ಭಾರತಕ್ಕೆ ಎಂಟ್ರಿ ಕೊಡಲು ವಿವೋ Y27 4G ತಯಾರಿ! ಏನೆಲ್ಲಾ ನಿರೀಕ್ಷಿಸಬಹುದು?
ವಿವೋ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗೆ ಭಾರತದಲ್ಲಿ ಭರ್ಜರಿ ಬೇಡಿಕೆಯಿದೆ. ಇದಕ್ಕೆ ತಕ್ಕಂತೆ ವಿವೋ ಕಂಪೆನಿ ಕೂಡ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಲೇ ಬಂದಿದೆ. ಅದರ ಮುಂದುವರೆದ ಭಾಗವಾಗಿ ಹೊಸ ವಿವೋ Y27 4G ಸ್ಮಾರ್ಟ್‌ಫೋನ್ ಎಂಟ್ರಿ ಕೊಡಲು ಸಿದ್ಧವಾಗಿದೆ. ಇದು ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ.
ಹೌದು, ವಿವೋ ಸಂಸ್ಥೆ ಹೊಸ ವಿವೋ Y27 4G ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಲು ತಯಾರಿ ನಡೆಸಿದೆ. ಈ ಸ್ಮಾರ್ಟ್‌ಫೋನ್‌ನ ವಿನ್ಯಾಸ ನಿರೂಪಣೆ, ಬಣ್ಣಗಳು ಮತ್ತು ಕೆಲವು ಪ್ರಮುಖ ಫೀಚರ್ಸ್ ವಿವರಗಳು ಇದೀಗ ಬಹಿರಂಗಗೊಂಡಿದೆ. ಈ ಮೂಲಕ ಬಿಡುಗಡೆಗೂ ಮುನ್ನವೇ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಹೊಸ ಸಂಚಲನವನ್ನು ಸೃಷ್ಟಿಸಿದೆ. ಹಾಗಾದ್ರೆ ವಿವೋ Y27 4G ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ವಿವೋ Y27 4G ಡಿಸ್‌ಪ್ಲೇ ರಚನೆ ಹೇಗಿರಬಹುದು?
ವಿವೋ Y27 4G ಸ್ಮಾರ್ಟ್‌ಫೋನ್ 6.64 ಇಂಚಿನ IPS LCD ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿರಲಿದೆ ಎನ್ನಲಾಗಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ ಈ ಡಿಸ್‌ಪ್ಲೇ 600 ನೀಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಒಳಗೊಂಡಿರಲಿದೆ ಎಂದು ಹೇಳಲಾಗಿದೆ.
ವಿವೋ Y27 4G ಪ್ರೊಸೆಸರ್ ಸಾಮರ್ಥ್ಯ ಯಾವುದಿರಬಹುದು?
ವಿವೋ Y27 4G ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ 6020 5G SoC ಪ್ರೊಸೆಸರ್ ವೇಗವನ್ನು ಹೊಂದಿರಲಿದೆ. ಇದು ಆಂಡ್ರಾಯ್ಡ್ 13 ಆಧಾರಿತ ಫನ್‌ಟೌಚ್ OS 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿರಲಿದೆ. ಇದಲ್ಲದೆ RAM ಅನ್ನು 6GB ವರೆಗೆ ವಿಸ್ತರಿಸಬಹುದಾಗಿದೆ.
ವಿವೋ Y27 4G ಕ್ಯಾಮೆರಾ ಸೆಟ್‌ಅಪ್ ವಿನ್ಯಾಸ ಏನಿರಬಹುದು?
ವಿವೋ Y27 4G ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಲಿದೆ ಎಂಬ ನಿರೀಕ್ಷೆಯಿದೆ.

ವಿವೋ Y27 4G ಬ್ಯಾಟರಿ ಮತ್ತು ಇತರೆ ಫೀಚರ್ಸ್?
ವಿವೋ Y27 4G ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 44W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸುವ ಸಾಧ್ಯತೆಯಿದೆ.
ವಿವೋ Y27 4G ಬೆಲೆ ಮತ್ತು ಲಭ್ಯತೆ
ವಿವೋ Y27 4G ಸ್ಮಾರ್ಟ್‌ಫೋನ್ ಕೈಗೆಟಕುವ ಬೆಲೆಯಲ್ಲಿ ಬರುವ ನಿರೀಕ್ಷೆಯಿದೆ. ಇನ್ನು ಈ ಸ್ಮಾರ್ಟ್‌ಫೋನ್ ಶೀಘ್ರದಲ್ಲೇ ಬಿಡುಗಡೆಯಾಗುವ ಸಾಧ್ಯತೆಯಿದ್ದು, ಲಾಂಚ್ ಡೇಟ್ ಹತ್ತಿರ ಬಂದಾಗ ಇದರ ಇನ್ನಷ್ಟು ವಿವರಗಳು ಬಹಿರಂಗವಾಗಬಹುದು ಎಂದು ವರದಿಯಾಗಿದೆ.
ಇದಲ್ಲದೆ ಇತ್ತೀಚಿಗೆ ವಿವೋ ಕಂಪೆನಿ ಹೊಸ ವಿವೋ Y36 ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿತ್ತು. ಈ ಸ್ಮಾರ್ಟ್‌ಫೋನ್ 6.64 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದ್ದು, 1,080x2,388 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇದು ಆಕ್ಟಾ-ಕೋರ್ 6nm ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 13 ಆಧಾರಿತ ಫಂಟೌಚ್ OS 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.
ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದಲ್ಲದೆ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದರೊಂದಿಗೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಸೂಪರ್ ನೈಟ್ ಮೋಡ್, ಮಲ್ಟಿ ಸ್ಟೈಲ್ ಪೋರ್ಟ್ರೇಟ್, ಮತ್ತು ಬೊಕೆ ಫ್ಲೇರ್ ಪೋರ್ಟ್ರೇಟ್ ಸೇರಿದಂತೆ ವಿವಿಧ ಮೋಡ್‌ಗಳನ್ನು ಬೆಂಬಲಿಸಲಿದೆ.


Click it and Unblock the Notifications








