Home
ಸುದ್ದಿಜಾಲ

ಮಾರುಕಟ್ಟೆಯಲ್ಲಿ ಸದ್ದು ಮಾಡಲು ಬಂದೇ ಬಿಡ್ತು Vivo Y300 Pro ಫೋನ್‌; ಫೀಚರ್ಸ್‌ ಹೇಗಿವೆ?

ಪ್ರಮುಖ ಮೊಬೈಲ್‌ ಬ್ರ್ಯಾಂಡ್‌ಗಳಲ್ಲಿ ಒಂದಾದ ವಿವೋ (Vivo) ಮೊಬೈಲ್‌ ಕಂಪೆನಿಯು ಮಾರುಕಟ್ಟೆಯಲ್ಲಿ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿ ಗಮನ ಸೆಳೆದಿದೆ ಎನಿಸಿಕೊಂಡಿದೆ. ಆ ಪೈಕಿ ವಿವೋ Y ಸರಣಿಯ ಮೊಬೈಲ್‌ಗಳು ಸಹ ಜನಪ್ರಿತೆ ಪಡೆದಿದ್ದು, ಆ ಪೈಕಿ ಇತ್ತೀಚಿನ ವಿವೋ Y200 ಅಧಿಕ ಆಕರ್ಷಣೆ ಪಡೆದಿದೆ. ಅದರ ಮುಂದುವರಿದ ಭಾಗವಾಗಿ ಇದೀಗ ವಿವೋ ಸಂಸ್ಥೆಯು ನೂತನವಾಗಿ ವಿವೋ Y300 ಪ್ರೊ (Vivo Y300 Pro) ಫೋನ್‌ ಅನ್ನು ಬಿಡುಗಡೆ ಮಾಡಿದೆ.

ಹೌದು, ವಿವೋ ಕಂಪೆನಿ ಚೀನಾ ಮಾರುಕಟ್ಟೆಯಲ್ಲಿ ಹೊಸ ವಿವೋ Y300 ಪ್ರೊ (Vivo Y300 Pro) ಸ್ಮಾರ್ಟ್‌ಫೋನ್‌ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ ಈ ಫೋನ್ 6500mAh ಸಾಮರ್ಥ್ಯದ ಬ್ಯಾಟರಿ ಪವರ್ ಕೂಡಾ ಪಡೆದಿದೆ.

ಮಾರುಕಟ್ಟೆಯಲ್ಲಿ ಸದ್ದು ಮಾಡಲು ಬಂದೇ ಬಿಡ್ತು Vivo Y300 Pro; ಫೀಚರ್ಸ್‌ ಹೇಗಿವೆ?

ಅಲ್ಲದೇ ಈ ಫೋನ್‌ ಸ್ನಾಪ್‌ಡ್ರಾಗನ್ 6 ಜೆನ್‌ 1 SoC (Snapdragon 6 Gen 1) ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ಒಳಗೊಂಡಿದೆ. ಇದರ ಜೊತೆಗೆ 32 ಮೆಗಾ ಪಿಕ್ಸಲ್‌ ಸೆಲ್ಫಿ ಕ್ಯಾಮೆರಾ ಪಡೆದುಕೊಂಡಿದೆ. ಹಾಗಾದರೇ ವಿವೋ Y300 ಪ್ರೊ ಸ್ಮಾರ್ಟ್‌ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಎನ್ನುವುದನ್ನು ಮುಂದೆ ತಿಳಿಯೋಣ ಬನ್ನಿರಿ.

ವಿವೋ Y300 ಪ್ರೊ ಫೀಚರ್ಸ್‌ ಮಾಹಿತಿ

ವಿವೋ Y300 ಪ್ರೊ ಮೊಬೈಲ್‌ 6.67 ಇಂಚಿನ ಅಮೋಲೆಡ್‌ ಡಿಸ್‌ಪ್ಲೇಯನ್ನು ಪಡೆದಿದ್ದು, ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 120Hz ರಿಫ್ರೆಶ್ ರೇಟ್‌ ಹಾಗೂ 800 nits ಬ್ರೈಟ್ನೆಸ್‌ ಅನ್ನು ಸಪೋರ್ಟ್ ಮಾಡುತ್ತದೆ. ಇನ್ನು ಡಿಸ್‌ಪ್ಲೇ HDR10+ ಪ್ರಮಾಣೀಕರಣವನ್ನು ಹೊಂದಿದ್ದು, 394 PPI ಪಿಕ್ಸಲ್‌ ಸಾಂದ್ರತೆ ಅನ್ನು ಪಡೆದುಕೊಂಡಿದೆ.

ವಿವೋ Y300 ಪ್ರೊ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 6 ಜೆನ್‌ 1 SoC ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಇದರ ಜೊತೆಗೆ ಇದು Adreno 710 GPU ಸಪೋರ್ಟ್‌ ಸಹ ಪಡೆದಿದೆ. ಅಲ್ಲದೇ ಪ್ರೊಸೆಸರ್‌ಗೆ ಪೂರಕವಾಗಿ ಆಂಡ್ರಾಯ್ಡ್‌ 14 ಓಎಸ್‌ ನಲ್ಲಿ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 12GB RAM + 512GB ಆಂತರೀಕ ಸ್ಟೋರೇಜ್‌ ಅನ್ನು ಹೊಂದಿದೆ.

ವಿವೋ Y300 ಪ್ರೊ ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದ್ದು, ಇದರಲ್ಲಿ ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ದ್ವಿತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒದಗಿಸಲಾಗಿದೆ.

ವಿವೋ Y300 ಪ್ರೊ ಫೋನ್ 44W ಫಾಸ್ಟ್‌ ಚಾರ್ಜಿಂಗ್‌ ಸಪೋರ್ಟ್‌ನೊಂದಿಗೆ 6500 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಪವರ್ ಅನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌, USB ಟೈಪ್-C ಪೋರ್ಟ್, ಸ್ಟೀರಿಯೋ ಸ್ಪೀಕರ್‌ಗಳು, IP65 ಧೂಳು ಮತ್ತು ಸ್ಪ್ಲಾಶ್ ಪ್ರತಿರೋಧ, 5G, ಬ್ಲೂಟೂತ್ 5.1. ಆಯ್ಕೆಗಳನ್ನು ಪಡೆದಿದೆ.

ಇನ್ನು ಈ ಫೋನಿನ 8GB RAM + 128GB ಸ್ಟೋರೇಜ್‌ನ ಬೇಸ್‌ ವೇರಿಯಂಟ್‌ ಬೆಲೆಯು ಚೀನಾದಲ್ಲಿ CNY 1,799 (ಭಾರತದಲ್ಲಿ ಅಂದಾಜು 21,300ರೂ. ಗಳು ಎನ್ನಲಾಗಿದೆ). ಇನ್ನು ಇದು ಬ್ಲ್ಯಾಕ್ ಜೇಡ್, ವೈಟ್, ಗೋಲ್ಡ್ ಮತ್ತು ಟೈಟಾನಿಯಂ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ ಎಂದು ವರದಿಯಾಗಿದೆ.

Best Mobiles in India

English summary
Vivo Y300 Pro with Snapdragon 6 Gen 1 SoC launched in China. Check Price, Specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+