Home
ಸುದ್ದಿಜಾಲ

ಮಾ.31ಕ್ಕೆ ಲಾಂಚ್; ಬರಲಿವೆ ಎರಡು Vivo 5G ಫೋನ್‌ಗಳು.. ಫೀಚರ್ಸ್ ಬಹಿರಂಗ.. 6500mAh ಬ್ಯಾಟರಿ ಖಚಿತ

ವಿವೋ ಸಂಸ್ಥೆಯು ಮತ್ತೊಂದು ಹೊಸ ಮೊಬೈಲ್ ಬಿಡುಗಡೆಗೆ ಸಜ್ಜಾಗಿದೆ. ಇತ್ತೀಚೆಗೆ ವಿವೋ Y300 ಪ್ರೊ+ (Vivo Y300 Pro+) ಅನ್ನು ಮಾರ್ಚ್ 31 ರಂದು ಬಿಡುಗಡೆ ಮಾಡುವುದಾಗಿ ಘೋಷಿಸಿತ್ತು. ಇದೀಗ, ಮತ್ತೊಂದು ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೌದು, ಅದೇ ದಿನ ಕಂಪನಿಯು ವಿವೋ Y300t 5G (Vivo Y300t 5G) ಅನ್ನು ಬಿಡುಗಡೆ ಮಾಡಲಿದೆ. ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.

ವಿವೋ Y300t 5G ಮೊಬೈಲ್ ಶಕ್ತಿಯುತ ಬ್ಯಾಟರಿಯೊಂದಿಗೆ ಬಿಡುಗಡೆಯಾಗಲಿದೆ. ವರದಿಯ ಪ್ರಕಾರ, ಈ ಫೋನ್ 6500mAh ದೊಡ್ಡ ಬ್ಯಾಟರಿ ಮತ್ತು 44W ವೇಗದ ಚಾರ್ಜಿಂಗ್ ಹೊಂದಿರಲಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಪ್ರೊಸೆಸರ್ ಒಳಗೊಂಡಿರಲಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಲಭ್ಯವಿರುತ್ತದೆ. ಈ ಮೊಬೈಲ್ 6.72 ಇಂಚಿನ ಡಿಸ್ಪ್ಲೇ ಸೇರಿದಂತೆ ಅದ್ಭುತ ವೈಶಿಷ್ಟ್ಯಗಳೊಂದಿಗೆ ಬಿಡುಗಡೆಯಾಗಲಿದೆ.

ಮಾ.31ಕ್ಕೆ ಲಾಂಚ್; ಬರಲಿವೆ 2 Vivo ಫೋನ್‌.. 6500mAh ಬ್ಯಾಟರಿ.. ಫೀಚರ್ಸ್ ನೋಡಿ

ವಿವೋ Y300t 5G ಬಿಡುಗಡೆ ವಿವರ

ವಿವೋ Y300t 5G ಫೋನ್ ಮಾರ್ಚ್ 31 ರಂದು ಮಧ್ಯಾಹ್ನ 2.30ಗೆ ಅಧಿಕೃತವಾಗಿ ಬಿಡುಗಡೆಯಾಗಲಿದೆ. ಕಂಪನಿಯು ಈಗಾಗಲೇ ಬಿಡುಗಡೆ ಕಾರ್ಯಕ್ರಮವನ್ನು ಆಯೋಜಿಸಿದೆ. ಈ ಸಮಯದಲ್ಲಿ ವಿವೋ Y300t ಮತ್ತು ವಿವೋ Y300 ಪ್ರೊ+ ಫೋನನ್ನು ಅನಾವರಣಗೊಳಿಸಲಿದೆ. ಈ ವಿವೋ ಲಾಂಚ್ ಈವೆಂಟ್ ಕಾರ್ಯಕ್ರಮವನ್ನು ಮೈಕ್ರೋಬ್ಲಾಗಿಂಗ್ ಸೈಟ್ ವೀಬೊ ಮತ್ತು ವಿವೋ ವೆಬ್‌ಸೈಟ್‌ನಲ್ಲಿ ನೇರಪ್ರಸಾರ (ಲೈವ್) ವೀಕ್ಷಿಸಬಹುದು.

ವಿವೋ Y300t 5G ವೈಶಿಷ್ಟ್ಯಗಳು (ಸೋರಿಕೆ)

ಡಿಸ್ಪ್ಲೇ ವಿವರ

ವಿವೋ Y300t 5G ಫೋನ್ 6.72 ಇಂಚಿನ ಫುಲ್ ಎಚ್‌ಡಿ ಪ್ಲಸ್ ಡಿಸ್ಪ್ಲೇಯೊಂದಿಗೆ ಬರುತ್ತದೆ. ಇದು ಪಂಚ್ ಹೋಲ್ ಶೈಲಿಯ ಎಲ್‌ಸಿಡಿ ಡಿಸ್ಪ್ಲೇ ಆಗಿರಲಿದೆ. ಈ ಸ್ಕ್ರೀನ್ 2400 x 1080 ಪಿಕ್ಸೆಲ್ ರೆಸಲ್ಯೂಶನ್‌ ಬೆಂಬಲ ಹೊಂದಿರಲಿದೆ. ಇದರೊಂದಿಗೆ 120Hz ರಿಫ್ರೆಶ್ ದರ ಮತ್ತು 1050 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿರುತ್ತದೆ.

ಪ್ರೊಸೆಸರ್ ಸಾಮರ್ಥ್ಯ

ವಿವೋ Y300t 5G ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಆಕ್ಟಾ ಕೋರ್ ಪ್ರೊಸೆಸರ್ ಹೊಂದಿರಲಿದೆ. ಇದನ್ನು 6 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳ ಆಧಾರದ ಮೇಲೆ ತಯಾರಿಸಲಾಗಿದೆ. ಈ ಫೋನ್ ಆಂಡ್ರಾಯ್ಡ್ 15 ಆಧಾರಿತ OriginOS 5 ಓಎಸ್‌ ಜೊತೆಗೆ ಕೆಲಸ ಮಾಡುತ್ತದೆ. ಇದು 2.5 GHz ವರೆಗಿನ ಗಡಿಯಾರದ ವೇಗದಲ್ಲಿ ಕಾರ್ಯನಿರ್ವಹಿಸುವ ಸಾಮರ್ಥ್ಯವನ್ನು ಹೊಂದಿದೆ.

Take a Poll

ಕ್ಯಾಮೆರಾ ಸೆಟಪರ್

ವಿವೋ Y300t 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿರುವ ಸಾಧ್ಯತೆಯಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಒದಗಿಸಲಾಗುವುದು ಹಾಗೆಯೇ ಈ ಫೋನ್ 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಒಳಗೊಂಡಿರಲಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ವಿವೋ Y300t 5G ಮೊಬೈಲ್ 8 ಮೆಗಾಪಿಕ್ಸೆಲ್ ಸೆಲ್ಫಿ ಶೂಟರ್ ಹೊಂದಿರಲಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ವಿವೋ Y300t 5G ಫೋನ್ ದೊಡ್ಡ ಬ್ಯಾಟರಿಯೊಂದಿಗೆ ಬಿಡುಗಡೆಯಾಗಲಿದೆ. ಈ ಫೋನ್‌ನಲ್ಲಿ 6,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ತ್ವರಿತವಾಗಿ ಚಾರ್ಜ್ ಮಾಡಲು, 44W ವೇಗದ ಚಾರ್ಜಿಂಗ್ ತಂತ್ರಜ್ಞಾನವನ್ನು ಒದಗಿಸಲಾಗಿದೆ. ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಈ ಫೋನ್ ಡ್ಯುಯಲ್ 4G VoLTE, ವೈ-ಫೈ, ಬ್ಲೂಟೂತ್, ಜಿಪಿಎಸ್‌, ಯುಎಸ್‌ಬಿ ಟೈಪ್ ಸಿ ಸೇರಿದಂತೆ ಮುಂತಾದ ವೈಶಿಷ್ಟ್ಯಗಳನ್ನು ಹೊಂದಿರಲಿದೆ.

ವಿವೋ Y300 ಪ್ರೊ+ ಮತ್ತು ವಿವೋ Y300t 5G ಮೊಬೈಲ್‌ಗಳು ಮೊದಲು ಮಾರ್ಚ್ 31 ರಂದು ಚೀನಾ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿವೆ. ಬಳಿಕ ಭಾರತ ಸೇರಿದಂತೆ ಇತರೆ ಮಾರುಕಟ್ಟೆಗಳಿಗೆ ಎಂಟ್ರಿ ಕೊಡಲಿವೆ.

Best Mobiles in India

English summary
Vivo Y300t launch on march 31th with Vivo Y300 Pro+: check features, specifications and more
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+