Home
ಸುದ್ದಿಜಾಲ

ವಿವೋದ ಈ ಸ್ಮಾರ್ಟ್‌ಫೋನ್‌ಗೆ ಸಿಗ್ತಾ ಇದೆ ಭರ್ಜರಿ ಡಿಸ್ಕೌಂಟ್‌! ಆಫರ್‌ ಮಿಸ್‌ ಮಾಡ್ಕೋಬೇಡಿ!

ಅಮೆಜಾನ್‌ ತಾಣದಲ್ಲಿ ವಿವೋ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗೆ ಭರ್ಜರಿ ಡಿಸ್ಕೌಂಟ್‌ ಲಭ್ಯವಾಗ್ತಿದೆ. ಸೆಲ್ಫಿ ಪ್ರಿಯರ ನೆಚ್ಚಿನ ಬ್ರ್ಯಾಂಡ್‌ ಎನಿಸಿಕೊಂಡಿರುವ ವಿವೋ ಫೋನ್‌ಗಳಿಗೆ ಆಫರ್‌ ಸಿಗ್ತಾ ಇರೋದು ಎಲ್ಲರ ಹುಬ್ಬೇರುವಂತೆ ಮಾಡಿದೆ. ಅದರಲ್ಲೂ ಇತ್ತೀಚಿಗೆ ಸಿಕ್ಕಾಪಟ್ಟೆ ಸೌಂಡ್‌ ಮಾಡಿದ್ದ ವಿವೋ Y27 ಸ್ಮಾರ್ಟ್‌ಫೋನ್‌ ಡಿಸ್ಕೌಂಟ್‌ ಪಡೆದುಕೊಂಡಿರುವುದು ವಿಶೇಷ ವಾಗಿದೆ.

ಹೌದು, ವಿವೋ Y27 ಸ್ಮಾರ್ಟ್‌ಫೋನ್‌ ಮೇಲೆ ಅಮೆಜಾನ್‌ನಲ್ಲಿ 26% ಡಿಸ್ಕೌಂಟ್‌ ನೀಡಲಾಗ್ತಿದೆ. ಇದರಿಂದ ಇದರ ಬೆಲೆಯಲ್ಲಿ ಭಾರಿ ಇಳಿಕೆಯಾಗಿದ್ದು, ಕೈಗೆಟಕುವ ಬೆಲೆಯಲ್ಲಿ ಫೋನ್‌ ಖರೀದಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹೆಲಿಯೊ G85 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುವುದು ವಿಶೇಷ. ಹಾಗಾದ್ರೆ ಡಿಸ್ಕೌಂಟ್‌ ನಂತರ ಈ ಫೋನ್‌ನ ಬೆಲೆ ಎಷ್ಟು? ಇದರ ಫೀಚರ್ಸ್‌ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ವಿವೋದ ಈ ಫೋನ್‌ಗೆ ಸಿಗ್ತಾ ಇದೆ ಭರ್ಜರಿ ಡಿಸ್ಕೌಂಟ್‌! ಆಫರ್‌ ಮಿಸ್‌ ಮಾಡ್ಕೋಬೇಡಿ!

ಡಿಸ್ಕೌಂಟ್‌ ನಂತರದ ಬೆಲೆ ಹೇಗಿದೆ?
ವಿವೋ Y27 ಸ್ಮಾರ್ಟ್‌ಫೋನ್‌ ಅನ್ನು ಅಮೆಜಾನ್‌ ತಾಣದಲ್ಲಿ 18,999ರೂ ಬೆಲೆಗೆ ಪಟ್ಟಿ ಮಾಡಲಾಗಿದೆ. ಇದರ ಮೇಲೆ 26% ಡಿಸ್ಕೌಂಟ್‌ ನೀಡುತ್ತಿರುವುದರಿಂದ ಇದರ ಬೆಲೆ ಇದೀಗ 13,999ರೂ ಆಗಿದೆ. ಇದರೊಂದಿಗೆ ಬ್ಯಾಂಕ್‌ ಆಫರ್‌ಗಳು ಕೂಡ ಲಭ್ಯವಾಗುತ್ತಿದ್ದು, ಇದರ ಬೆಲೆಯಲ್ಲಿ ಇನ್ನಷ್ಟು ಇಳಿಕೆಯನ್ನು ಕಾಣಬಹುದಾಗಿದೆ. ಜೊತೆಗೆ ನೋ ಕಾಸ್ಟ್‌ ಇಎಂಐ, ಎಕ್ಸ್‌ಚೇಂಜ್‌ ಆಫರ್‌ಗಳನ್ನು ಸಹ ಪಡೆದುಕೊಳ್ಳಬಹುದಾಗಿದೆ.

ವಿವೋ Y27 ಡಿಸ್‌ಪ್ಲೇ ವಿನ್ಯಾಸ ಹೇಗಿದೆ?
ವಿವೋ Y27 ಸ್ಮಾರ್ಟ್‌ಫೋನ್‌ 6.64 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇನ್ನು ಡಿಸ್‌ಪ್ಲೇ 1080 x 2388 ಪಿಕ್ಸೆಲ್‌ ಸ್ಕ್ರೀನ್ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇದು ವಾಟರ್‌ ಡ್ರಾಪ್‌ ನಾಚ್‌ ವಿನ್ಯಾಸವನ್ನು ಪಡೆದುಕೊಂಡಿದೆ. ಈ ಡಿಸ್‌ಪ್ಲೇ 395 ppi ಸಾಂದ್ರತೆಯನ್ನು ಒಳಗೊಂಡಿದ್ದು, 85.4% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ.

ವಿವೋದ ಈ ಫೋನ್‌ಗೆ ಸಿಗ್ತಾ ಇದೆ ಭರ್ಜರಿ ಡಿಸ್ಕೌಂಟ್‌! ಆಫರ್‌ ಮಿಸ್‌ ಮಾಡ್ಕೋಬೇಡಿ!

ವಿವೋ Y27 ಫೋನ್‌ ಪ್ರೊಸೆಸರ್‌ ಯಾವುದು?
ವಿವೋ Y27 ಫೋನ್‌ ಮೀಡಿಯಾ ಟೆಕ್ ಹೆಲಿಯೊ G85 SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್‌ 13 ಓಎಸ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಅಲ್ಲದೆ ಸ್ಮಾರ್ಟ್‌ಫೋನ್‌ 6GB RAM + 128GB ಇಂಟರ್‌ ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಅನ್ನು ಪಡೆದಿದೆ. ಈ ಸ್ಮಾರ್ಟ್‌ಫೋನ್‌ ಯಾವುದೇ ಮೆಮೊರಿ ಕಾರ್ಡ್‌ ಸ್ಲಾಟ್‌ ಅನ್ನು ಹೊಂದಿಲ್ಲ.

ವಿವೋ Y27 ಫೋನ್‌ ಕ್ಯಾಮೆರಾ ಸೆಟ್‌ಅಪ್‌ ಏನಿದೆ?
ವಿವೋ Y27 ಫೋನ್‌ ಹಿಂಬಾಗದಲ್ಲಿ ಎರಡು ಕ್ಯಾಮೆರಾಗಳನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಆಗಿದ್ದು, ಎರಡನೇ ಕ್ಯಾಮೆರಾವು 2 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮುಂಭಾಗದಲ್ಲಿ 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ವಿವೋ Y27 ಫೋನ್‌ ಬ್ಯಾಟರಿ ಮತ್ತು ಇತರೆ ಸೌಲಭ್ಯ
ವಿವೋ Y27 ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದೆ. ಇದಕ್ಕೆ ಅನುಗುಣವಾಗಿ 44W ಫಾಸ್ಟ್‌ ಚಾರ್ಜಿಂಗ್‌ ಬೆಂಬಲವನ್ನು ಸಹ ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಸೌಲಭ್ಯದ ಆಯ್ಕೆಗಳು ಸಹ ಇವೆ.

ವಿವೋದ ಈ ಫೋನ್‌ಗೆ ಸಿಗ್ತಾ ಇದೆ ಭರ್ಜರಿ ಡಿಸ್ಕೌಂಟ್‌! ಆಫರ್‌ ಮಿಸ್‌ ಮಾಡ್ಕೋಬೇಡಿ!

ವಿವೋ Y27 ಫೋನ್‌ ಬೆಲೆ ಮತ್ತು ಲಭ್ಯತೆ
ವಿವೋ Y27 ಮೊಬೈಲ್‌ನ 6GB RAM + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಯ ಮೇಲೆ ಇದೀಗ ಡಿಸ್ಕೌಂಟ್‌ ಲಭ್ಯವಿರುವುದರಿಂದ ಇದರ ಬೆಲೆಯು 13,999ರೂ. ಆಗಿದೆ. ಈ ಸ್ಮಾರ್ಟ್‌ಫೋನ್‌ ಬರ್ಗಂಡಿ ಬ್ಲಾಕ್, ಸೀ ಬ್ಲೂ ಮತ್ತು ಗಾರ್ಡನ್ ಗ್ರೀನ್ ಬಣ್ಣದ ಆಯ್ಕೆಗಳಲ್ಲಿ ಗ್ರಾಹಕರಿಗೆ ಲಭ್ಯವಿದೆ.

Best Mobiles in India

English summary
vivo Y27 Smartphone received Massive discount in amazon
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+