ವಿವೋ Y30G ಸ್ಮಾರ್ಟ್‌ಫೋನ್ ಬಿಡುಗಡೆ! ಆಕರ್ಷಕ ಡಿಸ್‌ಪ್ಲೇ ವಿನ್ಯಾಸ!
ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ವಿವೋ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿರುವ ವಿವೋ ಸ್ಮಾರ್ಟ್‌ಫೋನ್ ಪ್ರಿಯರ ಮನಗೆದ್ದಿದೆ. ಸದ್ಯ ಇದೀಗ ತನ್ನ ಹೊಸ ವಿವೋ Y30G ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ P65 ಪ್ರೊಸೆಸರ್ ಅನ್ನು ಹೊಂದಿದೆ.

ಹೌದು, ವಿವೋ ಸಂಸ್ಥೆ ಹೊಸ ವಿವೋ Y30G ಸ್ಮಾರ್ಟ್‌ಫೋನ್ ಅನ್ನು ಚೀನಾದಲ್ಲಿ ಬಿಡುಗಡೆ ಮಾಡಿದೆ. ಇದು 6.51 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದ್ದು, ವಾಟರ್‌ಡ್ರಾಪ್ ಶೈಲಿಯ ಡಿಸ್‌ಪ್ಲೇ ನಾಚ್ ವಿನ್ಯಾಸವನ್ನು ಪಡೆದುಕೊಂಡಿದೆ. ಜೊತೆಗೆ ಇದು ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇನ್ನು ವಿವೋ Y30Gಫೋನ್ ಮೂರು ವಿಭಿನ್ನ ಬಣ್ಣ ಆಯ್ಕೆಗಳನ್ನು ಸಹ ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಒಳಗೊಂಡಿರುವ ಫೀಚರ್ಸ್‌ಗಳೇನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿಶೇಷ
ವಿವೋ Y30G ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.51-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇ ವಾಟರ್ ಡ್ರಪ್ ನಾಚ್ ಶೈಲಿಯನ್ನು ಹೊಂದಿದೆ.

ಪ್ರೊಸೆಸರ್
ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ P65 SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ ಒರಿಜಿನೋಸ್ 1.0 ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಜೊತೆಗೆ 8GB RAM+128GB ಇಂರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ
ಇನ್ನು ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ , ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ
ವಿವೋ Y30G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ವೈ-ಫೈ, ಬ್ಲೂಟೂತ್ 5.0, GPS, ಮೈಕ್ರೋ-USB ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಜೊತೆಗೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಸಹ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ವಿವೋ Y30G ಸ್ಮಾರ್ಟ್‌ಫೋನ್ ಏಕೈಕ 8GB RAM + 128GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಆಯ್ಕೆಯ ಬೆಲೆ CNY 1,499 (ಸುಮಾರು ರೂ. 16,600) ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಆಕ್ವಾ ಬ್ಲೂ, ಡಾನ್ ವೈಟ್ ಮತ್ತು ಅಬ್ಸಿಡಿಯನ್ ಬ್ಲ್ಯಾಕ್ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇದು ಭಾರತದಲ್ಲಿ ಯಾವಾಗ ಬಿಡುಗಡೆ ಆಗಲಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಇಲ್ಲ.


Click it and Unblock the Notifications




