ಭಾರತದಲ್ಲಿ ವಿವೋ Y21T ಸ್ಮಾರ್ಟ್‌ಫೋನ್ ಲಾಂಚ್! ಬೆಲೆ ಎಷ್ಟು?
ವಿವೋ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಪ್ರಸಿದ್ಧಿ ಪಡೆದಿದೆ. ತನ್ನ ವಿಶೇಷ ಕ್ಯಾಮೆರಾ ಫೀಚರ್ಸ್ ಹೊಂದಿರುವ ಸ್ಮಾರ್ಟ್‌ಫೋನ್‌ಗಳಿಂದ ಸ್ಮಾರ್ಟ್‌ಫೋನ್ ಪ್ರಿಯರ ಮನಗೆದ್ದಿದೆ. ಸದ್ಯ ಇದೀಗ ತನ್ನ ಹೊಸ ವಿವೋ Y21T ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇದು ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್ ಆಗಿದ್ದು, ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ ಅನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ 4GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಆಯ್ಕೆಯಲ್ಲಿ ಲಭ್ಯವಾಗಲಿದೆ.

ಹೌದು, ವಿವೋ ಕಂಪೆನಿ ಭಾರತದಲ್ಲಿ ಹೊಸ ವಿವೋ Y21T ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಇದು 6.58 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 90Hz ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜ್ ಬೆಂಬಲಿಸಲಿದೆ. ಇನ್ನು ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50-ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದಿದೆ. ಹಾಗಾದ್ರೆ ವಿವೋ Y21T ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ವಿವೋ Y21T ಸ್ಮಾರ್ಟ್‌ಫೋನ್ 1080×2408 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಒಳಗೊಂಡ 6.58 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಬ್ಲೂ ಲೈಟ್ ಅನ್ನು ಫಿಲ್ಟರ್ ಮಾಡಲು ಡಿಸ್‌ಪ್ಲೇಯಲ್ಲಿ "ಐ ಪ್ರೊಟೆಕ್ಷನ್ ಮೋಡ್" ಅನ್ನು ಸಹ ಸೇರಿಸಲಾಗಿದೆ.

ಪ್ರೊಸೆಸರ್ ಹೇಗಿದೆ?
ವಿವೋ Y21T ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 680 SoC ಅನ್ನು ಒಳಗೊಂಡಿದೆ. ಇದು ವಿವೋ ಕಂಪನಿಯ ಫನ್‌ಟಚ್ ಓಎಸ್ 12 ಜೊತೆಗೆ ಆಂಡ್ರಾಯ್ಡ್ 11 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ ವರ್ಚುವಲ್ RAM ವಿಸ್ತರಣೆ ಮಾಡುವ ಅವಕಾಶವನ್ನು ಸಹ ಪಡೆದಿದೆ. ಇದಕ್ಕಾಗಿ 1GB ಐಡಲ್ ROM ಸ್ಪೇಸ್ ಅನ್ನು ಬಳಸಿಕೊಳ್ಳಲು ಅವಕಾಶ ನೀಡಿದೆ. ಚೀನಾದಲ್ಲಿ ಬಿಡುಗಡೆ ಆಗಿರುವ ಸ್ಮಾರ್ಟ್‌ಫೋನ್ 6GB RAM ಆಯ್ಕೆಯನ್ನು ಹೊಂದಿದೆ.

ಕ್ಯಾಮೆರಾ
ವಿವೋ Y21T ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಸಹ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಕ್ಯಾಮರಾ ಅಪ್ಲಿಕೇಶನ್ ವೈಯಕ್ತಿಕಗೊಳಿಸಿದ ಪೋರ್ಟ್ರೇಟ್ ಮೋಡ್, ಸೂಪರ್ HDR ಮತ್ತು ಸೂಪರ್ ನೈಟ್ ಮೋಡ್‌ನಂತಹ ಮೋಡ್‌ಗಳೊಂದಿಗೆ ಬರುತ್ತದೆ.

ಬ್ಯಾಟರಿ ಮತ್ತು ಇತರೆ
ವಿವೋ Y21T ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಯುಎಸ್‌ಬಿ ಟೈಪ್-ಸಿ ಮೂಲಕ 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಹಾಗೆಯೇ ರಿವರ್ಸ್ ಚಾರ್ಜಿಂಗ್‌ಗೆ ಬೆಂಬಲವನ್ನು ನೀಡುತ್ತದೆ ಎಂದು ಕಂಪನಿ ತಿಳಿಸಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿಡ್ಯುಯಲ್-ಬ್ಯಾಂಡ್ ವೈ-ಫೈ, ಬ್ಲೂಟೂತ್ v5, ಒಟಿಜಿ ಬೆಂಬಲದೊಂದಿಗೆ ಯುಎಸ್‌ಬಿ ಟೈಪ್-ಸಿ ಪೋರ್ಟ್ ಮತ್ತು ಡ್ಯುಯಲ್-ಸಿಮ್ ಕಾರ್ಡ್ ಟ್ರೇ ಸೇರಿವೆ. ಹಾಗೆಯೇ 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಸಹ ಹೊಂದಿದೆ. ಇದಲ್ಲದೆ ಈ ಫೋನ್ ಪವರ್ ಬಟನ್‌ನಲ್ಲಿ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ವಿವೋ Y21T ಸ್ಮಾರ್ಟ್‌ಫೋನ್ ಬೆಲೆಯನ್ನು 16,490(MRP ರೂ. 19,990)ರೂ.ಗಳಿಗೆ ನಿಗಧಿಪಡಿಸಲಾಗಿದೆ. ಈ ಫೋನ್ ಮಿಡ್ನೈಟ್ ಬ್ಲೂ ಮತ್ತು ಪರ್ಲ್ ವೈಟ್ ಬಣ್ಣದ ಆಯ್ಕೆಗಳಲ್ಲಿ ಬರುತ್ತದೆ. ಇದನ್ನು ವಿವೋ ಇಂಡಿಯಾ ಇ-ಸ್ಟೋರ್ ಮತ್ತು ಚಿಲ್ಲರೆ ಚಾನೆಲ್‌ಗಳ ಮೂಲಕ ಸ್ಮಾರ್ಟ್‌ಫೋನ್ ಖರೀದಿಸಲು ಲಭ್ಯವಿದೆ.


Click it and Unblock the Notifications








