Home
ಸುದ್ದಿಜಾಲ

Vivo: ವಿವೋದ ಈ ಬಜೆಟ್‌ ಬೆಲೆಯ ಫೋನ್‌ಗೆ ಭರ್ಜರಿ ಆಫರ್; 64 GB ಸ್ಟೋರೇಜ್‌ ಆಯ್ಕೆ

ಸ್ಮಾರ್ಟ್‌ಫೋನ್‌ (Smartphone) ಮಾರುಕಟ್ಟೆಯಲ್ಲಿ ವಿವೋ ಫೋನ್‌ಗಳು ವಿಶೇಷ ಸ್ಥಾನ ಮಾನ ಪಡೆದುಕೊಂಡಿವೆ. ಈ ಫೋನ್‌ಗಳು ಪ್ರಮುಖವಾಗಿ ಕ್ಯಾಮೆರಾ ಫೀಚರ್ಸ್‌ಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದು, ಅದರಂತೆ ಸಾಕಷ್ಟು ಹೊಸ ಹೊಸ ಫೋನ್‌ಗಳನ್ನು ಅನಾವರಣ ಮಾಡಿದೆ. ಈ ನಡುವೆ ಈಗ ಕಳೆದ ವರ್ಷದ ಲಾಂಚ್‌ ಆದ ಬಜೆಟ್‌ ಬೆಲೆಯ ವಿವೋ (vivo) ಫೋನ್‌ಗೆ ಇ-ಕಾಮರ್ಸ್‌ ಸೈಟ್‌ನಲ್ಲಿ ಅಫರ್ ಘೋಷಣೆ ಮಾಡಲಾಗಿದೆ.

ಹೌದು, ವಿವೋ Y21E ಸ್ಮಾರ್ಟ್‌ಫೋನ್‌ಗೆ (Vivo Y21E smartphone) ಇದೀಗ ಆಫರ್ ನೀಡಲಾಗಿದೆ. ಈ ಫೋನ್ 64 GB ಆಯ್ಕೆ ಪಡೆದುಕೊಂಡಿದ್ದು, 5000 mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಪ್ಯಾಕ್‌ ಆಗಿದೆ. ಪ್ರಮುಖವಾಗಿ ಈ ಫೋನ್‌ ಬಜೆಟ್‌ ಬೆಲೆಯಲ್ಲಿ ಬೇಕು ಅನ್ನೋರಿಗೆ ಸೂಕ್ತವಾಗಿದೆ. ಹಾಗಿದ್ರೆ, ಈ ಫೋನ್‌ನ ಪ್ರಮುಖ ಫೀಚರ್ಸ್‌ ಹಾಗೂ ಆಫರ್ ಬೆಲೆ ವಿವರ, ಬ್ಯಾಂಕ್‌ ಕೊಡುಗೆಗಳು ಏನು ಅನ್ನೋ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿಕೊಡಲಾಗಿದೆ ಓದಿರಿ

ವಿವೋದ ಈ ಬಜೆಟ್‌ ಬೆಲೆಯ ಫೋನ್‌ಗೆ ಭರ್ಜರಿ ಆಫರ್; 64 GB ಸ್ಟೋರೇಜ್‌ ಆಯ್ಕೆ

ವಿವೋ Y21E ಅಫರ್ ವಿವರ: ಈ ಸ್ಮಾರ್ಟ್‌ಫೋನ್ 16,990 ರೂ.ಗಳ ಸಾಮಾನ್ಯ ಬೆಲೆ ಹೊಂದಿದೆ. ಆದರೆ ನೀವು ಇದನ್ನು ಈಗ ಕೇವಲ 10,635 ರೂ.ಗಳ ಆಫರ್ ಬೆಲೆಗೆ ಖರೀದಿ ಮಾಡಬಹುದು. ಯಾಕೆಂದರೆ ಫ್ಲಿಪ್‌ಕಾರ್ಟ್‌ (Flipkart) ಈ ಫೋನ್‌ಗೆ 37% ರಿಯಾಯಿತಿ ಘೋಷಣೆ ಮಾಡಿದೆ. ಇಷ್ಟೇ ಅಲ್ಲದೆ ಈ ವೇಳೆ ಬ್ಯಾಂಕ್‌ ಆಫರ್ ಸಹ ಇದ್ದು, ಪರಿಣಾಮ ಇನ್ನೂ ಕಡಿಮೆ ಬೆಲೆಗೆ ಈ ಫೋನ್‌ ಅನ್ನು ಕೊಂಡುಕೊಳ್ಳಬಹುದಾಗಿದೆ.

ಇನ್ನು ಈ ಫೋನ್‌ಗೆ ಇರುವ ಬ್ಯಾಂಕ್‌ ಆಪರ್ ಗಮನಿಸುವುದಾದರೆ ಇದನ್ನು PNB ಕ್ರೆಡಿಟ್ ಕಾರ್ಡ್‌ ಬಳಕೆ ಮಾಡಿಕೊಂಡು ಖರೀದಿ ಮಾಡಿದ್ರೆ 10% ತ್ವರಿತ ರಿಯಾಯಿತಿ, ಬ್ಯಾಂಕ್ ಆಫ್ ಬರೋಡಾ ಕ್ರೆಡಿಟ್ ಕಾರ್ಡ್ ವ್ಯವಹಾರ ಮೇಲೆ 10% ರಿಯಾಯಿತಿ, ಬ್ಯಾಂಕ್ ಆಫ್ ಬರೋಡಾ ಕ್ರೆಡಿಟ್ ಕಾರ್ಡ್ ಇಎಮ್‌ಐ ವ್ಯವಹಾರ ಮೇಲೆ ಮೇಲೆ 10% ರಿಯಾಯಿತಿ, ಫ್ಲಿಪ್‌ಕಾರ್ಟ್‌ ಆಕ್ಸಿಸ್‌ ಬ್ಯಾಂಕ್‌ ಕ್ರೆಡಿಟ್‌ ಕಾರ್ಡ್‌ ನಲ್ಲಿ 5% ಕ್ಯಾಶ್‌ಬ್ಯಾಕ್ ನೊಂದಿಗೆ ತಿಂಗಳಿಗೆ 374 ರೂ.ಗಳ ಇಎಮ್‌ಐ ಆಯ್ಕೆ ಸಹ ಇದೆ. ಹಾಗಿದ್ರೆ, ಬನ್ನಿ ಈ ಫೋನ್‌ನ ಫೀಚರ್ಸ್‌ ಕಡೆ ಗಮನಹರಿಸೋಣ.

ವಿವೋದ ಈ ಬಜೆಟ್‌ ಬೆಲೆಯ ಫೋನ್‌ಗೆ ಭರ್ಜರಿ ಆಫರ್; 64 GB ಸ್ಟೋರೇಜ್‌ ಆಯ್ಕೆ

ವಿವೋ Y21E ಡಿಸ್‌ಪ್ಲೇ ಮಾಹಿತಿ: ಈ ಫೋನ್ 651 ಇಂಚಿನ IPS LCD ಡಿಸ್‌ಪ್ಲೇ ಹೊಂದಿದ್ದು, ಇದು 20:9 ಸ್ಕ್ರೀನ್ ಟು ಬಾಡಿ ಅನುಪಾತದೊಂದಿಗೆ 720 x 1600 ಪಿಕ್ಸೆಲ್‌ ಸ್ಕ್ರೀನ್ ರೆಸಲ್ಯೂಶನ್‌ ಸಾಮರ್ಥ್ಯ ಪಡೆದಿದೆ. ಜೊತೆಗೆ 270 ppi ಸಾಂದ್ರತೆ ಇದ್ದು, ಈ ಮೂಲಕ ಸಾಮಾನ್ಯ ವಿಡಿಯೋ ವೀಕ್ಷಣೆ ಹಾಗೂ ಗೇಮಿಂಗ್‌ ಅನುಭವ ಪಡೆಯಬಹುದು.

ವಿವೋ Y21E ಪ್ರೊಸೆಸರ್‌ ವಿವರ: ಈ ಫೋನ್ ಕ್ವಾಲ್ಕಾಮ್ SM6225 ಸ್ನಾಪ್ಡ್ರಾಗನ್ 680 4G (6 nm) ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್ 11, ಫನ್‌ಟಚ್ 12 ಓಎಸ್ ಅನ್ನು ರನ್‌ ಮಾಡಲಿದೆ. ಇದರೊಂದಿಗೆ ಅಡ್ರಿನೊ 610 GPU ಬಲ ಇದ್ದು, 64GB ಇಂಟರ್‌ಸ್ಟೋರೇಜ್‌ ಹಾಗೂ 3GB RAM ಆಯ್ಕೆ ಪಡೆದಿದೆ. ಈ ಬೆಲೆಯಲ್ಲಿ ಸ್ಟೋರೇಜ್‌ ವಿಚಾರಕ್ಕೆ ಬಂದರೆ ಸ್ವಲ್ಪ ಕಡಿಮೆ ಎನ್ನಬಹುದು. ಹಾಗೆಯೇ ಹೆಚ್ಚಿನ ಸ್ಟೋರೇಜ್‌ ಆಯ್ಕೆಗಾಗಿ ಮೈಕ್ರೋ ಎಸ್‌ಡಿ ಕಾರ್ಡ್ ಬಳಕೆ ಮಾಡಲು ಅನುಕೂಲ ಮಾಡಿಕೊಡಲಾಗಿದೆ.

ವಿವೋ Y21E ಕ್ಯಾಮೆರಾ ರಚನೆ: ಈ ಫೋನ್ ಡ್ಯುಯಲ್‌ ರಿಯರ್ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದೆ. ಅದರಲ್ಲಿ 13 ಮೆಗಾಪಿಕ್ಸೆಲ್‌ ಮುಖ್ಯ ಕ್ಯಾಮೆರಾ ಹಾಗೂ 2 ಮೆಗಾಪಿಕ್ಸೆಲ್‌ ಸೆಕೆಂಡರಿ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದೆ. ಜೊತೆಗೆ ಈ ಸೆನ್ಸರ್‌ಗಳು ಎಲ್ಇಡಿ ಫ್ಲ್ಯಾಶ್ ಫೀಚರ್ಸ್‌, 1080p@30fps ವಿಡಿಯೋ ರೆಕಾರ್ಡಿಂಗ್‌ ಸಾಮರ್ಥ್ಯ ಹೊಂದಿದ್ದು, ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ 8 ಮೆಗಾಪಿಕ್ಸೆಲ್‌ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ.

ವಿವೋದ ಈ ಬಜೆಟ್‌ ಬೆಲೆಯ ಫೋನ್‌ಗೆ ಭರ್ಜರಿ ಆಫರ್; 64 GB ಸ್ಟೋರೇಜ್‌ ಆಯ್ಕೆ

ವಿವೋ Y21E ಬ್ಯಾಟರಿ ಸಾಮರ್ಥ್ಯ: 5000 mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಹೊಂದಿದ್ದು, ಇದು 18W ವೈರ್ಡ್ ಚಾರ್ಜಿಂಗ್ ಹಾಗೂ 2.5W ರಿವರ್ಸ್ ವೈರ್ಡ್ ಚಾರ್ಜಿಂಗ್‌ ಬೆಂಬಲ ಪಡೆದಿಕೊಂಡಿದೆ. ಉಳಿದಂತೆ ವೈ-ಫೈ 802.11 a/b/g/n/ac, ಡ್ಯುಯಲ್-ಬ್ಯಾಂಡ್, ವೈ ಫೈ ಡೈರೆಕ್ಟ್, ಬ್ಲೂಟೂತ್ ಆವೃತ್ತಿ 5.0, A2DP, ಜಿಪಿಎಸ್‌, ಗ್ಲೋನಾಸ್, ಗೆಲಿಲಿಯೋ, ಎಫ್‌ಎಮ್‌ ರೇಡಿಯೋ, ಯುಎಸ್‌ಬಿ ಟೈಪ್- ಸಿ 2.0 ಕನೆಕ್ಟಿವಿಟಿ ಬೆಂಬಲ ಹೊಂದಿದೆ.

Best Mobiles in India

English summary
Vivo Y21E smartphone is now offered. The phone comes with a 64 GB option and is packed with a 5000 mAh battery.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+