ್ ಸಾಮರ್ಥ್ಯ
ಇದು ಮೀಡಿಯಾಟೆಕ್ ಹಿಲಿಯೋ P35 SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ಫನ್‌ಟಚ್ ಓಎಸ್ 11.1 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 128GB ಇಂಟರ್ ಸ್ಟೋರೇಜ್ ಆಯ್ಕೆಯನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್ಡಿ ಕಾರ್ಡ್ ಸ್ಲಾಟ್ ಬಳಸಿ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ
ಇನ್ನು ಈ ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ವಿವೋ Y21 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಯುಎಸ್‌ಬಿ ಟೈಪ್-ಸಿ ಪೋರ್ಟ್, ಡ್ಯುಯಲ್-ಸಿಮ್ ಸ್ಲಾಟ್‌ಗಳು, 4ಜಿ ಮತ್ತು ಬ್ಲೂಟೂತ್ ಅನ್ನು ಬೆಂಬಲಿಸಲಿದೆ. ಇದು ಸೈಡ್ ಮೌಂಟೆಡ್ ಫಿಂಗರ್ ಪ್ರಿಂಟ್ ಸೆನ್ಸರ್ ಹೊಂದಿದೆ.

ಬೆಲೆ ಮತ್ತು ಲಭ್ಯತೆ
ವಿವೋ Y21 ಸ್ಮಾರ್ಟ್‌ಫೋನ್ ಭಾರತದಲ್ಲಿ 4GB + 128GB ರೂಪಾಂತರಕ್ಕೆ 15,490.ರೂ ಬೆಲೆ ಹೊಂದಿದೆ. ಈ ಸ್ಮಾರ್ಟ್‌ಫೋನ್ ವಿವೋ ಇಂಡಿಯಾ ಇ-ಸ್ಟೋರ್, ಅಮೆಜಾನ್, ಫ್ಲಿಪ್‌ಕಾರ್ಟ್, ಪೇಟಿಎಂ, ಟಾಟಾಕ್ಲಿಕ್, ಬಜಾಜ್ ಫಿನ್‌ಸರ್ವ್ ಇಎಂಐ ಸ್ಟೋರ್ ಮತ್ತು ಇಂದಿನಿಂದ ಎಲ್ಲಾ ಪಾಲುದಾರ ರಿಟೇಲ್ ಸ್ಟೋರ್‌ಗಳಲ್ಲಿ ಲಭ್ಯವಿರುತ್ತದೆ. ಇದು ಡೈಮಂಡ್ ಗ್ಲೋ ಮತ್ತು ಮಿಡ್ನೈಟ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಬರುತ್ತದೆ. ಲಾಂಚ್ ಆಫರ್‌ನಲ್ಲಿ HDFC ಬ್ಯಾಂಕ್ ಕಾರ್ಡ್‌ಗಳು ಮತ್ತು ICICI ಬ್ಯಾಂಕ್ ಕಾರ್ಡ್‌ಗಳ ಮೇಲೆ 500 ಕ್ಯಾಶ್‌ಬ್ಯಾಕ್ ದೊರೆಯಲಿದೆ.


Click it and Unblock the Notifications



