ವಿವೋ Y21T ಸ್ಮಾರ್ಟ್‌ಫೋನ್ ಬಿಡುಗಡೆ! ವಿಶೇಷತೆ ಏನು?
ವಿವೋ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಅನೇಕ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ವಿವೋ Y21T ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿದೆ. ಇದು 6.51-ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ.

ಹೌದು, ವಿವೋ ಕಂಪೆನಿ ಹೊಸ ವಿವೋ Y21T ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾ ಪಡೆದುಕೊಂಡಿದೆ. ಜೊತೆಗೆ 5,000mAh ಬ್ಯಾಟರಿಯನ್ನು ಹೊಂದಿದ್ದು, ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ವಿಶೇಷತೆ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ
ವಿವೋ Y21T ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.51 ಇಂಚಿನ HD+ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 83.4% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಪಡೆದುಕೊಂಡಿದೆ. ಜೊತೆಗೆ ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದೆ.

ಪ್ರೊಸೆಸರ್ ಯಾವುದು?
ವಿವೋ Y21T ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಅಂಡ್ರಾಯ್ಡ್ 11 ನಲ್ಲಿ ಫನ್‌ಟಚ್ OS 12 ಟಾಪ್‌ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ
ವಿವೋ Y21T ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ f/1.8 ಲೆನ್ಸ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ f/2.4 ಮ್ಯಾಕ್ರೋ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಇತರೆ
ವಿವೋ Y21T ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi, ಬ್ಲೂಟೂತ್ v5, GPS/ A-GPS, FM ರೇಡಿಯೋ, USB ಟೈಪ್-C ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್ ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ವಿವೋ Y21T ಸ್ಮಾರ್ಟ್‌ಫೋನ್ 6GB + 128GB ಸ್ಟೋರೇಜ್ ರೂಪಾಂತರಕ್ಕಾಗಿ IDR 3,099,000 (ಸುಮಾರು 16,200ರೂ)ಬೆಲೆ ಹೊಂದಿದೆ. ಈ ಫೋನ್ ಆರಂಭದಲ್ಲಿ ಇಂಡೋನೇಷ್ಯಾದಲ್ಲಿ ಮಿಡ್‌ನೈಟ್ ಬ್ಲೂ ಮತ್ತು ಪರ್ಲ್ ವೈಟ್ ಬಣ್ಣಗಳಲ್ಲಿ ಮುಂಗಡ-ಆರ್ಡರ್‌ಗಳಿಗೆ ಲಭ್ಯವಿದೆ. ಇದು ಭಾರತದಲ್ಲಿ ಯಾವಾಗ ಬಿಡುಗಡೆ ಆಗಲಿದೆ ಎನ್ನುವುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಿಲ್ಲ.


Click it and Unblock the Notifications








