ವಿವೋದ ಈ ಎರಡು ಜನಪ್ರಿಯ ಫೋನ್‌ಗಳ ಬೆಲೆಯಲ್ಲಿ ಭರ್ಜರಿ ಇಳಿಕೆ!
ವಿವೋ ಸಂಸ್ಥೆಯು ಭಿನ್ನ ಶ್ರೇಣಿಯಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಗ್ರಾಹಕರಿಂದ ಸೈ ಎನಿಸಿಕೊಂಡಿದೆ. ವಿವೋ ಸಂಸ್ಥೆಯು ತನ್ನ ವಿವೋ Y27 ಮತ್ತು ವಿವೋ T2 (Vivo Y27 ಮತ್ತು Vivo T2) ಸ್ಮಾರ್ಟ್‌ಫೋನ್‌ಗಳ ಬೆಲೆಯಲ್ಲಿ ಭರ್ಜರಿ ಬೆಲೆ ಇಳಿಕೆ ತಿಳಿಸಿದ್ದು, ವಿವೋ ಮೊಬೈಲ್ ಪ್ರಿಯರಿಗೆ ಸಖತ್ ಖುಷಿ ಎನಿಸಿದೆ.
ಹೌದು, ವಿವೋ ಸಂಸ್ಥೆಯು ತನ್ನ ವಿವೋ Y27 ಮತ್ತು ವಿವೋ T2 ಫೋನ್‌ಗಳ ಬೆಲೆಯಲ್ಲಿ 1,000ರೂ. ಗಳ ಬೆಲೆ ಇಳಿಕೆ ತಿಳಿಸಿದೆ. ಹಾಗೆಯೇ ಸದ್ಯದಲ್ಲೇ ಸಂಸ್ಥೆಯು ವಿವೋ Y200 5G ಫೋನಿನಲ್ಲಿ 8GB RAM + 256GB ಸ್ಟೋರೇಜ್ ವೇರಿಯಂಟ್ ಅನ್ನು ಪರಿಚಯಿಸಲಿದೆ.

ಬೆಲೆ ಇಳಿಕೆಯಿಂದಾಗಿ ವಿವೋ Y27 ಫೋನ್ 8GB + 128GB ವೇರಿಯಂಟ್ 11,999ರೂ. ಗಳಿಗೆ ಖರೀದಿಗೆ ಲಭ್ಯ. ಇದರೊಂದಿಗೆ ಕೆಲವು ಆಯ್ದ ಬ್ಯಾಂಕ್ ಕೊಡುಗೆ ಸಹ ಸಿಗಲಿದೆ. ಅದೇ ರೀತಿ ವಿವೋ T2 ಫೋನ್ 6GB + 128GB ವೇರಿಯಂಟ್ 15,999ರೂ. ಗಳಿಗೆ ಹಾಗೂ 8GB + 128GB ವೇರಿಯಂಟ್ 17,999ರೂ. ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಹಾಗಾದರೇ ಈ ಎರಡು ವಿವೋ ಫೋನ್‌ಗಳ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ವಿವೋ Y27 ಮೊಬೈಲ್ - ಫೀಚರ್ಸ್
ವಿವೋ Y27 ಮೊಬೈಲ್ 6.5 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಹೊಂದಿದೆ. ಈ ಡಿಸ್‌ಪ್ಲೇ 1600 x 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಇದು ಮೀಡಿಯಾ ಟೆಕ್ ಹೆಲಿಯೊ G85 SoC ಪ್ರೊಸೆಸರ್ ಪವರ್ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಓಎಸ್ ಬೆಂಬಲವನ್ನು ಸಹ ಹೊಂದಿದೆ.
ಇನ್ನು ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಆಗಿದ್ದು, ಹಾಗೆಯೆ ಸೆಕೆಂಡರಿ ಕ್ಯಾಮೆರಾವು 2 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇದಲ್ಲದೆ ಮುಂಭಾಗದಲ್ಲಿ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಬಲದ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ. ಈ ಮೊಬೈಲ್ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, ಇದಕ್ಕೆ ಅನುಗುಣವಾಗಿ 44W ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಸಹ ಒಳಗೊಂಡಿದೆ.

ವಿವೋ T2 5G ಮೊಬೈಲ್ - ಫೀಚರ್ಸ್
ವಿವೋ T2 5G ಫೋನ್ 6.38 ಇಂಚಿನ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಹಾಗೆಯೇ ಇದು ಸ್ನಾಪ್‌ಡ್ರಾಗನ್ 695 5G SoC ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಅಲ್ಲದೇ ಎಸ್‌ಡಿ ಕಾರ್ಡ್ ಮೂಲಕ ಮೆಮೊರಿ ವಿಸ್ತರಿಸಲು ಅವಕಾಶ ಇದೆ.
ಹಾಗೆಯೇ ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ನಲ್ಲಿ ಪೋರ್ಟ್ರೇಟ್, ಮೈಕ್ರೋ, ಪನೋರಮಾ, ಸ್ಲೋ ಮೋಷನ್, ಡ್ಯುಯಲ್ ವ್ಯೂ ವೀಡಿಯೋ ಮತ್ತು ಡಬಲ್ ಎಕ್ಸ್‌ಪೋಸರ್ ಅನ್ನು ಸಪೋರ್ಟ್ ಇವೆ. ಹಾಗೆಯೇ 4500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ, ಇದು 44W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.


Click it and Unblock the Notifications








