ಮತ್ತೆ ಹೊಸ ಫೋನ್ ಲಾಂಚ್ ಮಾಡಿದ ವಿವೋ!..ಬಜೆಟ್ ಬೆಲೆಗೆ ಲಭ್ಯ!
ಪ್ರಮುಖ ಮೊಬೈಲ್ ಸಂಸ್ಥೆಗಳಲ್ಲಿ ಒಂದಾದ ವಿವೋ ಕಂಪನಿಯು ಇದೀಗ ಹೊಸದಾಗಿ ವಿವೋ Y27 5G ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿದೆ. ಈ ಫೋನ್ ಬಜೆಟ್ ಮಾದರಿಯ ಫೀಚರ್ಸ್‌ಗಳನ್ನು ಒಳಗೊಂಡಿದ್ದು, ಆಕರ್ಷಕ ಲುಕ್ ಪಡೆದಿದೆ. ಇನ್ನು ಈ ಫೋನ್ ಮೀಡಿಯಾ ಟೆಕ್ ಆಕ್ಟಾ-ಕೋರ್ 6nm ಡೈಮೆನ್ಸಿಟಿ 6020 SoC ಪ್ರೊಸೆಸರ್ ಪವರ್ ಅನ್ನು ಪಡೆದಿದೆ.
ಹೌದು, ವಿವೋ ಸಂಸ್ಥೆಯು ನೂತನವಾಗಿ ವಿವೋ Y27 ಸ್ಮಾರ್ಟ್‌ಫೋನ್ ಅನಾವರಣ ಮಾಡಿದೆ. ಇದು 4GB/6GB RAM + 128 GB ಆಂತರೀಕ ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ. ಹಾಗೆಯೇ 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಪ್ರಾಥಮಿಕ ಕ್ಯಾಮೆರಾ ಅನ್ನು ಒಳಗೊಂಡಿದೆ. ಸೈಡ್ ಮೌಂಟ್ ಫಿಂಗರ್ ಸೆನ್ಸಾರ್ ಆಯ್ಕೆ ಅನ್ನು ಈ ಫೋನ್ ಹೊಂದಿದೆ.

ಇದರೊಂದಿಗೆ ಈ ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದೆ. ಹಾಗೆಯೇ ಇತ್ತೀಚಿನ ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ ಸಹ ಹೊಂದಿದೆ. ಇನ್ನು ಮುಂಭಾಗದಲ್ಲಿ 8 ಮೆಗಾ ಪಿಕ್ಸಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾ ಒದಗಿಸಲಾಗಿದೆ. ಇನ್ನುಳಿದಂತೆ ವಿವೋ Y27 5G ಸ್ಮಾರ್ಟ್‌ಫೋನ್ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ವಿವೋ Y27 ಮೊಬೈಲ್ ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ : ವಿವೋ Y27 ಸ್ಮಾರ್ಟ್‌ಫೋನ್ 6.5 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಹೊಂದಿದೆ. ಈ ಡಿಸ್‌ಪ್ಲೇ 1600 x 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿ ಇದೆ. ಡಿಸ್‌ಪ್ಲೇ LCD ಸ್ಕ್ರೀನ್ ಹೊಂದಿದ್ದು, ವಾಟರ್ ಡ್ರಾಪ್ ನಾಚ್ ಮಾದರಿಯನ್ನು ಇದು ಪಡೆದಿದೆ.
ವಿವೋ Y27 ಮೊಬೈಲ್ ಪ್ರೊಸೆಸರ್ ಸಾಮರ್ಥ್ಯ ಏನು : ವಿವೋ Y27 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಆಕ್ಟಾ-ಕೋರ್ 6nm ಡೈಮೆನ್ಸಿಟಿ 6020 SoC ಪ್ರೊಸೆಸರ್ ಬಲದಲ್ಲಿ ಕಾರ್ಯನಿರ್ವಹಿಸಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಸಪೋರ್ಟ್ ಸಹ ಪಡೆದಿದೆ. ಹಾಗೆಯೇ 4GB/6GB RAM + 128 GB ಆಂತರೀಕ ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದ್ದು, ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸುವ ಆಯ್ಕೆ ಸಹ ಇದೆ.
ವಿವೋ Y27 ಮೊಬೈಲ್ ಕ್ಯಾಮೆರಾ ರಚನೆ ಮಾಹಿತಿ : ವಿವೋ Y27 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆಯನ್ನು ಇದು ಪಡೆದುಕೊಂಡಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದ್ದು, ಸೆಕೆಂಡರಿ ಕ್ಯಾಮೆರಾವು 2 ಮೆಗಾ ಪಿಕ್ಸಲ್ ಸೆನ್ಸಾರ್ ಬಲದಲ್ಲಿ ಇದೆ. ಇನ್ನು ಈ ಸ್ಮಾರ್ಟ್‌ಫೋನ್ 8 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ.
ವಿವೋ Y27 ಮೊಬೈಲ್ ಬ್ಯಾಟರಿ ಮತ್ತು ಇತರೆ ಸೌಲಭ್ಯ : ವಿವೋ Y27 ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದೆ. ಇದಕ್ಕೆ ಬೆಂಬಲವಾಗಿ 15W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಸಹ ಪಡೆದುಕೊಂಡಿದೆ.ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಸೌಲಭ್ಯಗಳು ಇವೆ.
ವಿವೋ Y27 ಮೊಬೈಲ್ ಬೆಲೆ ಮತ್ತು ಕಲರ್ ಆಯ್ಕೆ ಮಾಹಿತಿ : ವಿವೋ Y27 ಮೊಬೈಲ್‌ನ ಬೆಲೆಯ ಬಗ್ಗೆ ಮಾಹಿತಿ ಹೊರಹಾಕಿಲ್ಲ. ಅಂದಹಾಗೆ ಈ ಫೋನ್ ಮೈಸ್ಟಿಕ್ ಬ್ಲ್ಯಾಕ್ ಹಾಗೂ ಸಾಟಿನ್ ಪರ್ಪಲ್ ಕಲರ್ ಆಯ್ಕೆಗಳಲ್ಲಿ ಗ್ರಾಹಕರಿಗೆ ಲಭ್ಯ ಆಗಲಿದೆ.


Click it and Unblock the Notifications








