Home
ಸುದ್ದಿಜಾಲ

ಹೊಸ Vivo Y300 ಖರೀದಿಗೆ ಲಭ್ಯ; 2000 ಡಿಸ್ಕೌಂಟ್.. 1500 ರೂ.ನ ಇಯರ್‌ಬಡ್‌ ಉಚಿತ.. ಬೆಲೆಯೂ ಕಡಿಮೆ!

ವಿವೋ (Vivo) ಇತ್ತೀಚೆಗೆ ಹೊಸ ವಿವೋ Y300 5G (Vivo Y300 5G) ಫೋನನ್ನು ಬಿಡುಗಡೆ ಮಾಡಿದೆ. ಇದು 22,000 ರೂ. ಗಿಂತಲೂ ಕಡಿಮೆ ಬೆಲೆಗೆ ಲಭ್ಯವಿದೆ. ಅಂದಹಾಗೆ, ಈ ಸ್ಮಾರ್ಟ್‌ಫೋನ್ ಇಂದಿನಿಂದ (ನ.27) ಮೊದಲ ಮಾರಾಟವನ್ನು ಪ್ರಾರಂಭಿಸಿದೆ. ನೀವು, ಫ್ಲಿಪ್‌ಕಾರ್ಟ್, ಅಮೆಜಾನ್ ಮತ್ತು ವಿವೋ ಇ-ಸ್ಟೋರ್‌ನಲ್ಲಿ ಈ ಫೋನನ್ನು ಖರೀದಿಸಬಹುದು. ಕಂಪನಿಯು 2000 ರೂ. ಡಿಸ್ಕೌಂಟ್ ಮತ್ತು ವಿವೋ TWS 3e (Vivo TWS 3e) ಇಯರ್‌ಬಡ್‌ ಉಚಿತವಾಗಿ ನೀಡುತ್ತಿದೆ. ಬನ್ನಿ, ಈ ಫೋನಿನ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.

ಕಂಪನಿಯು ವಿವೋ Y300 5G ಫೋನನ್ನು ಎರಡು ಸ್ಟೋರೇಜ್ ರೂಪಾಂತರಗಳಲ್ಲಿ ಬಿಡುಗಡೆ ಮಾಡಿದೆ. ನೀವು ಮೂರು ಬಣ್ಣಗಳ ಆಯ್ಕೆಗಳಲ್ಲಿ ಖರೀದಿಸಬಹುದು. ಈ ಮೊಬೈಲ್ ಸ್ನಾಪ್‌ಡ್ರಾಗನ್‌ 4 ಜೆನ್‌ 2 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಇದು 50 ಮೆಗಾಪಿಕ್ಸೆಲ್ ಡ್ಯುಯಲ್ ಕ್ಯಾಮೆರಾ ಹೊಂದಿದೆ. ಈ ಫೋನಿನಲ್ಲಿ 6.7 ಇಂಚಿನ ಅಮೋಲೆಡ್ ಡಿಸ್ಪ್ಲೇ ಲಭ್ಯವಿದೆ. ಜೊತೆಗೆ 16GB RAM, 5000mAh ಬ್ಯಾಟರಿ ಮತ್ತು 80W ವೇಗದ ಚಾರ್ಜರ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Vivo Y300 5G ಖರೀದಿಗೆ ಲಭ್ಯ; 2000 ಡಿಸ್ಕೌಂಟ್, 1500 ರೂ.ನ ಇಯರ್‌ಬಡ್‌ ಉಚಿತ!

ವಿವೋ Y300 5G ಫೋನಿನ ಬೆಲೆ ಮತ್ತು ಆಫರ್‌ಗಳು

ಕಂಪನಿಯು ವಿವೋ Y300 5G ಫೋನಿನ 8GB RAM + 128GB ಸ್ಟೋರೇಜ್ ರೂಪಾಂತರವನ್ನು 21,999 ರೂ.ಗೆ ಬಿಡುಗಡೆ ಮಾಡಿದೆ. 8GB RAM + 256GB ಸ್ಟೋರೇಜ್ ರೂಪಾಂತರವು 23,999 ರೂ.ಗೆ ಮಾರಾಟವಾಗುತ್ತಿದೆ. ನೀವು, ಟೈಟಾನಿಯಂ ಸಿಲ್ವರ್, ಫ್ಯಾಂಟಮ್ ಪರ್ಪಲ್ ಮತ್ತು ಎಮರಾಲ್ಡ್ ಗ್ರೀನ್ ಬಣ್ಣಗಳಲ್ಲಿ ಈ ಫೋನನ್ನು ಖರೀದಿಸಬಹುದು.

ವಿವೋ ಈ ಹೊಸ ಫೋನಿನ ಖರೀದಿ ಮೇಲೆ ಆಫರ್‌ಗಳನ್ನು ಸಹ ಘೋಷಿಸಿದೆ. ನೀವು, 2000 ರೂ. ತ್ವರಿತ ರಿಯಾಯಿತಿ ಮತ್ತು 1,499 ರೂ.ನ Vivo TWS 3e ಇಯರ್‌ಬಡ್‌ ಉಚಿತವಾಗಿ ಪಡೆಯಬಹುದು. ಈ ಆಫರ್‌ ನವೆಂಬರ್ 30 ರವರೆಗೆ ಮಾತ್ರ ಲಭ್ಯವಿರುತ್ತದೆ.

ವಿವೋ Y300 5G: ಟಾಪ್ 5 ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ವಿವೋ Y300 5G ಸ್ಮಾರ್ಟ್‌ಫೋನ್ 120Hz ರಿಫ್ರೆಶ್ ದರದೊಂದಿಗೆ 6.7 ಇಂಚಿನ ಪೂರ್ಣ ಎಚ್‌ಡಿ ಡಿಸ್ಪ್ಲೇ ಹೊಂದಿದೆ. ಇದು ಪಂಚ್ ಹೋಲ್ ಅಮೋಲೆಡ್ ಡಿಸ್ಪ್ಲೇ ಆಗಿದೆ. ಡಿಸ್ಪ್ಲೇಯು 2400 × 1080 ಪಿಕ್ಸೆಲ್‌ಗಳ ರೆಸಲ್ಯೂಶನ್‌ ಮತ್ತು 1800 ನಿಟ್ಸ್‌ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಇನ್ ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಮತ್ತು 2.5ಡಿ ಗ್ಲಾಸ್ ರಕ್ಷಣೆಯನ್ನು ಸಹ ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ

ಕಂಪನಿಯು ವಿವೋ Y300 5G ಫೋನನ್ನು ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 4 ಜೆನ್ 2 ಆಕ್ಟಾಕೋರ್ ಪ್ರೊಸೆಸರ್‌ನೊಂದಿಗೆ ಬಿಡುಗಡೆ ಮಾಡಿದೆ. ಈ ಪ್ರೊಸೆಸರ್‌ ಅನ್ನು 4 ನ್ಯಾನೋಮೀಟರ್‌ ಫ್ಯಾಬ್ರಿಕೇಶನ್‌ಗಳಲ್ಲಿ ತಯಾರಿಸಲಾಗಿದೆ. ಈ ಮೊಬೈಲ್ ಆಂಡ್ರಾಯ್ಡ್‌ 14 ಆಧಾರಿತ Funtouch ಆಪರೇಟಿಂಗ್ ಸಿಸ್ಟಮ್‌ 14ನಲ್ಲಿ ಕೆಲಸ ಮಾಡುತ್ತದೆ.

ಕ್ಯಾಮೆರಾ ಸೆಟಪ್

ವಿವೋ Y300 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ 50 ಮೆಗಾಪಿಕ್ಸೆಲ್ ಸೋನಿ ಮುಖ್ಯ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಲಭ್ಯವಿದೆ. ಈ ಫೋನ್ ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ, 32 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ವಿವೋ Y300 5G ಫೋನ್‌ 5000mAh ಸಾಮರ್ಥ್ಯ ಬ್ಯಾಟರಿಯೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 80W ವೇಗದ ಚಾರ್ಜಿಂಗ್‌ ಸೌಲಭ್ಯ ಕಲ್ಪಿಸಲಾಗಿದೆ.

ಇತರೆ ವೈಶಿಷ್ಟ್ಯಗಳು

ವಿವೋ Y300 5G ಫೋನ್ 8 5G ಬ್ಯಾಂಡ್‌ಗಳು, ಯುಎಸ್‌ಬಿ ಟೈಪ್ ಸಿ ಆಡಿಯೊ ಮತ್ತು ಸ್ಟಿರಿಯೊ ಸ್ಪೀಕರ್‌ಗಳನ್ನು ಹೊಂದಿದೆ. ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ ⁠IP64 ರೇಟಿಂಗ್ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು 5GHz ವೈ-ಫೈ, ಬ್ಲೂಟೂತ್ 5.0, ಡ್ಯುಯಲ್ 4G VoLTE ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

Best Mobiles in India

English summary
Vivo Y300 5G First Sale Start in india Today: know offers, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+