Home
ಸುದ್ದಿಜಾಲ

vivo y30: ವಿವೊ Y30 ಸ್ಮಾರ್ಟ್‌ಫೋನ್‌ ಬಿಡುಗಡೆ! ಆಕರ್ಷಕ ಫೀಚರ್ಸ್‌!

ಚೀನಾ ಮೂಲದ ವಿವೋ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಂದ ಮಾರುಕಟ್ಟೆಯಲ್ಲಿ ಸೌಂಡ್‌ ಮಾಡುತ್ತಲೇ ಇರುತ್ತೆ. ಸದ್ಯ ಇದೀಗ ತನ್ನ ವಿವೋ Y ಸರಣಿಯಲ್ಲಿ Y30 ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ವಿವೋ ಕಂಪನಿಯ ವೈ ಸರಣಿಯ ಇತ್ತೀಚಿನ ಸ್ಮಾರ್ಟ್‌ಫೋನ್ ಆಗಿ ಬಿಡುಗಡೆ ಮಾಡಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಅನ್ನು ತನ್ನ ಅಧಿಕೃತ ಚಾನೆಲ್‌ಗಳ ಮೂಲಕ ಬಿಡುಗಡೆ ಮಾಡದಿದ್ದರೂ, ಮಲೇಷಿಯಾದ ಆನ್‌ಲೈನ್ ಮಳಿಗೆಗಳಲ್ಲಿ ಈ ಸ್ಮಾರ್ಟ್‌ಫೋನ್‌ ಕಾಣಿಸಿಕೊಂಡಿದ್ದು, ಈ ಮೂಲಕ ವಿವೋ Y30 ಸ್ಮಾರ್ಟ್‌ಫೋನ್‌ ಎಂಟ್ರಿ ನೀಡಿದೆ ಎನ್ನಲಾಗಿದೆ.

ವಿವೋ

ಹೌದು, ವಿವೋ ಕಂಪೆನಿ ತನ್ನ ವಿಶೇಷವಾದ ಸ್ಮಾರ್ಟ್‌ಫೋನ್‌ಗಳಿಂದ ಗುರುತಿಸಿಕೊಂಡಿದೆ. ತನ್ನ ಕ್ಯಾಮೆರಾ ಫೀಚರ್ಸ್‌ಗಳ ಮೂಲಕವೇ ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸುವ ವಿವೋ ಇದೀಗ ತನ್ನ ವಿವೋ Y30 ಮೂಲಕ ಮತ್ತೆ ಸೌಂಡ್‌ ಮಾಡ್ತಿದೆ. ಸದ್ಯ ಇದೀಗ ಬಿಡುಗಡೆ ಆಗಿರುವ ವಿವೋ Y30 ಸ್ಮಾರ್ಟ್‌ಫೋನ್‌ ಪಂಚ್-ಹೋಲ್‌ ಡಿಸ್‌ಪ್ಲೇಯನ್ನ ಹೊಂದಿದೆ. ಅಲ್ಲದೆ ಈ ಡಿಸ್‌ಪ್ಲೇಯನ್ನು "ಅಲ್ಟ್ರಾ ಒ ಸ್ಕ್ರೀನ್" ವಿನ್ಯಾಸ ಎಂದು ಕಂಪೆನಿ ಹೇಳಿಕೊಂಡಿದೆ. ಹಾಗಾದ್ರೆ ವಿವೋ Y30 ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ವಿವೋ Y30 ಸ್ಮಾರ್ಟ್‌ಫೋನ್‌ 720x1560 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಹೊಂದಿರುವ 6.47 ಇಂಚಿನ ಎಚ್‌ಡಿ ಡಿಸ್‌ಪ್ಲೇಯನ್ನ ಹೊಂದಿದೆ. ಈ ಡಿಸ್‌ಪ್ಲೇಯು 19.5: 9 ರಚನೆಯ ಅನುಪಾತವನ್ನ ಹೊಂದಿದ್ದು, ವಾಟರ್‌ ಡ್ರಾಪ್‌ ನಾಚ್‌ ಶೈಲಿಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 266PPI ಪಿಕ್ಸೆಲ್‌ ಸಾಂದ್ರತೆಯನ್ನ ಒಳಗೊಂಡಿದೆ. ಇದಲ್ಲದೆ ಈ ಡಿಸ್‌ಪ್ಲೇಯು ಸ್ಕ್ರೀನ್‌ ಟು ಬಾಡಿ 85.07% ಅನುಪಾತವನ್ನ ಒಳಗೊಂಡಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ P35 SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 4GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನ ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ವಿವೋ Y30 ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಹಾಗೂ ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಶೂಟರ್ ಅನ್ನು ಸಹ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಹಾಗೂ ಕೃತಕ ಬುದ್ಧಿಮತ್ತೆ (AI) ಬೆಂಬಲಿಸುವ ಸೆಲ್ಫಿ ಕ್ಯಾಮೆರಾವನ್ನ ನೀಡಲಾಗಿದೆ.

ಬ್ಯಾಟರಿ ಮತ್ತು ಲಭ್ಯತೆ

ಬ್ಯಾಟರಿ ಮತ್ತು ಲಭ್ಯತೆ

ಇನ್ನು ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE , ವೈ-ಫೈ, ಬ್ಲೂಟೂತ್ ವಿ 5.0, GPS, ಎಫ್‌ಎಂ ರೇಡಿಯೋ, ಯುಎಸ್‌ಬಿ 2.0, ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಜೊತೆಗೆ ಫಿಂಗರ್‌ ಪ್ರಿಂಟ್ ಸೆನ್ಸಾರ್ ಅನ್ನು ಸಹ ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮಲೇಷ್ಯಾ ವೆಬ್‌ಸೈಟ್‌ನಲ್ಲಿ ಕಾಣಿಸಿಕೊಂಡಿರುವಂತೆ MYR 899 (ಸುಮಾರು ರೂ. 15,800)ಬೆಲೆಯನ್ನ ಹೊಂದಿದೆ. ಅಲ್ಲದೆ ಡ್ಯಾಜ್ಲ್ ಬ್ಲೂ ಮತ್ತು ಮೂನ್ ಸ್ಟೋನ್ ವೈಟ್ ಕಲರ್ ಆಯ್ಕೆಗಳಲ್ಲಿ ಈ ಸ್ಮಾರ್ಟ್‌ಫೋನ್‌ ಲಭ್ಯವಾಗಲಿದ್ದು, ಇದೇ ಮೇ 9 ರಂದು ಮಲೇಷಿಯಾದ ಮಾರುಕಟ್ಟೆಯಲ್ಲಿ ಲಬ್ಯವಾಗಲಿದೆ.

Best Mobiles in India

English summary
Vivo Y30 price is set at MYR 899 (roughly Rs. 15,800) for the lone 128GB storage variant.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+