Home
ಸುದ್ದಿಜಾಲ

ಬಿಡುಗಡೆಗೆ ಸಿದ್ಧವಾಗಿದೆ ವಿವೋ Y27 ಸ್ಮಾರ್ಟ್‌ಫೋನ್! ಸೆಲ್ಫಿ ಪ್ರಿಯರ ಮನ ಗೆಲ್ಲೋದು ಗ್ಯಾರಂಟಿ!

ವಿವೋ ಕಂಪೆನಿಯ ಸ್ಮಾರ್ಟ್‌ಫೋನ್‌ಗಳು ಸೆಲ್ಫಿ ಪ್ರಿಯರ ನೆಚ್ಚಿನ ಆಯ್ಕೆಯಾಗಿವೆ. ಇದಕ್ಕೆ ಭಾರತವೂ ಕೂಡ ಹೊರತಾಗಿಲ್ಲ, ಭಾರತದ ಮಾರುಕಟ್ಟೆಯಲ್ಲಿ ವಿವೋ ಸ್ಮಾರ್ಟ್‌ಫೋನ್‌ಗಳಿಗೆ ಭಾರಿ ಬೇಡಿಕೆಯಿದೆ. ಇದೀಗ ವಿವೋ ಕಂಪೆನಿ ಶೀಘ್ರದಲ್ಲೇ ಹೊಸ ವಿವೋ Y27 ಸ್ಮಾರ್ಟ್‌ಫೋನ್‌ ಪರಿಚಯಿಸಲು ಸಿದ್ಧತೆ ನಡೆಸಿದೆ.

ಹೌದು, ಶೀಘ್ರದಲ್ಲೇ ಭಾರತದ ಮಾರುಕಟ್ಟೆಗೆ ವಿವೋ Y ಸರಣಿಯಲ್ಲಿ ಹೊಸ ವಿವೋ Y27 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಲಿದೆ. ಈ ಸ್ಮಾರ್ಟ್‌ಫೋನ್‌ಗೆ ಸಂಬಂಧಿಸಿದಂತೆ ಕಂಪೆನಿಯು ಅಧಿಕೃತವಾಗಿ ಯಾವುದೇ ಫೀಚರ್ಸ್‌ ಬಹಿರಂಗಪಡಿಸಿಲ್ಲವಾದರೂ, ಆನ್‌ಲೈನ್‌ನಲ್ಲಿ ಈ ಫೋನ್‌ನ ವಿನ್ಯಾಸ ಹಾಗೂ ಫೀಚರ್ಸ್‌ಗಳು ಬಹಿರಂಗಗೊಂಡಿವೆ. ಹಾಗಾದ್ರೆ ವಿವೋ Y27 ಸ್ಮಾರ್ಟ್‌ಫೋನ್‌ನ ಫೀಚರ್ಸ್‌ ನಿರೀಕ್ಷೆ ಏನಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಬಿಡುಗಡೆಗೆ ಸಿದ್ಧವಾಗಿದೆ ವಿವೋ Y27 ಸ್ಮಾರ್ಟ್‌ಫೋನ್! ಮನ ಗೆಲ್ಲೋದು ಗ್ಯಾರಂಟಿ!

ವಿವೋ Y27 ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ರಚನೆ
ವಿವೋ Y27 ಸ್ಮಾರ್ಟ್‌ಫೋನ್ 6.5 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1600 x 720 ಪಿಕ್ಸೆಲ್‌ ಸ್ಕ್ರೀನ್ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿ ಬರಲಿದೆ ಎನ್ನಲಾಗಿದೆ. ಡಿಸ್‌ಪ್ಲೇ LCD ಸ್ಕ್ರೀನ್‌ ಹೊಂದಿರಲಿದೆ ಎಂದು ವರದಿಯಾಗಿದೆ.

ವಿವೋ Y27 ಪ್ರೊಸೆಸರ್‌ ಸಾಮರ್ಥ್ಯ
ವಿವೋ Y27 ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G85 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎಂದು ಅಂದಾಜಿಸಲಾಗಿದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆಯಲ್ಲಿ ಬರಲಿದೆ.

ವಿವೋ Y27 ಕ್ಯಾಮೆರಾ ಸೆಟ್‌ಅಪ್‌ ಹೇಗಿದೆ?
ವಿವೋ Y27 ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾದೊಂದಿಗೆ ಬರುವ ನಿರೀಕ್ಷೆಯಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಇರಲಿದೆ ಎಂದು ಅಂದಾಜಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ ಎಂದು ವರದಿಯಾಗಿದೆ.

ವಿವೋ Y27 ಬ್ಯಾಟರಿ ಮತ್ತು ಸಾಮರ್ಥ್ಯ
ವಿವೋ Y27 ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿರಬಹುದು. ಇದು ವೇಗದ ಚಾರ್ಜಿಂಗ್‌ ಬೆಂಬಲಿಸಲಿದ್ದು, ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಬೆಂಬಲಿಸಲಿದೆ.

ಬಿಡುಗಡೆಗೆ ಸಿದ್ಧವಾಗಿದೆ ವಿವೋ Y27 ಸ್ಮಾರ್ಟ್‌ಫೋನ್! ಮನ ಗೆಲ್ಲೋದು ಗ್ಯಾರಂಟಿ!

ವಿವೋ Y27 ಬೆಲೆ ಮತ್ತು ಲಭ್ಯತೆ
ವಿವೋ Y27 ಸ್ಮಾರ್ಟ್‌ಫೋನ್‌ ಜುಲೈ 2023 ರಲ್ಲಿ ಬಿಡುಗಡೆಯಾಗಲಿದೆ ಎಂದು ವರದಿಯಾಗಿದೆ. ಈ ಸ್ಮಾರ್ಟ್‌ಫೋನ್‌ ಆರಂಭಿಕ ಬೆಲೆ ಸುಮಾರು 16,000 ರೂ. ಇರಬಹುದು ಎಂದು ಅಂದಾಜಿಸಲಾಗಿದೆ. ಇದನ್ನು ನೀವು ಡಾರ್ಕ್‌ ರೆಡ್, ಗ್ರೀನ್‌ ಮತ್ತು ಬ್ಲ್ಯಾಕ್‌ ಕಲರ್‌ ಆಯ್ಕೆಗಳಲ್ಲಿ ಖರೀದಿಸಲು ಅವಕಾಶ ಸಿಗಲಿದೆ ಎನ್ನಲಾಗಿದೆ.

Best Mobiles in India

English summary
Vivo Y27 4G smartphone Tipped to Launch in India in July
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+