ವಿವೋ Y30 ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಈಗ ಭಾರೀ ಇಳಿಕೆ!
ವಿವೋ ಕಂಪೆನಿ ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ವಿವೋ Y30 ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ಸೆಳೆದಿದೆ. ಇದೀಗ ಈ ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಇಳಿಕೆ ಆಗಿದೆ. ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ P35 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.

ಹೌದು, ವಿವೋ ಸ್ಮಾರ್ಟ್‌ಫೋನ್ ಕಂಪೆನಿ ತನ್ನ ವಿವೋ Y30 ಸ್ಮಾರ್ಟ್‌ಫೋನ್ ಬೆಲೆಯಲ್ಲಿ 1,000ರೂ. ಕಡಿತವಾಗಿದೆ. 14,990ರೂ. ಬೆಲೆಯನ್ನು ಹೊಂದಿದ್ದ ಈ ಸ್ಮಾರ್ಟ್‌ಫೋನ್ ಇದೀಗ ಬೆಲೆ ಇಳಿಕೆಯಿಂದ 13,990ರೂ.ಗಳಿಗೆ ಲಭ್ಯವಾಗಲಿದೆ. ಅಧಿಕೃತ ವಿವೋ ವೆಬ್‌ಸೈಟ್ ಹಾಗೂ ಅಮೆಜಾನ್ ತಾಣದಲ್ಲಿ ಖರೀದಿಗೆ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನಿನ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ಯಾವುದು
ವಿವೋ Y30 ಸ್ಮಾರ್ಟ್‌ಫೋನ್ 720x1560 ಪಿಕ್ಸೆಲ್ ರೆಸಲ್ಯೂಶನ್ ಸಾಮರ್ಥ್ಯದ 6.47-ಇಂಚಿನ ಹೆಚ್‌ಡಿ+ ಡಿಸ್‌ಪ್ಲೇಯನ್ನ ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇಯು ಎಲ್‌ಸಿಡಿ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 266ppi ಪಿಕ್ಸೆಲ್ ಸಾಂದ್ರತೆಯನ್ನ ಹೊಂದಿರಲಿದೆ. ಇನ್ನು ಈ ಡಿಸ್‌ಪ್ಲೇಯ ಸ್ಕ್ರೀನ್ ಟು ಬಾಡಿ ನಡುವೆ 85.07% ರಷ್ಟು ಅನುಪಾತವನ್ನು ಹೊಂದಿದೆ.

ಪ್ರೊಸೆಸರ್ ವೇಗ
ವಿವೋ Y30 ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ P35 SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ನಲ್ಲಿ ಫಂಟೌಚ್ ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಅಲ್ಲದೆ ಇದು 4GB RAM ಮತ್ತು 128GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನ ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 25GB ವರೆಗೆ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಿಸಿಬಹುದಾಗಿದೆ.

ಕ್ವಾಡ್ ಕ್ಯಾಮೆರಾ ರಚನೆ
ವಿವೋ Y30 ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್, ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಕ್ಯಾಮೆರಾ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ವಿವೋ Y30 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್ಅಪ್ ಅನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ವೈ-ಫೈ, ಬ್ಲೂಟೂತ್ ವಿ5.0, GPS , ಎಫ್‌ಎಂ ರೇಡಿಯೋ, ಯುಎಸ್‌ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ವಿವೋ Y30 ಸ್ಮಾರ್ಟ್‌ಫೋನ್ 14,990 ರೂ.ಬೆಲೆಯನ್ನ ಹೊಂದಿದ್ದು, ಈಗ ಬೆಲೆ ಇಳಿಕೆಯಿಂದ 13,990ರೂ.ಗೆ ಲಭ್ಯವಾಗಲಿದೆ. ಸ್ಮಾರ್ಟ್‌ಫೋನ್ ಡ್ಯಾಜ್ಲ್ ಬ್ಲೂ ಮತ್ತು ಎಮರಾಲ್ಡ್ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಲಬ್ಯವಾಗಲಿದೆ.


Click it and Unblock the Notifications




