Home
ಸುದ್ದಿಜಾಲ

ಮಾರುಕಟ್ಟೆಯಲ್ಲಿ ಭಾರೀ ಸದ್ದು ಮಾಡಿದ್ದ ಈ VIVO ಫೋನ್‌ ಬೆಲೆಯಲ್ಲಿ ಸಖತ್ ಇಳಿಕೆ!

ಇ ಕಾಮರ್ಸ್‌ ದೊಡ್ಡಣ್ಣ ಫ್ಲಿಪ್‌ಕಾರ್ಟ್‌ ಸ್ಮಾರ್ಟ್‌ಫೋನ್‌ಗಳಿಗೆ ಒಂದಿಲ್ಲೊಂದು ಸ್ಪೆಷಲ್‌ ರಿಯಾಯಿತಿ ನೀಡುತ್ತ ಸಾಗಿದೆ. ಇನ್ನು ಯಾವುದಾದರೂ ವಿಶೇಷ ದಿನಗಳು ಬಂದಾಗ ಇನ್ನಷ್ಟು ಆಕರ್ಷಕ ರಿಯಾಯಿತಿ ಲಭ್ಯ ಮಾಡುತ್ತದೆ. ಸದ್ಯ ವಿವೋ ಸಂಸ್ಥೆಯ ವಿವೋ Y27 (vivo Y27) ಮೊಬೈಲ್‌ ಭರ್ಜರಿ ಬೆಲೆ ಇಳಿಕೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಈ ಮೊಬೈಲ್‌ ಮೀಡಿಯಾ ಟೆಕ್‌ ಹಿಲಿಯೋ G85 SoC ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯ ಮಾಡುತ್ತದೆ.

ಹೌದು, ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತನ್ನ ವೆಬ್‌ಸೈಟ್‌ನಲ್ಲಿ ವಿವೋ ಸಂಸ್ಥೆಯ ವಿವೋ Y27 (vivo Y27) ಮೊಬೈಲ್‌ ಶೇ. 31% ರಷ್ಟು ನೇರ ಡಿಸ್ಕೌಂಟ್‌ ಪಡೆದುಕೊಂಡಿದೆ. ಈ ಮೊಬೈಲ್‌ನ 6GB RAM + 128 GB ವೇರಿಯಂಟ್‌ ಆಫರ್‌ನಲ್ಲಿ 12,980 ರೂ. ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದರ ಜೊತೆಗೆ ಹೆಚ್ಚುವರಿಯಾಗಿ ಗ್ರಾಹಕರಿಗೆ ಆಯ್ದ ಬ್ಯಾಂಕ್‌ಗಳ ಆಫರ್‌ ಸಹ ಲಭ್ಯ.

ಮಾರುಕಟ್ಟೆಯಲ್ಲಿ ಭಾರೀ ಸದ್ದು ಮಾಡಿದ್ದ ಈ VIVO ಫೋನ್‌ ಬೆಲೆಯಲ್ಲಿ ಸಖತ್ ಇಳಿಕೆ!

ಇದರೊಂದಿಗೆ ವಿವೋ Y27 ಮೊಬೈಲ್‌ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದೆ. ಹಾಗೆಯೇ ಇತ್ತೀಚಿನ ಆಂಡ್ರಾಯ್ಡ್‌ 13 ಓಎಸ್‌ ಸಪೋರ್ಟ್ ಸಹ ಹೊಂದಿದೆ. ಇನ್ನು ಈ ಫೋನಿನ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಪಡೆದಿದ್ದು, ಮುಂಭಾಗದಲ್ಲಿ 8 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾ ಒದಗಿಸಲಾಗಿದೆ. ಇನ್ನುಳಿದಂತೆ ವಿವೋ Y27 5G ಸ್ಮಾರ್ಟ್‌ಫೋನ್‌ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವಿವೋ Y27 - ಫೀಚರ್ಸ್‌

ವಿವೋ Y27 ಮೊಬೈಲ್‌ 6.5 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಹೊಂದಿದೆ. ಹಾಗೆಯೇ ಈ ಡಿಸ್‌ಪ್ಲೇ 1600 x 720 ಪಿಕ್ಸೆಲ್‌ ಸ್ಕ್ರೀನ್ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿ ಇದೆ. ಡಿಸ್‌ಪ್ಲೇ LCD ಸ್ಕ್ರೀನ್‌ ಹೊಂದಿದ್ದು, ವಾಟರ್‌ ಡ್ರಾಪ್‌ ನಾಚ್‌ ಮಾದರಿಯನ್ನು ಇದು ಪಡೆದಿದೆ.

ವಿವೋ Y27 ಮೊಬೈಲ್‌ ಮೀಡಿಯಾ ಟೆಕ್‌ ಹಿಲಿಯೋ G85 SoC ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಇದು ಕೆಲಸ ನಿರ್ವಹಿಸಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 13 ಸಪೋರ್ಟ್‌ ಸಹ ಪಡೆದಿದೆ. ಹಾಗೆಯೇ ಈ ಫೋನ್‌ 4GB / 6GB RAM + 128 GB ಆಂತರೀಕ ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದಿದ್ದು, ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸುವ ಆಯ್ಕೆ ಸಹ ಇದೆ.

ವಿವೋ Y27 ಮೊಬೈಲ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಇದು ಪಡೆದುಕೊಂಡಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದ್ದು, ಸೆಕೆಂಡರಿ ಕ್ಯಾಮೆರಾವು 2 ಮೆಗಾ ಪಿಕ್ಸಲ್‌ ಸೆನ್ಸಾರ್‌ ಬಲದಲ್ಲಿ ಇದೆ. ಇನ್ನು ಈ ಸ್ಮಾರ್ಟ್‌ಫೋನ್‌ 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ. ಹಿಂಭಾಗದಲ್ಲಿ ಸ್ಟೈಲಿಶ್‌ ಡ್ಯುಯಲ್‌ ರಿಂಗ್ ಡಿಸೈನ್‌ ಸೌಲಭ್ಯ ಪಡೆದಿದೆ.

ವಿವೋ Y27 ಮೊಬೈಲ್‌ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದೆ. ಇದಕ್ಕೆ ಬೆಂಬಲವಾಗಿ 15W ಫಾಸ್ಟ್‌ ಚಾರ್ಜಿಂಗ್‌ ಸಪೋರ್ಟ್‌ ಸಹ ಪಡೆದುಕೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಸೌಲಭ್ಯಗಳು ಇವೆ. ವಿವೋ Y27 ಮೊಬೈಲ್‌ ಮೈಸ್ಟಿಕ್‌ ಬ್ಲ್ಯಾಕ್‌ ಹಾಗೂ ಸಾಟಿನ್‌ ಪರ್ಪಲ್‌ ಕಲರ್‌ ಆಯ್ಕೆಗಳಲ್ಲಿ ಗ್ರಾಹಕರಿಗೆ ಲಭ್ಯ ಆಗಲಿದೆ.

Best Mobiles in India

English summary
vivo Y27 now available at biggest price drop price. check out more details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+