Vivo: ಭಾರಿ ಬೇಡಿಕೆಯಲ್ಲಿರುವ ವಿವೋದ ಈ ಸ್ಮಾರ್ಟ್‌ಫೋನ್ ಇದೀಗ 32% ಡಿಸ್ಕೌಂಟ್ ಪಡೆದಿದೆ!
ಕಳೆದ ವರ್ಷ ಮಾರುಕಟ್ಟೆಗೆ ಎಂಟ್ರಿ ನೀಡಿದ್ದ ವಿವೋ Y27 ಸ್ಮಾರ್ಟ್‌ಫೋನ್ ಇದೀಗ ಭರ್ಜರಿ ಡಿಸ್ಕೌಂಟ್ ಪಡೆದುಕೊಂಡಿದೆ. ಮಾರುಕಟ್ಟೆಯಲ್ಲಿ ಭಾರಿ ಡಿಮ್ಯಾಂಡ್ ಇರುವ ಈ ಸ್ಮಾರ್ಟ್‌ಫೋನ್ ಡಿಸ್ಕೌಂಟ್ ಪಡೆದುಕೊಂಡಿರುವುದು ಗ್ರಾಹಕರನ್ನು ಅಚ್ಚರಿಗೆ ದೂಡಿದೆ. ಈ ಸ್ಮಾರ್ಟ್‌ಫೋನ್ ಅತ್ಯಾಕರ್ಷಕ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.
ಹೌದು, Vivo Y27 ಸ್ಮಾರ್ಟ್‌ಫೋನ್ ಅಮೆಜಾನ್ ತಾಣದಲ್ಲಿ ಬರೋಬ್ಬರಿ 32% ಡಿಸ್ಕೌಂಟ್ ಪಡೆದುಕೊಂಡಿದೆ. ಇಂದಿಗೂ ಕೂಡ ಈ ಸ್ಮಾರ್ಟ್‌ಫೋನ್ ಮೇಲಿನ ಡಿಮ್ಯಾಂಡ್ ಕಡಿಮೆ ಆಗಿಲ್ಲ. ಇಂತಹ ಸನ್ನಿವೇಶದಲ್ಲಿ ಡಿಸ್ಕೌಂಟ್ ಪಡೆದಿರುವುದು ಸ್ಮಾರ್ಟ್‌ಫೋನ್ ಪ್ರಿಯರಿಗೆ ಖುಷಿ ನೀಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಹೆಲಿಯೋ G85 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗಾದ್ರೆ ವಿವೋ Y27 ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ವಿವೋ Y27 ಮೇಲೆ ಬಿಗ್ ಆಫರ್
ವಿವೋ Y27 ಸ್ಮಾರ್ಟ್‌ಫೋನ್ ಅನ್ನು ಅಮೆಜಾನ್ ತಾಣದಲ್ಲಿ 18,999ರೂ ಬೆಲೆಗೆ ಪಟ್ಟಿ ಮಾಡಲಾಗಿದೆ. ಆದರೆ ಈ ಸ್ಮಾರ್ಟ್‌ಫೋನ್ ಮೇಲೆ ಬರೋಬ್ಬರಿ 32% ಡಿಸ್ಕೌಂಟ್ ನೀಡಲಾಗ್ತಿದೆ. ಆದರಿಂದ ಇದರ ಬೆಲೆ ಇದೀಗ ಕೇವಲ 12,999ರೂ ಆಗಿದೆ. ಇದಲ್ಲದೆ ವಿವಿಧ ಬ್ಯಾಂಕ್ ಕಾರ್ಡ್‌ಗಳ ಮೂಲಕ ಖರೀದಿಸುವ ಗ್ರಾಹಕರಿಗೆ ಹೆಚ್ಚುವರಿ ರಿಯಾಯಿತಿಯನ್ನು ಸಹ ನೀಡಲಾಗುತ್ತಿದೆ. ಇದರೊಂದಿಗೆ ಎಕ್ಸ್‌ಚೇಂಜ್ ಆಆಫರ್ ಕೂಡ ಲಭ್ಯವಿದ್ದು, ಸುಲಭ ಇಎಂಐ ಆಯ್ಕೆಗಳನ್ನು ಸಹ ನೀಡಲಾಗುತ್ತಿದೆ.
ವಿವೋ Y27 ಫೀಚರ್ಸ್ ಹೇಗಿದೆ?
ವಿವೋ Y27 ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1080 x 2388 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿದೆ. ಇನ್ನು ಡಿಸ್‌ಪ್ಲೇ LCD ಸ್ಕ್ರೀನ್ ಹೊಂದಿದ್ದು, ವಾಟರ್ ಡ್ರಾಪ್ ನಾಚ್ ವಿನ್ಯಾಸವನ್ನು ಪಡೆದಿದೆ. ಈ ಡಿಸ್‌ಪ್ಲೇ 85.4% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿದೆ. ಇದು 395 ppi ಸಾಂದ್ರತೆಯನ್ನು ಪಡೆದಿದೆ.

ವಿವೋ Y27 ಪ್ರೊಸೆಸರ್ ಕಾರ್ಯವೈಖರಿ
ವಿವೋ Y27 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹೆಲಿಯೊ G85 SoC ಪ್ರೊಸೆಸರ್‌ನಲ್ಲಿ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಓಎಸ್ ಬೆಂಬಲವನ್ನು ಸಹ ಹೊಂದಿದೆ. ಹಾಗೆಯೇ 6GB RAM + 128 GB ಇಂಟರ್ ಸ್ಟೋರೇಜ್ ವೇರಿಯಂಟ್ ಆಯ್ಕೆ ಅನ್ನು ಪಡೆದಿದೆ. ಜೊತೆಗೆ ಮೆಮೊರಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸುವ ಆಯ್ಕೆ ಪಡೆದಿದೆ.
ವಿವೋ Y27 ಕ್ಯಾಮೆರಾ ಸೆಟಪ್ ಹೇಗಿದೆ?
ವಿವೋ Y27 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದರ ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಇದಲ್ಲದೆ ಮುಂಭಾಗದಲ್ಲಿ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ.

ವಿವೋ Y27 ಫೋನ್ ಬ್ಯಾಟರಿ ಮತ್ತು ಇತರೆ
ವಿವೋ Y27 ಮೊಬೈಲ್ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪಡೆದಿದೆ. ಇದು 44W ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಸಹ ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಸೌಲಭ್ಯದ ಆಯ್ಕೆಗಳು ಸಹ ಇವೆ.
ವಿವೋ Y27 ಫೋನ್ ಬೆಲೆ ಮತ್ತು ಲಭ್ಯತೆ
ವಿವೋ Y27 ಸ್ಮಾರ್ಟ್‌ಫೋನ್ 6GB RAM + 128GB ಸ್ಟೋರೇಜ್ ಆಯ್ಕೆಯು ಇದೀಗ ಡಿಸ್ಕೌಂಟ್ ಪಡೆದುಕೊಂಡಿರುವುದರಿಂದ 12,999ರೂ ಬೆಲೆಗೆ ಮಾರಾಟವಾಗುತ್ತಿದೆ. ಪ್ರಸ್ತುತ ಈ ಫೋನ್ ಬರ್ಗಂಡಿ ಬ್ಲಾಕ್, ಸೀ ಬ್ಲೂ ಮತ್ತು ಗಾರ್ಡನ್ ಗ್ರೀನ್ ಬಣ್ಣದ ಆಯ್ಕೆಗಳಲ್ಲಿ ದೊರೆಯಲಿದೆ.


Click it and Unblock the Notifications








