Home
ಸುದ್ದಿಜಾಲ

Vivo: ವಿವೋದ ಈ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ! 128 GB ಸ್ಟೋರೇಜ್‌... ಕ್ವಾಡ್‌ ಕ್ಯಾಮೆರಾ

ವಿವೋ ಫೋನ್‌ಗಳಿಗೆ (Vivo smartphone) ಭಾರತದಲ್ಲಿ ದೊಡ್ಡ ಮಟ್ಟದ ಬೇಡಿಕೆ ಇದೆ. ಈ ಫೋನ್‌ಗಳು ಕ್ಯಾಮೆರಾ ವಿಚಾರದಲ್ಲಿ ಭಿನ್ನ ಫೀಚರ್ಸ್‌ ಆಯ್ಕೆ ಪಡೆದುಕೊಂಡಿದ್ದು, ಈ ಮೂಲಕ ಇತರೆ ಫೋನ್‌ಗಳಿಗಿಂತ ಕೊಂಚ ವಿಶೇಷವಾಗಿ ಗುರುತಿಸಿಕೊಳ್ಳುತ್ತವೆ. ಅದರಂತೆ ಈಗ ಪ್ರಮುಖ ಇ-ಕಾಮರ್ಸ್‌ ಸೈಟ್‌ನಲ್ಲಿ ವಿವೋದ ಈ ಬಜೆಟ್ ಬೆಲೆಯ ಫೋನ್‌ಗೆ ಭಾರೀ ಬೆಲೆ ಇಳಿಕೆ ಮಾಡಲಾಗಿದೆ.

ಹೌದು, ವಿವೋ Y30 ಸ್ಮಾರ್ಟ್‌ಫೋನ್‌ಗೆ (Vivo Y30 smartphone) ಭರ್ಜರಿ ಬೇಡಿಕೆ ಇದ್ದು, ಈ ಫೋನ್‌ಗೆ ಇನ್ನಷ್ಟು ಆಫರ್ ನೀಡುವ ಮೂಲಕ ಜನರಿಗೆ ಸುಲಭವಾಗಿ ಲಭ್ಯವಾಗುವಂತೆ ಮಾಡಲಾಗಿದೆ. ಈ ಸ್ಮಾರ್ಟ್‌ಫೋನ್‌ 6 GB RAM ಆಯ್ಕೆ ಪಡೆದಿದ್ದು, ಅತ್ಯುತ್ತಮ ಕಾರ್ಯನಿರ್ವಹಣೆಗೆ ಹೆಸರುವಾಸಿಯಾಗಿದೆ. ಹಾಗೆಯೇ ಮೀಡಿಯಾಟೆಕ್ ಹಿಲಿಯೊ P35 ಪ್ರೊಸೆಸರ್ ಬಲ ಪಡೆದುಕೊಂಡಿದೆ. ಹಾಗಿದ್ರೆ, ಈ ಸ್ಮಾರ್ಟ್‌ಫೋನ್‌ನ ಬೆಲೆ ವಿವರ ಹಾಗೂ ಇನ್ನಿತರೆ ಅಗತ್ಯ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿಕೊಡಲಾಗಿದೆ ಓದಿರಿ.

ವಿವೋದ ಈ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ! 128 GB ಸ್ಟೋರೇಜ್‌.. ಕ್ವಾಡ್‌ ಕ್ಯಾಮೆರಾ

ವಿವೋ Y30 ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ ಮಾಹಿತಿ: ಬಹು ಬೇಡಿಕೆ ಇರುವ ಈ ಫೋನ್‌ ಅನ್ನು ಹಾಗೂ ಪ್ರಮುಖ ಇ-ಕಾಮರ್ಸ್‌ ಸೈಟ್‌ನಲ್ಲಿ ವೇಗವಾಗಿ ಸೇಲ್‌ ಆಗುತ್ತಿರುವ ಈ ಫೋನ್‌ ಅನ್ನು ನೀವು ಖರೀದಿ ಮಾಡುವ ಮುನ್ನ ಇದರ ಕೆಲವು ಫೀಚರ್ಸ್‌ ಬಗ್ಗೆ ಕಣ್ಣಾಡಿಸುವುದು ಉತ್ತಮವಾಗಿದೆ. ಅದರಂತೆ ಈ ಸ್ಮಾರ್ಟ್‌ಫೋನ್ 6.47 ಇಂಚಿನ IPS LCD ಡಿಸ್‌ಪ್ಲೇ ಹೊಂದಿದ್ದು, ಇದು 82.9% ಸ್ಕ್ರೀನ್-ಟು-ಬಾಡಿ ಅನುಪಾತ, 720 x 1560 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಆಯ್ಕೆ ಪಡೆದುಕೊಂಡಿದೆ.

ವಿವೋ Y30 ಸ್ಮಾರ್ಟ್‌ಫೋನ್‌ ಪ್ರೊಸೆಸರ್‌ ಮಾಹಿತಿ: ಈ ಫೋನ್ ಮೀಡಿಯಾಟೆಕ್ MT6765 ಹಿಲಿಯೋ P35 (12nm) ಪ್ರೊಸೆಸರ್‌ ಬಲ ಪಡೆದಿದ್ದು, ಪವರ್‌ ವಿಆರ್‌ GE8320 ಗ್ರಾಫಿಕ್ಸ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ ಆಂಡ್ರಾಯ್ಡ್ 10, ಫನ್‌ಟಚ್ 10.0 ಅನ್ನು ಈ ಫೋನ್‌ ರನ್‌ ಮಾಡಲಿದೆ. ಇದರೊಂದಿಗೆ ಐದು ಸ್ಟೋರೇಜ್‌ ಆಯ್ಕೆಯಲ್ಲಿ ಈ ಫೋನ್‌ ಕಾಣಿಸಿಕೊಂಡಿದೆ. ಆದರೆ ಇದೀಗ 128GB ಇಂಟರ್‌ ಸ್ಟೋರೇಜ್‌ ಹಾಗೂ 6GB RAM ಆಯ್ಕೆ ಇರುವ ಫೋನ್‌ಗೆ ಆಫರ್ ಘೋಷಣೆ ಮಾಡಲಾಗಿದೆ. ಅದಾಗ್ಯೂ ನೀವು ಇನ್ನೂ ಹೆಚ್ಚಿನ ಸ್ಟೋರೇಜ್‌ ಬೇಕು ಎಂದರೆ ಎಸ್‌ಡಿ ಕಾರ್ಡ್‌ ಬಳಕೆ ಮಾಡಿಕೊಳ್ಳಬಹುದಾಗಿದೆ.

ವಿವೋದ ಈ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ! 128 GB ಸ್ಟೋರೇಜ್‌.. ಕ್ವಾಡ್‌ ಕ್ಯಾಮೆರಾ

ವಿವೋ Y30 ಸ್ಮಾರ್ಟ್‌ಫೋನ್‌ ಕ್ಯಾಮೆರಾ ರಚನೆ: ಈ ವಿಶೇಷ ಫೋನ್ ಕ್ವಾಡ್‌ ರಿಯರ್‌ ಕ್ಯಾಮೆರಾ ಆಯ್ಕೆ ಪಡೆದಿದೆ. ಅದರಲ್ಲಿ 13 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ, 8 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಸೆನ್ಸರ್‌, 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸರ್‌ ಹಾಗೂ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸರ್ ಅನ್ನು ಹೊಂದಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ 8 ಮೆಗಾಪಿಕ್ಸೆಲ್‌ ಕ್ಯಾಮೆರಾ ಆಯ್ಕೆಯನ್ನು ನೀಡಲಾಗಿದೆ. ಈ ಸೆನ್ಸರ್‌ಗಳು ಎಲ್‌ಇಡಿ ಫ್ಲ್ಯಾಶ್, ಹೆಚ್‌ಡಿಆರ್‌, ಪನೋರಮಾ ಫೀಚರ್ಸ್‌ ಪಡೆದಿವೆ.

ವಿವೋ Y30 ಸ್ಮಾರ್ಟ್‌ಫೋನ್‌ ಬ್ಯಾಟರಿ ಹಾಗೂ ಇತರೆ: ಈ ಸ್ಮಾರ್ಟ್‌ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 10W ವೈರ್ಡ್ ಚಾರ್ಜಿಂಗ್ ಬೆಂಬಲ ಪಡೆದಿದೆ. ಇದರೊಂದಿಗೆ ವೈ-ಫೈ 802.11 b/g/n,ವೈ-ಫೈ ಡೈರೆಕ್ಟ್, ಬ್ಲೂಟೂತ್ ಆವೃತ್ತಿ 5.0, A2DP, LE, ಎಫ್‌ಎಮ್‌ ರೇಡಿಯೋ, ಯುಎಸ್‌ಬಿ ಟೈಪ್-ಸಿ 2.0, ಓಟಿಜಿ ಫೀಚರ್ಸ್‌ ಸೇರಿದಂತೆ ಅನೇಕ ಅಗತ್ಯ ಸೌಲಭ್ಯಗಳನ್ನು ಈ ಫೋನ್‌ನಲ್ಲಿ ಕಾಣಬಹುದಾಗಿದೆ.

ವಿವೋದ ಈ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ! 128 GB ಸ್ಟೋರೇಜ್‌.. ಕ್ವಾಡ್‌ ಕ್ಯಾಮೆರಾ

ವಿವೋ Y30 ಸ್ಮಾರ್ಟ್‌ಫೋನ್‌ ಬೆಲೆ ಹಾಗೂ ಆಫರ್ ವಿವರ: ಈ ಫೋನ್‌ನ ಪ್ರಮುಖ ವಿಚಾರಕ್ಕೆ ಈಗ ಬರೋಣ. ಈ ಫೋನ್‌ನ 6 GB RAM ಹಾಗೂ 128 GB ವೇರಿಯಂಟ್‌ ಬೆಲೆ 18,999 ರೂ.ಗಳಾಗಿದ್ದು, ನೀವೀಗ ಇದನ್ನು 11,990 ರೂ.ಗಳ ಆಫರ್ ಬೆಲೆಗೆ ಖರೀದಿ ಮಾಡಬಹುದಾಗಿದೆ. ಇದರೊಂದಿಗೆ ಇತರೆ ಬ್ಯಾಂಕ್‌ ಆಫರ್ ಹಾಗೂ ಕ್ಯಾಶ್‌ಬ್ಯಾಕ್‌ ಆಫರ್ ಸಹ ಲಭ್ಯ ಇದ್ದು, ಇನ್ನೂ ಕಡಿಮೆ ಬೆಲೆಗೆ ಈ ಫೋನ್‌ ಖರೀದಿ ಮಾಡಬಹುದಾಗಿದೆ. ಫ್ಲಿಪ್‌ಕಾರ್ಟ್‌ (Flipkart) ನಲ್ಲಿ ಈ ಆಫರ್ ಘೋಷಣೆ ಮಾಡಲಾಗಿದೆ.

Best Mobiles in India

English summary
Vivo Y30 smartphone has been in high demand and has been made easily available to people by offering even more on Flipkart.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+