ದೇಶಿ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ವಿವೋ Y21G ಸ್ಮಾರ್ಟ್‌ಫೋನ್!
ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ವಿವೋ ಕಂಪೆನಿ ಹೆಸರುವಾಸಿಯಾಗಿದೆ. ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಗ್ರಾಹಕರಿಂದ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಭಾರತದಲ್ಲಿ ತನ್ನ ಹೊಸ ವಿವೋ Y21G ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಇದು ಮೀಡಿಯಾಟೆಕ್ MT6769 ಪ್ರೊಸೆಸರ್ ಬಲವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ 6.51 ಇಂಚಿನ LCD ಡಿಸ್‌ಪ್ಲೇಯನ್ನು ಹೊಂದಿದೆ. ಜೊತೆಗೆ 13-ಮೆಗಾಪಿಕ್ಸೆಲ್ ಡ್ಯುಯಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ.

ಹೌದು, ವಿವೋ ಕಂಪೆನಿ ಭಾರತದಲ್ಲಿ ಹೊಸ ವಿವೋ Y21G ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಪಾಕೆಟ್ ಸ್ನೇಹಿ ಸ್ಮಾರ್ಟ್‌ಫೋನ್ ಆಗಿದ್ದು, 5,000mAh ಬ್ಯಾಟರಿಯನ್ನು ಒಳಗೊಂಡಿದೆ. ಹಾಗೆಯೇ 4GB + 64GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ ಡೈಮಂಡ್ ಗ್ಲೋ ಮತ್ತು ಮಿಡ್‌ನೈಟ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ವಿವೋ Y21G ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.51 ಇಂಚಿನ HD+ LCD ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ರಚನೆಯ ಅನುಪಾತ 20:9 ರಷ್ಟಿದೆ. ಇದು 270ppi ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿದೆ.

ಪ್ರೊಸೆಸರ್ ಯಾವುದು?
ಈ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ MT6769 ಪ್ರೊಸೆಸರ್ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಆಧಾರಿತ ಫನ್‌ಟೌಚ್ OS 11.1 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇದಲ್ಲದೆ ಸ್ಮಾರ್ಟ್‌ಫೋನ್ ವಿಸ್ತೃತ RAM ಫೀಚರ್ಸ್ ಅನ್ನು ಹೊಂದಿದ್ದು, ಬಳಕೆಯಾಗದ ಸ್ಟೋರೇಜ್ ಬಳಸಿಕೊಂಡು 1GB ವರೆಗೆ ಮೆಮೊರಿಯನ್ನು ವಿಸ್ತರಿಸಲು ಬಳಕೆದಾರರಿಗೆ ಅವಕಾಶ ನೀಡುತ್ತದೆ. ಇದರೊಂದಿಗೆ ಮೆಮೊರಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ
ವಿವೋ Y21G ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾವನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ f/2.2 ಲೆನ್ಸ್ ಮತ್ತು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ
ವಿವೋ Y21G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G, Wi-Fi, ಬ್ಲೂಟೂತ್ v5 ಮತ್ತು USB ಟೈಪ್-C ಪೋರ್ಟ್ ಅನ್ನು ಒಳಗೊಂಡಿವೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್, ಪ್ರಾಕ್ಸಿಮಿಟಿ ಸೆನ್ಸಾರ್, ಇ-ದಿಕ್ಸೂಚಿ ಮತ್ತು ಗೈರೊಸ್ಕೋಪ್ ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ವಿವೋ Y21G ಸ್ಮಾರ್ಟ್‌ಫೋನ್ ಏಕೈಕ 4GB + 64GB ಸ್ಟೋರೇಜ್ ರೂಪಾಂತರಕ್ಕೆ 13,990ರೂ. ಬೆಲೆ ಹೊಂದಿದೆ. ಈ ಸ್ಮಾರ್ಟ್‌ಫೋನ್ ಡೈಮಂಡ್ ಗ್ಲೋ ಮತ್ತು ಮಿಡ್‌ನೈಟ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಮಾರಾಟವಾಗಲಿದೆ.

ಇದಲ್ಲದೆ ಕೆಲ ದಿನಗಳ ಹಿಂದೆ ವಿವೋ ಸ್ಮಾರ್ಟ್‌ಫೋನ್ ಕಂಪೆನಿ ಹೊಸ ವಿವೋ Y33s 5G ಸ್ಮಾರ್ಟ್‌ಫೋನ್ ಅನ್ನು ಚೀನಾ ಮೊಬೈಲ್ ಮಾರುಕಟ್ಟೆಯಲ್ಲಿ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ ಡೈಮೆನ್ಸಿಟಿ 700 SoC ಪ್ರೊಸೆಸರ್ ವೇಗವನ್ನು ಪಡೆದುಕೊಂಡಿದೆ. 4GB + 128GB, 6GB + 128GB ಮತ್ತು 8GB + 128GB ಸ್ಟೋರೇಜ್ ವೇರಿಯಂಟ್‌ನ ಆಯ್ಕೆಗಳನ್ನು ಒಳಗೊಂಡಿದೆ. ಇದಕ್ಕೆ ಪೂರಕವಾಗಿ 5,000mAh ಬ್ಯಾಟರಿ ಬ್ಯಾಕ್‌ಅಪ್ ಹೊಂದಿದೆ.


Click it and Unblock the Notifications








