ಭಾರತದಲ್ಲಿ ಬಜೆಟ್‌ ಬೆಲೆಯ ವಿವೋ Y31 ಸ್ಮಾರ್ಟ್‌ಫೋನ್‌ ಬಿಡುಗಡೆ!

|

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ವಿವೋ ಕಂಪೆನಿ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಇದೀಗ ತನ್ನ Y ಸರಣಿಯಲ್ಲಿ ಹೊಸ ವಿವೋ Y31 ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದ್ದು, ಎಲೆಕ್ಟ್ರಾನಿಕ್ ಇಮೇಜ್ ಸ್ಟೆಬಿಲೈಸೇಶನ್ (EIS) ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 662 SoC ಪ್ರೊಸೆಸರ್‌ ಅನ್ನು ಹೊಂದಿದೆ.

ವಿವೋ Y31

ಹೌದು, ವಿವೋ ಕಂಪೆನಿ ಭಾರತದಲ್ಲಿ ವಿವೋ Y31 ಸ್ಮಾರ್ಟ್‌ಫೋನ್‌ ಅನ್ನು ಅನಾವರಣಗೊಳಿಸಿದೆ. ಇದು ವಾಟರ್‌ಡ್ರಾಪ್-ಶೈಲಿಯ ಡಿಸ್‌ಪ್ಲೇ ನಾಚ್ ವಿನ್ಯಾಸವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಓಷನ್‌ ಬ್ಲೂ ಮತ್ತು ರೇಸಿಂಗ್‌ ಬ್ಲ್ಯಾಕ್‌ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಒಳಗೊಂಡಿರುವ ಫೀಚರ್ಸ್‌ಗಳೇನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ವಿವೊ Y31 ಸ್ಮಾರ್ಟ್‌ಫೋನ್‌ 1,080x2,408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.58-ಇಂಚಿನ ಫುಲ್‌-ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ ವಾಟರ್‌ ಡ್ರಾಪ್‌ ಶೈಲಿಯ ಡಿಸ್‌ಪ್ಲೇ ನಾಚ್‌ ಅನ್ನು ಹೊಂದಿದೆ

ಪ್ರೊಸೆಸರ್‌

ಪ್ರೊಸೆಸರ್‌

ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 662 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಮೆಮೊರಿ ಕಾರ್ಡ್‌ ಬೆಂಬಲದ ಬಗ್ಗೆ ಯಾವುದೇ ಮಾಹಿತಿ ಇಲ್ಲ.

ಕ್ಯಾಮೆರಾ

ಕ್ಯಾಮೆರಾ

ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಪ್ರೈಮರಿ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಬೊಕೆ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದು ಇಐಎಸ್ ಮತ್ತು ಸೂಪರ್ ನೈಟ್ ಮೋಡ್ ಅನ್ನು ಬೆಂಬಲಿಸುತ್ತದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ವಿವೋ Y 31 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ಡ್ಯುಯಲ್-ಬ್ಯಾಂಡ್ ವೈ-ಫೈ, ಬ್ಲೂಟೂತ್ 5.0, GPS, FM ರೇಡಿಯೋ ಮತ್ತು USB ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ವಿವೋ Y31 ಸ್ಮಾರ್ಟ್‌ಫೋನ್‌ ಬೆಲೆ ಬೇಸ್‌ ಮಾಡೆಲ್‌ 6GB RAM + 128GB ಶೇಖರಣಾ ರೂಪಾಂತರಕ್ಕೆ 16,490 ರೂ. ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಓಷನ್ ಬ್ಲೂ ಮತ್ತು ರೇಸಿಂಗ್ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಬರುತ್ತದೆ. ಇದು ಅಮೆಜಾನ್, ಫ್ಲಿಪ್‌ಕಾರ್ಟ್, ಪೇಟಿಎಂ ಮತ್ತು ವಿವೋ ಇಂಡಿಯಾ ಇ-ಸ್ಟೋರ್ ಮೂಲಕ ಖರೀದಿಸಲು ಲಭ್ಯವಿರುತ್ತದೆ ಮತ್ತು ದೇಶದ ಎಲ್ಲಾ ಪ್ರಮುಖ ಆಫ್‌ಲೈನ್ ಚಿಲ್ಲರೆ ಅಂಗಡಿಗಳಲ್ಲಿ ಲಭ್ಯವಿದೆ. ಇದಲ್ಲದೆ HDFC ಬ್ಯಾಂಕ್ ಕ್ರೆಡಿಟ್ ಕಾರ್ಡ್‌ಗಳು ಅಥವಾ ಡೆಬಿಟ್ ಕಾರ್ಡ್ EMI ವಹಿವಾಟುಗಳೊಂದಿಗೆ ವಿವೋ Y31 ಖರೀದಿಸುವ ಗ್ರಾಹಕರು ರೂ. 1,000. ಪಡೆಯಬಹುದಾಗಿದೆ. ಇದಲ್ಲದೆ, ಬಜಾಜ್ ಫಿನ್‌ಸರ್ವ್, ಹೋಮ್ ಕ್ರೆಡಿಟ್, ಐಡಿಎಫ್‌ಸಿ ಫಸ್ಟ್ ಬ್ಯಾಂಕ್, ಎಚ್‌ಡಿಬಿ ಫೈನಾನ್ಷಿಯಲ್ ಸರ್ವೀಸಸ್, ಟಿವಿಎಸ್ ಕ್ರೆಡಿಟ್ ಮತ್ತು ಐಸಿಐಸಿಐ ಬ್ಯಾಂಕ್ ಮೂಲಕ ಶೂನ್ಯ ಡೌನ್ ಪಾವತಿ ಯೋಜನೆಗಳು ಸಹ ಲಭ್ಯ ಇರಲಿವೆ.

Best Mobiles in India

English summary
Vivo Y31 With Snapdragon 662 SoC Launched in India.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X