ಒಂದೇ ದಿನ ಬಾಕಿ! ನಾಳೆ Vivo Y300 5G ಲಾಂಚ್; 32MP ಸೆಲ್ಫಿ ಕ್ಯಾಮೆರಾ.. ಕಡಿಮೆ ಬೆಲೆ!
ವಿವೋ ಕಂಪನಿಯು ನಾಳೆ (ನ.21) ಭಾರತದಲ್ಲಿ ಹೊಸ ಫೋನನ್ನು ಬಿಡುಗಡೆ ಮಾಡಲಿದೆ. ಇದು ವಿವೋ Y300 5G (Vivo Y300 5G) ಹೆಸರಿನೊಂದಿಗೆ ಮಾರುಕಟ್ಟೆಗೆ ಎಂಟ್ರಿ ಕೊಡಲಿದೆ. ಕಂಪನಿಯು ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಟೀಸರ್ ಹಂಚಿಕೊಂಡಿದೆ. ಈ ಮೂಲಕ ಹೊಸ ಮೊಬೈಲ್‌ನ ವಿನ್ಯಾಸ ಮತ್ತು ಬಣ್ಣವನ್ನು ಬಹಿರಂಗಪಡಿಸಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಬನ್ನಿ, ವಿವೋ Y300 5G ಫೋನಿನ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.
ವಿವೋ ಕಳೆದ ತಿಂಗಳು ಭಾರತದಲ್ಲಿ Vivo Y300+ 5G ಮೊಬೈಲ್ ಬಿಡುಗಡೆ ಮಾಡಿತ್ತು. ಇದೀಗ, ವಿವೋ Y300 5G ಫೋನನ್ನು ಲಾಂಚ್ ಮಾಡಲು ಸಜ್ಜಾಗಿದೆ. ಈ ಫೋನ್ ಸ್ನಾಪ್‌ಡ್ರಾಗನ್ 4 ಜೆನ್ 2 ಪ್ರೊಸೆಸರ್ ಹೊಂದಿದೆ. ಫೋನಿನಲ್ಲಿ 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಇದೆ. ಇದು 6.7 ಇಂಚಿನ ಡಿಸ್ಪ್ಲೇ ಹೊಂದಿದೆ. ಇದರೊಂದಿಗೆ 512GB ಸ್ಟೋರೇಜ್, 5000mAh ಬ್ಯಾಟರಿ ಮತ್ತು 80W ವೇಗದ ಚಾರ್ಜರ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ವಿವೋ Y300 5G ಬಿಡುಗಡೆ ದಿನಾಂಕ ಮತ್ತು ಬೆಲೆ
ಕಂಪನಿಯು ವಿವೋ Y300 5G ಫೋನನ್ನು ನವೆಂಬರ್ 21 ರಂದು (ನಾಳೆ) ಮಧ್ಯಾಹ್ನ 12 ಗಂಟೆಗೆ ಬಿಡುಗಡೆ ಮಾಡುವುದಾಗಿ ತಿಳಿಸಿದೆ. ಈ ಮೊಬೈಲ್ ಎರಡು ಸ್ಟೋರೇಜ್ ಆಯ್ಕೆಗಳನ್ನು ಹೊಂದಿರಲಿದೆ. ಫೋನಿನ 8GB RAM + 128GB ಸ್ಟೋರೇಜ್ ರೂಪಾಂತರವನ್ನು 21,999 ರೂ.ಗೆ ಬಿಡುಗಡೆ ಮಾಡಲಾಗುವುದು. 8GB RAM + 256GB ಸ್ಟೋರೇಜ್ ಬೆಲೆ 23,999 ರೂ. ಆಗಿರಲಿದೆ. ಈ ಫೋನ್ ಟೈಟಾನಿಯಂ ಸಿಲ್ವರ್, ಫ್ಯಾಂಟಮ್ ಪರ್ಪಲ್ ಮತ್ತು ಎಮರಾಲ್ಡ್ ಗ್ರೀನ್ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿರುತ್ತದೆ.
ಈ ಸುದ್ದಿ ಓದಿದ್ದೀರಾ?: ದೊಡ್ಡ ಸಿಹಿಸುದ್ದಿ: 1 ಲಕ್ಷ ಯುವಕರಿಗೆ ತರಬೇತಿ.. ಶೇ.70 ರಷ್ಟು ಉದ್ಯೋಗ.. ಸಿದ್ದರಾಮಯ್ಯ ಘೋಷಣೆ
ವಿವೋ Y300 5G ಫೋನಿನ ಫೀಚರ್ಸ್
ಡಿಸ್ಪ್ಲೇ ವಿವರ
ವಿವೋ Y300 5G ಫೋನ್ 6.7 ಇಂಚಿನ 3D ಕರ್ವ್ ಡಿಸ್ಪ್ಲೇಯನ್ನು ಹೊಂದಿರಲಿದೆ. ಇದು ಪಂಚ್ ಹೋಲ್ ಶೈಲಿಯ ಪೂರ್ಣ ಹೆಚ್‌ಡಿ ಅಮೋಲೆಡ್ ಡಿಸ್ಪ್ಲೇ ಆಗಿದೆ. ಡಿಸ್ಪ್ಲೇಯು 1080 × 2400 ಪಿಕ್ಸೆಲ್ ರೆಸಲ್ಯೂಶನ್, 120Hz ರಿಫ್ರೆಶ್ ದರ ಮತ್ತು 1200 ನಿಟ್ಸ್ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಇದು ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಮತ್ತು ಸ್ಟೀರಿಯೋ ಸ್ಪೀಕರ್‌ಗಳನ್ನು ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ಮುಂಬರುವ ವಿವೋ Y300 5G ಮೊಬೈಲ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 4 ಜೆನ್ 2 ಆಕ್ಟಾ ಕೋರ್ ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಇದು 8 ಕೋರ್ ಪ್ರೊಸೆಸರ್ ಆಗಿದ್ದು, 4 ನ್ಯಾನೋಮೀಟರ್‌ನಲ್ಲಿ ತಯಾರಿಸಲಾಗಿದೆ. ಈ ಫೋನ್ ಆಂಡ್ರಾಯ್ಡ್ 14 ಆಧಾರಿತ Funtouch ಓಎಸ್‌ನಲ್ಲಿ ಕಾರ್ಯನಿರ್ವಹಿಸುತ್ತದೆ.
ಕ್ಯಾಮೆರಾ ಸೆಟಪ್
ವಿವೋ Y300 5G ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಇರಲಿದೆ. ಜೊತೆಗೆ ಎಐ (AI) ಔರಾ ಲೈಟ್ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 32 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಇದೆ.

ಬ್ಯಾಟರಿ ಮತ್ತು ಚಾರ್ಜಿಂಗ್
ಹೊಸ ವಿವೋ Y300 5G ಮೊಬೈಲ್ 5000mAh ಸಾಮರ್ಥ್ಯ ಬ್ಯಾಟರಿಯೊಂದಿಗೆ ಬಿಡುಗಡೆಯಾಗಲಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 80W ವೇಗದ ಚಾರ್ಜಿಂಗ್ ಸೌಲಭ್ಯ ನೀಡಲಾಗುತ್ತದೆ.
ಇತರೆ ವೈಶಿಷ್ಟ್ಯಗಳು
ಮುಂಬರುವ ವಿವೋ Y300 5G ಫೋನ್ ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP64 ರೇಟಿಂಗ್ ಪಡೆದಿದೆ. ಜೊತೆಗೆ ಹಲವು ಎಐ (AI) ವೈಶಿಷ್ಟ್ಯಗಳನ್ನು ಸಹ ಹೊಂದಿದೆ. ಇದರಲ್ಲಿ ಎಐ ಔರಾ ಲೈಟ್ ಪೋರ್ಟ್ರೇಟ್, ಎಐ ಡಾಕ್ಯುಮೆಂಟ್, ಎಐ ಎರೇಸರ್, ಎಐ ಸೂಪರ್‌ಮೂನ್, ಎಐ ವರ್ಧನೆ ಸೇರಿವೆ.


Click it and Unblock the Notifications








