ವಿವೋ Y30 ಸ್ಟ್ಯಾಂಡರ್ಡ್ ಆವೃತ್ತಿ ಸ್ಮಾರ್ಟ್‌ಫೋನ್ ಅನಾವರಣ!
ಭಿನ್ನ ಫೀಚರ್ಸ್‌ಗಳ ಸ್ಮಾರ್ಟ್‌ಫೋನ್ ಶ್ರೇಣಿಯ ಮೂಲಕ ಗಮನ ಸೆಳೆದಿರುವ ವಿವೋ ಮೊಬೈಲ್ ಸಂಸ್ಥೆಯು ಫೋನ್‌ಗಳ ಪ್ರೈಸ್‌ಟ್ಯಾಗ್‌ನಿಂದಲೂ ಸದ್ದು ಮಾಡಿದೆ. ಸಂಸ್ಥೆಯ ಕೆಲವು ಸ್ಮಾರ್ಟ್‌ಫೋನ್ ಮಾಡೆಲ್‌ಗಳು ಹೆಚ್ಚು ಗಮನ ಸೆಳೆದಿದ್ದು, ಪೈಕಿ ವಿವೋ Y30 ಸಹ ಒಂದಾಗಿದೆ. ವಿವೋ ಸಂಸ್ಥೆಯು ಇದೀಗ ಈ ಫೋನಿನಲ್ಲಿ ಕೆಲವು ಅಪ್‌ಡೇಟ್‌ಗಳೊಂದಿಗೆ ಸ್ಟ್ಯಾಂಡರ್ಡ್ ಆವೃತ್ತಿಯನ್ನು ಅನಾವರಣ ಮಾಡಿದೆ.

ಹೌದು, ವಿವೋ ಸ್ಮಾರ್ಟ್‌ಫೋನ್ ಕಂಪೆನಿ ಈಗ ವಿವೋ Y30 ಸ್ಟ್ಯಾಂಡರ್ಡ್ ಆವೃತ್ತಿ ಸ್ಮಾರ್ಟ್‌ಫೋನ್ ಅನ್ನು ಚೀನಾದಲ್ಲಿ ಬಿಡುಗಡೆ ಮಾಡಿದೆ. ಈ ಫೋನ್ 6GB + 128GB ಸಾಮರ್ಥ್ಯದ ಸಿಂಗಲ್ ವೇರಿಯಂಟ್ ಆಯ್ಕೆಯನ್ನು ಪಡೆದುಕೊಂಡಿದೆ. ಹಾಗೆಯೇ ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಪವರ್ ಅನ್ನು ಸಹ ಪಡೆದುಕೊಂಡಿದೆ. ಹಾಗಾದರೇ ಈ ಸ್ಮಾರ್ಟ್‌ಫೋನಿನ ಇನ್ನುಳಿದ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ

ಡಿಸ್‌ಪ್ಲೇ ರಚನೆ
ವಿವೋ Y30 ಸ್ಮಾರ್ಟ್‌ಫೋನ್ 720x1560 ಪಿಕ್ಸೆಲ್ ರೆಸಲ್ಯೂಶನ್ ಸಾಮರ್ಥ್ಯದ 6.47-ಇಂಚಿನ ಹೆಚ್‌ಡಿ+ ಡಿಸ್‌ಪ್ಲೇಯನ್ನ ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇಯು ಎಲ್‌ಸಿಡಿ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 266ppi ಪಿಕ್ಸೆಲ್ ಸಾಂದ್ರತೆಯನ್ನ ಹೊಂದಿರಲಿದೆ. ಇನ್ನು ಈ ಡಿಸ್‌ಪ್ಲೇಯ ಸ್ಕ್ರೀನ್ ಟು ಬಾಡಿ ನಡುವೆ 85.07% ರಷ್ಟು ಅನುಪಾತವನ್ನು ಹೊಂದಿದೆ.

ಪ್ರೊಸೆಸರ್ ವೇಗ
ವಿವೋ Y30 ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ P35 SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ನಲ್ಲಿ ಫಂಟೌಚ್ ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಅಲ್ಲದೆ ಇದು 6GB RAM ಮತ್ತು 128GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನ ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಿಸಿಬಹುದಾಗಿದೆ.

ಕ್ವಾಡ್ ಕ್ಯಾಮೆರಾ ರಚನೆ
ವಿವೋ Y30 ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್, ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಕ್ಯಾಮೆರಾ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ವಿವೋ Y30 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್ಅಪ್ ಅನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ವೈ-ಫೈ, ಬ್ಲೂಟೂತ್ ವಿ5.0, GPS , ಎಫ್‌ಎಂ ರೇಡಿಯೋ, ಯುಎಸ್‌ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ವಿವೋ Y30 ಸ್ಟ್ಯಾಂಡರ್ಡ್ ಆವೃತ್ತಿಯ ಸ್ಮಾರ್ಟ್‌ಫೋನ್ 6GB + 128GB ಶೇಖರಣಾ ವೇರಿಯಂಟ್ ಮಾಡೆಲ್ ಬೆಲೆಯು CNY 1,398 (ಭಾರತದಲ್ಲಿ ಅಂದಾಜು 15,700ರೂ. ಎನ್ನಲಾಗಿದೆ). ಈ ಫೋನ್ ಅರೋರಾ ಮತ್ತು ಕ್ಲೌಡ್ ವಾಟರ್ ಬ್ಲೂ ಬಣ್ಣ ಆಯ್ಕೆಗಳಲ್ಲಿ ಬರುತ್ತದೆ.


Click it and Unblock the Notifications