Just In
Don't Miss
- News
ನೌಕಾಪಡೆಗಳ ಶಕ್ತಿ ಸಾಮರ್ಥ್ಯ ಹೆಚ್ಚಳ ಕಾರಣ ಬಿಚ್ಚಿಟ್ಟ ರಾಜನಾಥ್ ಸಿಂಗ್
- Sports
ಆರ್ಸಿಬಿ vs ಆರ್ಆರ್: ಬೇಡದ ದಾಖಲೆಯನ್ನು ತನ್ನ ಹೆಸರಿಗೆ ಬರೆದುಕೊಂಡ ಆರ್ಸಿಬಿ ವೇಗಿ
- Finance
ಕಾರು, ಬೈಕು ಖರೀದಿಗೆ ಮುನ್ನ ಗಮನಿಸಿ, ಜೂನ್ 1ರಿಂದ ವಿಮೆ ಮೊತ್ತ ಏರಿಕೆ
- Movies
'ಪಾರು' ಸೀರಿಯಲ್ ನಟಿ ಸುಶ್ಮಿತಾ ರಾಮಕಲಾ ಸಿಕ್ಕಾಪಟ್ಟೆ ಸ್ಟೈಲಿಶ್!
- Lifestyle
ಈ 16 ಔಷಧಿಗಳನ್ನು ಪ್ರಿಸ್ಕ್ರಿಪ್ಷನ್ ಇಲ್ಲದೆ ಖರೀದಿಸಬಹುದು: ಸದ್ಯದಲ್ಲಿಯೇ ಬರಲಿದೆ ಈ ನಿಯಮ
- Automobiles
ಹೊಸ ಟ್ರಯಂಫ್ ಟೈಗರ್ 1200 ಅಡ್ವೆಂಚರ್ ಬೈಕ್ ವಿಶೇಷತೆಗಳು
- Education
KCET 2022 Syllabus : 2022ರ ಸಿಇಟಿ ಪರೀಕ್ಷೆಯ ಪಠ್ಯಕ್ರಮ ರಿಲೀಸ್
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಭಾರತದಲ್ಲಿ ವಿವೋ Y21A ಸ್ಮಾರ್ಟ್ಫೋನ್ ಬಿಡುಗಡೆ! ಬೆಲೆ ಎಷ್ಟು?
ಭಾರತದ ಮಾರುಕಟ್ಟೆಯಲ್ಲಿ ವಿವೋ ಕಂಪೆನಿ ತನ್ನ ಜನಪ್ರಿಯ ಸ್ಮಾರ್ಟ್ಫೋನ್ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್ಫೋನ್ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಭಾರತದಲ್ಲಿ ತನ್ನ ಹೊಸ ವಿವೋ Y21A ಸ್ಮಾರ್ಟ್ಫೋನ್ ಲಾಂಚ್ ಮಾಡಿದೆ. ಇನ್ನು ಈ ಹೊಸ ಸ್ಮಾರ್ಟ್ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದು ವಾಟರ್ಡ್ರಾಪ್-ಶೈಲಿಯ ಡಿಸ್ಪ್ಲೇ ನಾಚ್ ಅನ್ನು ಹೊಂದಿದೆ. ಜೊತೆಗೆ ಇದು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದ್ದು, 18W ವೇಗದ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ.

ಹೌದು, ವಿವೋ ಕಂಪೆನಿ ಭಾರತದಲ್ಲಿ ಹೊಸ ವಿವೋ Y21A ಸ್ಮಾರ್ಟ್ಫೋನ್ ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್ಫೋನ್ 6.51-ಇಂಚಿನ HD+ ಡಿಸ್ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ P22 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್ಪ್ಲೇ ರಚನೆ ಮತ್ತು ವಿಶೇಷ
ವಿವೋ Y21A ಸ್ಮಾರ್ಟ್ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.51 ಇಂಚಿನ ಹೆಚ್ಡಿ + ಡಿಸ್ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್ಪ್ಲೇ 20:9 ರಚನೆಯ ಅನುಪಾತವನ್ನು ಪಡೆದುಕೊಂಡಿದೆ. ಜೊತೆಗೆ ಈ ಡಿಸ್ಪ್ಲೇ 81.99 % ಸ್ಕ್ರೀನ್ ಟು ಬಾಡಿ ಅನುಪಾತವನ್ನು ಪಡೆದಿದೆ.

ಪ್ರೊಸೆಸರ್ ಯಾವುದು?
ವಿವೋ Y21A ಸ್ಮಾರ್ಟ್ಫೋನ್ ಮೀಡಿಯಾಟೆಕ್ ಹಿಲಿಯೋ P22 SoC ಪ್ರೊಸೆಸರ್ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ 1GB ತನಕ RAM ಅನ್ನು ವಿಸ್ತರಿಸುವ ಅವಕಾಶ ಕೂಡ ಹೊಂದಿದೆ. ಜೊತೆಗೆ ಮೈಕ್ರೋ ಎಸ್ಡಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಯಾವುದು?
ವಿವೋ Y21A ಸ್ಮಾರ್ಟ್ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇನ್ನು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಕ್ಯಾಮೆರಾ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ
ವಿವೋ Y21A ಸ್ಮಾರ್ಟ್ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ಡ್ಯುಯಲ್-ಬ್ಯಾಂಡ್ Wi-Fi, ಬ್ಲೂಟೂತ್ v5.0, FM ರೇಡಿಯೋ ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್, ಮ್ಯಾಗ್ನಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್ಪ್ರಿಂಟ್ ಸೆನ್ಸಾರ್ ಅನ್ನು ಕೂಡ ಪಡೆದುಕೊಂಡಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ವಿವೋ Y21A ಸ್ಮಾರ್ಟ್ಫೋನ್ ಏಕೈಕ 4GB RAM + 64GB ಸ್ಟೋರೇಜ್ ರೂಪಾಂತರಕ್ಕೆ 13,990ರೂ. ಬೆಲೆಯನ್ನು ಹೊಂದಿದೆ. ಇನ್ನು ಈ ಫೋನ್ ಡೈಮಂಡ್ ಗ್ಲೋ ಮತ್ತು ಮಿಡ್ನೈಟ್ ಬ್ಲೂ ಬಣ್ಣಗಳ ಆಯ್ಕೆಯಲ್ಲಿ ಬರುತ್ತದೆ. ಇದು ವಿವೋ ಇಂಡಿಯಾ ಇ-ಸ್ಟೋರ್ ಮತ್ತು ಪಾಲುದಾರ ರಿಟೇಲ್ ಸ್ಟೋರ್ ಮೂಲಕ ಖರೀದಿಸಲು ಲಭ್ಯವಿದೆ.
-
54,535
-
1,19,900
-
54,999
-
86,999
-
49,975
-
49,990
-
20,999
-
1,04,999
-
44,999
-
64,999
-
20,699
-
49,999
-
11,499
-
54,999
-
7,999
-
8,980
-
17,091
-
10,999
-
34,999
-
39,600
-
25,750
-
33,590
-
27,760
-
44,425
-
13,780
-
1,25,000
-
45,990
-
1,35,000
-
82,999
-
17,999