Vivo: ಭಾರತದಲ್ಲಿ ಬಜೆಟ್ ಬೆಲೆಯ ವಿವೋ Y28 ಸ್ಮಾರ್ಟ್‌ಫೋನ್ ಲಾಂಚ್! 50 MP ಕ್ಯಾಮೆರಾ..
ವಿವೋ (Vivo) ಕೆಲವೇ ದಿನಗಳ ಅಂತರದಲ್ಲಿ ವಿವಿಧ ಆಯ್ಕೆಯ ಫೋನ್‌ಗಳನ್ನು ಅನಾವರಣ ಮಾಡುತ್ತಿದೆ. ಕೆಲವೇ ದಿನಗಳ ಹಿಂದೆ ವಿವೋ X100, ವಿವೋ X100 ಪ್ರೊ (Vivo X100, Vivo X100 Pro) ಸ್ಮಾರ್ಟ್‌ಫೋನ್‌ಗಳನ್ನು ಅನಾವರಣ ಮಾಡುವ ಮೂಲಕ ಭಾರತದಲ್ಲಿ ದೊಡ್ಡ ಸಂಚಲನವನ್ನೇ ಉಂಟು ಮಾಡಲಾಗಿತ್ತು. ಇದಾದ ನಂತರ ಈಗ ಮತ್ತೊಂದು ಹೊಸ ಬಜೆಟ್ ಬೆಲೆಯ ಫೋನ್ ಅನ್ನು ಅನಾವರಣ ಮಾಡಲಾಗಿದೆ.
ಹೌದು, ವಿವೋ ಇದೀಗ ಭಾರತದಲ್ಲಿ ವಿವೋ Y28 ಸ್ಮಾರ್ಟ್‌ಫೋನ್ (Vivo Y28 smartphone) ಅನ್ನು ಅನಾವರಣ ಮಾಡಿದೆ. ಈ ಸ್ಮಾರ್ಟ್‌ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಇದು ನಯವಾದ ವಿನ್ಯಾಸದೊಂದಿಗೆ ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ IP54 ರೇಟಿಂಗ್ ಅನ್ನು ಹೊಂದಿದೆ. ಹಾಗಿದ್ರೆ, ಈ ಸ್ಮಾರ್ಟ್‌ಫೋನ್‌ನ ಪ್ರಮುಖ ಫೀಚರ್ಸ್ ಹಾಗೂ ಭಾರತದಲ್ಲಿ ಇದರ ಬೆಲೆ ಹಾಗೂ ಲಭ್ಯತೆ ಬಗ್ಗೆ ತಿಳಿಯೋಣ ಬನ್ನಿ.

ವಿವೋ Y28 ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ಮಾಹಿತಿ: ಈ ಸ್ಮಾರ್ಟ್‌ಫೋನ್ 6.56 ಇಂಚಿನ ಹೆಚ್‌ಡಿ+ ಡಿಸ್‌ಪ್ಲೇ ಆಯ್ಕೆ ಪಡೆದಿದ್ದು, 90Hz ರಿಫ್ರೆಶ್ ರೇಟ್‌ನೊಂದಿಗೆ ಉತ್ತಮವಾಗಿ ಕಾರ್ಯನಿರ್ವಹಿಸಲಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ ನಯವಾದ ವಿನ್ಯಾಸವನ್ನು ಹೊಂದಿದ್ದು, IP54 ರೇಟಿಂಗ್‌ನೊಂದಿಗೆ ಬಂದಿದೆ. ಪರಿಣಾಮ ಇದು ಧೂಳು ಮತ್ತು ನೀರು ನಿರೋಧಕವಾಗಿದೆ.
ವಿವೋ Y28 ಸ್ಮಾರ್ಟ್‌ಫೋನ್ ಪ್ರೊಸೆಸರ್ ವಿವರ: ಈ ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6020 ಪ್ರೊಸೆಸರ್‌ನಿಂದ ಕಾರ್ಯನಿರ್ವಹಿಸಲಿದ್ದು, 8GB RAM ವರೆಗಿನ ಆಯ್ಕೆ ಹಾಗೂ 128GB ಇಂಟರ್ನಲ್ ಸ್ಟೋರೇಜ್ ಅನ್ನು ಹೊಂದಿದೆ. ಇದರೊಂದಿಗೆ ನೀವು ಇನ್ನೂ ಹೆಚ್ಚಿನ ಸ್ಟೋರೇಜ್ ಬೇಕು ಎಂದರೆ ಮೈಕ್ರೊ ಎಸ್‌ಡಿ ಕಾರ್ಡ್ ಬಳಕೆ ಮಾಡಿಕೊಳ್ಳುವ ಮೂಲಕ ಈ ಹೆಚ್ಚಿನ ಸ್ಟೋರೇಜ್ ಸೌಲಭ್ಯ ಪಡೆಯಬಹುದಾಗಿದೆ.

ವಿವೋ Y28 ಸ್ಮಾರ್ಟ್‌ಫೋನ್ ಕ್ಯಾಮೆರಾ ಮಾಹಿತಿ: ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಆಯ್ಕೆ ಪಡೆದಿದ್ದು, ಅದರಲ್ಲಿ f/2.4 ಅಪರ್ಚರ್ ಲೆನ್ಸ್‌ನೊಂದಿಗೆ 2 ಮೆಗಾಪಿಕ್ಸೆಲ್ ಕ್ಯಾಮೆರಾ f/2.0 ಅಪರ್ಚರ್‌ನೊಂದಿಗೆ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಆಯ್ಕೆ ಪಡೆದಿದೆ. ಹಾಗೂ ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ ಈ ಫೋನ್ f/2.0 ಅಪರ್ಚರ್ ಲೆನ್ಸ್‌ನೊಂದಿಗೆ 8 ಮೆಗಾಪಿಕ್ಸೆಲ್ ಕ್ಯಾಮೆರಾ ಆಯ್ಕೆ ಪಡೆದಿದೆ.
ವಿವೋ Y28 ಸ್ಮಾರ್ಟ್‌ಫೋನ್ ಬ್ಯಾಟರಿ ಹಾಗೂ ಇತರೆ: ಈ ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿಯಿಂದ ಪ್ಯಾಕ್ ಆಗಿದ್ದು, 15W ವೇಗದ ಚಾರ್ಜಿಂಗ್ ಬೆಂಬಲ ಪಡೆದಿದೆ. ಹಾಗೆಯೇ ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಬ್ಲೂಟೂತ್ ಆವೃತ್ತಿ 5.1, ಯುಎಸ್‌ಬಿ 2.0 ಪೋರ್ಟ್, ಜಿಪಿಎಸ್, ಓಟಿಜಿ, ಎಫ್‌ಎಮ್ ರೇಡಿಯೋ ಮತ್ತು ಎ-ಜಿಪಿಎಸ್ ಸೇರಿವೆ. ಇದರೊಂದಿಗೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಕಲರ್ ಟೆಂಪರೇಚರ್ ಸೆನ್ಸಾರ್, ಇ-ದಿಕ್ಸೂಚಿ, ಗೈರೊಸ್ಕೋಪ್ ಮತ್ತು ಪ್ರಾಕ್ಸಿಮಿಟಿ ಸೆನ್ಸರ್ ಸೇರಿವೆ.

ವಿವೋ Y28 ಸ್ಮಾರ್ಟ್‌ಫೋನ್ ಬೆಲೆ ಹಾಗೂ ಲಭ್ಯತೆ: ಈ ಸ್ಮಾರ್ಟ್‌ಫೋನ್ ಮೂರು ವೇರಿಯಂಟ್‌ನಲ್ಲಿ ಲಭ್ಯ ಇವೆ. ಅಂದರೆ 4GB+128GB, 6GB+128GB ಮತ್ತು 8GB+128GB. ಈ ಈ ವೇರಿಯಂಟ್‌ನ ಬೆಲೆ ಕ್ರಮವಾಗಿ 13,999 ರೂ.ಗಳು, 15,499 ರೂ.ಗಳು ಮತ್ತು 16,999 ರೂ.ಗಳಾಗಿದೆ. ಎಸ್‌ಬಿಐ, ಡಿಬಿಎಸ್ ಮತ್ತು ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಅನ್ನು ಬಳಸಿಕೊಂಡು ಖರೀದಿ ಮಾಡಿದ್ರೆ 1,500ರೂ. ವರೆಗೆ ಕ್ಯಾಶ್‌ಬ್ಯಾಕ್ ಸಿಗಲಿದೆ. ಈ ಫೋನ್ ಅನ್ನು ಅಮೆಜಾನ್, ಫ್ಲಿಪ್‌ಕಾರ್ಟ್, ವಿವೋ (Amazon, Flipkart, Vivo) ಸೇರಿದಂತೆ ವಿವಿಧ ಫ್ಲಾಟ್‌ಫಾರ್ಮ್ ಮೂಲಕ ಖರೀದಿ ಮಾಡಬಹುದಾಗಿದೆ.


Click it and Unblock the Notifications








