Vivo: ವಿವೋದ ಈ ಫೋನ್‌ಗೆ ಬರೋಬ್ಬರಿ 29% ರಿಯಾಯಿತಿ! 50MP ಕ್ಯಾಮೆರಾ... 128GB ಸ್ಟೋರೇಜ್
ಸ್ಮಾರ್ಟ್‌ಫೋನ್ (Smartphone) ಮಾರುಕಟ್ಟೆಯಲ್ಲಿ ವಿವೋ X100 ಮತ್ತು X100 ಪ್ರೊ ಫೋನ್‌ಗಳು ಬಹಳ ಸದ್ದು ಮಾಡುತ್ತಿವೆ. ಈಗಾಗಲೇ ಈ ಫೋನ್‌ಗಳ ಪ್ರಮುಖ ಫೀಚರ್ಸ್ ಲೀಕ್ ಆಗಿದ್ದು, ವಿವೋ ಪ್ರಿಯರು ಯಾವಾಗ ಈ ಫೋನ್ ಖರೀದಿ ಮಾಡುವುದು ಎಂದು ಕಾತುರದಿಂದ ಕಾದು ಕುಳಿತಿದ್ದಾರೆ. ಈ ನಡುವೆ ವಿವೋದ ಬಜೆಟ್ ಬೆಲೆಯ ಫೋನ್‌ಗೆ ಆಕರ್ಷಕ ಡಿಸ್ಕೌಂಟ್ ನೀಡಲಾಗಿದೆ.
ಹೌದು, ಸ್ಮಾರ್ಟ್‌ಫೋನ್ ವಿಭಾಗದಲ್ಲಿ ಹೆಚ್ಚು ಸೇಲ್ ಆಗುತ್ತಿರುವ ವಿವೋ Y22 ಸ್ಮಾರ್ಟ್‌ಫೋನ್‌ಗೆ (Vivo Y22 smartphone) ಭರ್ಜರಿ ಆಫರ್ ನೀಡಲಾಗಿದೆ. ಈ ಫೋನ್ 60 Hz ರಿಫ್ರೆಶ್ ರೇಟ್‌ನೊಂದಿಗೆ 50MP ಪ್ರೈಮರಿ ಕ್ಯಾಮೆರಾ ಹಾಗೂ 128GB ಇಂಟರ್ ಸ್ಟೋರೇಜ್ ಆಯ್ಕೆ ಪಡೆದಿದೆ. ಹಾಗಿದ್ರೆ, ಈ ಸ್ಮಾರ್ಟ್‌ಫೋನ್‌ನ ಪ್ರಮುಖ ಫೀಚರ್ಸ್ ಹಾಗೂ ಆಫರ್ ಬೆಲೆ ವಿವರ ಏನು ಅನ್ನೋದನ್ನು ತಿಳಿಸಿಕೊಡಲಾಗಿದೆ ಓದಿರಿ.

ವಿವೋ Y22 ಡಿಸ್‌ಪ್ಲೇ ವಿವರ: ಈ ಫೋನ್ ಅನ್ನು ಖರೀದಿ ಮಾಡುವ ಮುನ್ನ ಇದರ ಪ್ರಮುಖ ಫೀಚರ್ಸ್ ಬಗ್ಗೆ ತಿಳಿಯೋಣ. ಅದರಂತೆ ಈ ಫೋನ್ 1612 x 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.55 ಇಂಚಿನ ಐಪಿಎಸ್ ಎಲ್‌ಸಿಡಿ ಡಿಸ್‌ಪ್ಲೇ ಹಾಗೂ 60 Hz ರಿಫ್ರೆಶ್ ರೇಟ್ ಪಡೆದುಕೊಂಡಿದೆ. ಜೊತೆಗೆ 270ppi ಪಿಕ್ಸೆಲ್ ಸಾಂದ್ರತೆಯನ್ನು ನೀಡಲಿದ್ದು, ಸೆಲ್ಫಿ ಕ್ಯಾಮೆರಾ ಉದ್ದೇಶದಿಂದ ವಾಟರ್‌ಡ್ರಾಪ್ ನಾಚ್‌ನಲ್ಲಿ ಈ ಫೋನ್ ಕಾಣಿಸಿಕೊಂಡಿದೆ.
ವಿವೋ Y22 ಪ್ರೊಸೆಸರ್ ವಿವರ: ಈ ಫೋನ್ ಮೀಡಿಯಾಟೆಕ್ ಹಿಲಿಯೋ G70 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಮಾಲಿ G52 MC2 GPU ಜೊತೆಗೆ ನೀವು ಅತ್ಯುತ್ತಮ ಗೇಮಿಂಗ್ ಹಾಗೂ ವಿಡಿಯೋ ವೀಕ್ಷಣೆ ಅನುಭವವನ್ನು ಪಡೆದುಕೊಳ್ಳಬಹುದಾಗಿದೆ. ಅದರಲ್ಲೂ ಈ ಸಿಪಿಯು ಆಕ್ಟಾ-ಕೋರ್ (ಕಾರ್ಟೆಕ್ಸ್ A55 ಮತ್ತು ಕಾರ್ಟೆಕ್ಸ್ A75) CPU ನಿಂದ ರನ್ ಆಗಲಿದೆ. ಉಳಿದಂತೆ 4GB RAM ಆಯ್ಕೆ ಹಾಗೂ 128GB ಇಂಟರ್ ಸ್ಟೋರೇಜ್ ಆಯ್ಕೆ ಪಡೆದುಕೊಂಡಿದೆ.

ವಿವೋ Y22 ಕ್ಯಾಮೆರಾ ರಚನೆ: ಇನ್ನು ಈ ಸ್ಮಾರ್ಟ್‌ಫೋನ್‌ನ ಕ್ಯಾಮೆರಾ ವಿಚಾರಕ್ಕೆ ಬಂದರೆ ಡ್ಯುಯಲ್ ರಿಯರ್ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದೆ. ಅದರಲ್ಲಿ 50 ಮೆಗಾಪಿಕ್ಸೆಲ್ ಪ್ರೈಮರಿ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ಮ್ಯಾಕ್ರೋ ಸೆನ್ಸರ್ ಆಯ್ಕೆ ಪಡೆದಿದ್ದು, ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಆಯ್ಕೆ ನೀಡಲಾಗಿದೆ. ಈ ಮೂಲಕ ಅತ್ಯುತ್ತಮ ಫೋಟೋಗಳನ್ನು ಸೆರೆಹಿಡಿಯಬಹುದಾಗಿದೆ. ಉಳಿದಂತೆ ಈ ಫೋನ್ 18W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ 5000mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದಿದೆ.
ವಿವೋ Y22 ಆಫರ್ ವಿವರ: ಈ ಫೋನ್‌ನ ಪ್ರಮುಖ ವಿಚಾರಕ್ಕೆ ಬಂದರೆ ಇದು 18,999 ರೂ.ಗಳ ಸಾಮಾನ್ಯ ಬೆಲೆ ಹೊಂದಿದ್ದು, ನೀವೀಗ ಇದನ್ನು 13,499 ರೂ.ಗಳ ಆಫರ್ ಬೆಲೆಗೆ ಖರೀದಿ ಮಾಡಬಹುದಾಗಿದೆ. ಯಾಕೆಂದರೆ ಅಮೆಜಾನ್‌ನಲ್ಲಿ ಈ ಫೋನ್‌ಗೆ 29% ರಿಯಾಯಿತಿ ನೀಡಲಾಗಿದೆ. ಇದರೊಂದಿಗೆ ವಿನಿಮಯ ಆಫರ್ ಹಾಗೂ ಬ್ಯಾಂಕ್ ಆಫರ್ ಮೂಲಕ 12,700 ವರೆಗೆ ಉಳಿತಾಯ ಮಾಡಬಹುದಾಗಿದೆ.

ಇನ್ನು ಬ್ಯಾಂಕ್ ಆಫರ್ ವಿಚಾರಕ್ಕೆ ಬಂದರೆ ಈ ಫೋನ್ ಯೆಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಇಎಮ್‌ಐ ವ್ಯವಹಾರದಲ್ಲಿ 1000 ವರೆಗೆ ಅಥವಾ 10% ತ್ವರಿತ ರಿಯಾಯಿತಿ, ಯೆಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಇಎಮ್‌ಐ ಅಲ್ಲದ ವ್ಯವಹಾರದ ಮೇಲೆ 10% ತ್ವರಿತ ರಿಯಾಯಿತಿ, ಜೆ ಮತ್ತು ಕೆ ಬ್ಯಾಂಕ್ ಕ್ರೆಡಿಟ್ ಕಾರ್ಡ್ ನಾನ್ ಇಎಂಐ ವ್ಯವಹಾರದ ಮೇಲೆ 1000 ವರೆಗೆ ಅಥವಾ 10% ತ್ವರಿತ ರಿಯಾಯಿತಿ ಸಿಗಲಿದೆ. ಇಷ್ಟೇ ಅಲ್ಲದೆ ಇನ್ನೂ ಹಲವಾರು ರೀತಿಯ ಆಫರ್‌ಗಳು ಲಭ್ಯ ಇವೆ.


Click it and Unblock the Notifications








