ಭಾರತದ ಮಾರುಕಟ್ಟೆಯಲ್ಲಿ ವಿವೋ Y30 ಸ್ಮಾರ್ಟ್‌ಫೋನ್ ಬಿಡುಗಡೆ!
ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ವಿವೋ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಂದ ಗುರುತಿಸಿಕೊಂಡಿದೆ. ಈಗಾಗಲೇ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಮಾರುಕಟ್ಟೆಯಲ್ಲಿ ಸೈ ಎನಿಸಿಕೊಂಡಿದೆ. ಸದ್ಯ ತನ್ನ ವಿಶೇಷ ಫೀಚರ್ಸ್‌ಗಳಿಂದ ಸ್ಮಾರ್ಟ್‌ಫೋನ್ ಪ್ರಿಯರ ನೆಚ್ಚಿನ ಬ್ರಾಂಡ್ ಆಗಿ ಗುರುತಿಸಿಕೊಂಡಿದೆ. ಇನ್ನು ಪ್ರತಿ ಭಾರಿಯು ಹೊಸ ಮಾದರಿಯ ಫೀಚರ್ಸ್‌ಗಳನ್ನೇ ಪರಿಚಯಿಸುವ ವಿವೋ ಇದೀಗ ತನ್ನ ವಿವೋ Y30 ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ.

ಹೌದು, ವಿವೋ ಸ್ಮಾರ್ಟ್‌ಫೋನ್ ಕಂಪೆನಿ ತನ್ನ ವಿವೋ Y30 ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಸದ್ಯ ಈ ಸ್ಮಾರ್ಟ್‌ಫೋನ್ ಇದೀಗ ಭಾರತದಲ್ಲಿ ಫ್ಲಿಪ್‌ಕಾರ್ಟ್‌ನಲ್ಲಿ ಖರೀದಿಸಬಹುದಾಗಿದೆ. ಇನ್ನು ವಿವೊ Y30 ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, 13 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಮುಖ್ಯ ಕ್ಯಾಮೆರಾವನ್ನು ಹೊಂದಿರಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ ಪಂಚ್‌ಹೋಲ್ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿದ್ದು, ರಿಯರ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಸಹ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ವಿಶೇಷತೆ ಹಾಗೂ ವಿನ್ಯಾಸ ಹೇಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ
ವಿವೋ Y30 ಸ್ಮಾರ್ಟ್‌ಫೋನ್ 720x1560 ಪಿಕ್ಸೆಲ್ ರೆಸಲ್ಯೂಶನ್ ಸಾಮರ್ಥ್ಯದ 6.47-ಇಂಚಿನ ಹೆಚ್‌ಡಿ+ ಡಿಸ್‌ಪ್ಲೇಯನ್ನ ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇಯು ಎಲ್‌ಸಿಡಿ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 266ppi ಪಿಕ್ಸೆಲ್ ಸಾಂದ್ರತೆಯನ್ನ ಹೊಂದಿರಲಿದೆ. ಇನ್ನು ಈ ಡಿಸ್‌ಪ್ಲೇಯ ಸ್ಕ್ರೀನ್ ಟು ಬಾಡಿ ನಡುವೆ 85.07% ರಷ್ಟು ಅನುಪಾತವನ್ನು ಹೊಂದಿದೆ.

ಪ್ರೊಸೆಸರ್
ಇನ್ನು ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ P35 SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ನಲ್ಲಿ ಫಂಟೌಚ್ ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಅಲ್ಲದೆ ಇದು 4GB RAM ಮತ್ತು 128GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನ ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 25GB ವರೆಗೆ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಿಸಿಬಹುದಾಗಿದೆ.

ಕ್ಯಾಮೆರಾ ವಿನ್ಯಾಸ
ವಿವೋ Y30 ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್, ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಕ್ಯಾಮೆರಾ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಇನ್ನು ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್ಅಪ್ ಅನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ವೈ-ಫೈ, ಬ್ಲೂಟೂತ್ ವಿ5.0, GPS , ಎಫ್‌ಎಂ ರೇಡಿಯೋ, ಯುಎಸ್‌ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ವಿವೋ Y30 ಸ್ಮಾರ್ಟ್‌ಫೋನ್ 14,990 ರೂ.ಬೆಲೆಯನ್ನ ಹೊಂದಿದ್ದು, ಈ ಸ್ಮಾರ್ಟ್‌ಫೋನ್ ಡ್ಯಾಜ್ಲ್ ಬ್ಲೂ ಮತ್ತು ಎಮರಾಲ್ಡ್ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಲಬ್ಯವಾಗಲಿದೆ. ಇದಲ್ಲದೆ ಇದು ಫ್ಲಿಪ್‌ಕಾರ್ಟ್‌ನಲ್ಲಿ ಲಭ್ಯವಿರುತ್ತದೆ ಎಂದು ಪಟ್ಟಿ ಮಾಡಲಾಗಿದೆ.


Click it and Unblock the Notifications