Home
ಸುದ್ದಿಜಾಲ

ಮಾ.31ಕ್ಕೆ ಲಾಂಚ್! 7300mAh ಬ್ಯಾಟರಿ.. 512GB ಸ್ಟೋರೇಜ್.. ಬೆಲೆಯೂ ಸೋರಿಕೆ; ಯಾವ ಫೋನ್?

ವಿವೋ ಕಂಪನಿಯು ಹೊಸ ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಸಜ್ಜಾಗಿದೆ. ಇದನ್ನು ತನ್ನ 'Y300' ಸರಣಿಯ ಅಡಿಯಲ್ಲಿ ಪರಿಚಯಿಸುತ್ತಿದೆ. ಹೌದು, ಇದೇ ಮಾರ್ಚ್ 31 ರಂದು ವಿವೋ Y300 ಪ್ರೊ+ 5G (Vivo Y300 Pro+ 5G) ಮೊಬೈಲ್ ಅನ್ನು ಬಿಡುಗಡೆ ಮಾಡುವುದಾಗಿ ಕಂಪನಿ ಘೋಷಿಸಿದೆ. ನಿನ್ನೆ ಈ ಫೋನಿನ ಬಿಡುಗಡೆ ದಿನಾಂಕ ಬಹಿರಂಗಗೊಂಡಿದ್ದು, ಇದೀಗ ಮುಂಬರುವ ವಿವೋ Vivo ಫೋನಿನ ಬೆಲೆ ಮತ್ತು ವಿಶೇಷತೆಗಳು ಸೋರಿಕೆಯಾಗಿವೆ. ಬನ್ನಿ, ಈ ಫೋನ್ ಯಾವ ಬೆಲೆಗೆ ಲಭ್ಯವಿರುತ್ತದೆ ಮತ್ತು ವೈಶಿಷ್ಟ್ಯಗಳನ್ನು ತಿಳಿಯೋಣ.

ವಿವೋ Y300 ಪ್ರೊ+ 5G ಮೂರು ಸ್ಟೋರೇಜ್ ರೂಪಾಂತರಗಳಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ. ಈ ಫೋನಿನ ವಿಶೇಷತೆಗಳನ್ನು ನೋಡುವುದಾದರೆ, ಇದು 6.77 ಇಂಚಿನ ಡಿಸ್ಪ್ಲೇಯೊಂದಿಗೆ ಬರಲಿದೆ. ಈ ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7s ಜೆನ್ 3 ಪ್ರೊಸೆಸರ್ ಹೊಂದಿರುತ್ತದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಡ್ಯುಯಲ್ ಕ್ಯಾಮೆರಾ ಮತ್ತು 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಇರುತ್ತದೆ. ಹಾಗೆಯೇ 7300mAh ಬ್ಯಾಟರಿ ಮತ್ತು 90W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳೊಂದಿಗೆ ಮಾರುಕಟ್ಟೆಗೆ ಬರಲಿದೆ.

Vivo Y300 Pro+ ಬೆಲೆ ಲೀಕ್; 7300mAh ಬ್ಯಾಟರಿ ಖಚಿತ.. ಮಾ.31ಕ್ಕೆ ಲಾಂಚ್

ವಿವೋ Y300 ಪ್ರೊ+ 5G ಬೆಲೆ (ಸೋರಿಕೆ)

ವಿವೋ Y300 ಪ್ರೊ ಪ್ಲಸ್ 5G ಫೋನಿನ ಬೆಲೆ ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ. ಅದರಂತೆ ಫೋನಿನ 8GB RAM + 256GB ಸ್ಟೋರೇಜ್ ಬೆಲೆ 21,200 ಆಗಿರಲಿದೆ. 12GB RAM + 256GB ಸ್ಟೋರೇಜ್ ವೇರಿಯಂಟ್ 25,900 ರೂ. ಮತ್ತು 12GB RAM + 512GB ಸ್ಟೋರೇಜ್ ಆಯ್ಕೆಯು 29,400 ರೂ.ಗೆ ಬಿಡುಗಡೆಯಾಗಲಿದೆ. ವರದಿಯ ಪ್ರಕಾರ, ಈ ವಿವೋ ಫೋನ್ ಸಿಂಪಲ್ ಬ್ಲಾಕ್, ಸ್ಟಾರಿ ಸಿಲ್ವರ್ ಮತ್ತು ಮೈಕ್ರೋ ಪಿಂಕ್ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿರುತ್ತದೆ.

Take a Poll

ವಿವೋ Y300 ಪ್ರೊ+ 5G ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ವಿವೋ Y300 ಪ್ರೊ ಪ್ಲಸ್ 5G ಫೋನ್ 6.77 ಇಂಚಿನ ಅಮೋಲೆಡ್ ಡಿಸ್ಪ್ಲೇ ಹೊಂದಿರಲಿದೆ. ಇದು ಕ್ವಾಡ್ ಕರ್ವ್ಡ್ ಸ್ಕ್ರೀನ್ ಆಗಿದೆ. ಈ ಡಿಸ್ಪ್ಲೇಯು 2392 x 1080 ಪಿಕ್ಸೆಲ್ ರೆಸಲ್ಯೂಶನ್‌, 120Hz ರಿಫ್ರೆಶ್ ದರದ ಬೆಂಬಲ ಪಡೆದಿದೆ. ಈ ಮೊಬೈಲ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್ ತಂತ್ರಜ್ಞಾನ ಸಹ ಹೊಂದಿರುತ್ತದೆ.

ಪ್ರೊಸೆಸರ್ ಸಾಮರ್ಥ್ಯ

ವಿವೋ Y300 ಪ್ರೊ+ 5G ಮೊಬೈಲ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 7S ಜೆನ್ 3 ಆಕ್ಟಾಕೋರ್ ಪ್ರೊಸೆಸರ್ ಹೊಂದಿರಲಿದೆ. ಇದನ್ನು 4 ನ್ಯಾನೋಮೀಟರ್ ಫ್ಯಾಬ್ರಿಕೇಶನ್‌ಗಳ ಮೇಲೆ ನಿರ್ಮಿಸಲಾಗಿದೆ. ಈ ಫೋನ್ ಆಂಡ್ರಾಯ್ಡ್ 15 ಆಧಾರಿತ OriginOS 5 ಓಎಸ್‌ನೊಂದಿಗೆ ಕೆಲಸ ಮಾಡಲಿದೆ.

ಕ್ಯಾಮೆರಾ ಸೆಟಪ್

ವಿವೋ Y300 ಪ್ರೊ+ 5G ಸ್ಮಾರ್ಟ್‌ಫೋನ್‌ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿರುತ್ತದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಇರುತ್ತದೆ. ಹಾಗೆಯೇ ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಲೆನ್ಸ್ ಹೊಂದಿರುತ್ತದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 32 ಮೆಗಾಪಿಕ್ಸೆಲ್ ಸೆಲ್ಫಿ ಶೂಟರ್ ಅಳವಡಿಸಲಾಗಿರುತ್ತದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ವಿವೋ Y300 ಪ್ರೊ ಪ್ಲಸ್ 5G ಫೋನ್ ಶಕ್ತಿಶಾಲಿ ಬ್ಯಾಟರಿಯೊಂದಿಗೆ ಬಿಡುಗಡೆಯಾಗಲಿದೆ. ಈ ಫೋನ್ 7300mAh ಬ್ಯಾಟರಿ ಹೊಂದಿರುತ್ತದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 90W ವೇಗದ ಚಾರ್ಜಿಂಗ್ ಸೌಲಭ್ಯ ನೀಡಲಾಗುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು 5G, ಡ್ಯುಯಲ್ 4G VoLTE, ವೈ-ಫೈ, ಬ್ಲೂಟೂತ್, ಜಿಪಿಎಸ್, ಯುಎಸ್‌ಬಿ ಟೈಪ್ ಸಿ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿರಲಿದೆ.

Best Mobiles in India

English summary
Vivo Y300 Pro+ 5G price and specifications leaked before 31 march launch: What to Expect
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+