ವಿವೋ Y31S ಸ್ಟ್ಯಾಂಡರ್ಡ್ ಆವೃತ್ತಿಯ ಸ್ಮಾರ್ಟ್‌ಫೋನ್ ಬಿಡುಗಡೆ!
ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ಸಂಸ್ಥೆ ವಿವೋ ಕಂಪೆನಿ ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿದೆ. ಕಂಪನಿಯು ಇದೀಗ ಹೊಸದಾಗಿ ವಿವೋ Y31S ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 700SoC ಪ್ರೊಸೆಸರ್ ಅನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 5,000mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದುಕೊಂಡಿದೆ.

ಹೌದು, ವಿವೋ ಕಂಪೆನಿ ವಿವೋ Y31S ಸ್ಟ್ಯಾಂಡರ್ಡ್ ಆವೃತ್ತಿಯನ್ನು ಚೀನಾದಲ್ಲಿ ಲಾಂಚ್ ಮಾಡಿದೆ. ಇದು 6.51 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದ್ದು, ಡ್ಯುಯೆಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ 6GB RAM+128GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಆಯ್ಕೆಯಲ್ಲಿ ಲಭ್ಯವಾಗಲಿದೆ. ಹಾಗಾದರೇ ವಿವೋ Y31S ಸ್ಮಾರ್ಟ್‌ಫೋನ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ವಿವೋ Y31S ಸ್ಮಾರ್ಟ್‌ಫೋನ್ 720x1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.51 ಇಂಚಿನ ಹೆಚ್‌ಡಿ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, ಸ್ಕ್ರೀನ್ ಟು ಬಾಡಿ ನಡುವಿನ ಅನುಪಾತ 89% ರಷ್ಟಿದೆ.

ಪ್ರೊಸೆಸರ್ ಸಾಮರ್ಥ್ಯ
ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 700SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 6GB RAM+128GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ವೇರಿಯೆಂಟ್ ಆಯ್ಕೆಯಲ್ಲಿ ಲಭ್ಯವಾಗಲಿದೆ.

ಕ್ಯಾಮೆರಾ ವಿಶೇಷ
ಇನ್ನು ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ
ವಿವೋ Y31S ಸ್ಟ್ಯಾಂಡರ್ಡ್ ಆವೃತ್ತಿಯು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ಡ್ಯುಯೆಲ್ ಎಂಜಿನ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಸಿಂಗಲ್ ಚಾರ್ಜನಲ್ಲಿ 25.83 ಗಂಟೆಗಳ 4G VoLTE ಟಾಕ್‌ಟೈಮ್ ಅನ್ನು ನೀಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ವೈ-ಫೈ, ಬ್ಲೂಟೂತ್ 5.1, USB ಟೈಪ್-ಸಿ, ಮತ್ತು 3.5mm ಹೆಡ್ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ವಿವೋ Y31S ಸ್ಟ್ಯಾಂಡರ್ಡ್ ಎಡಿಷನ್ ಬೆಲೆ ಏಕೈಕ 6GB RAM + 128GB ಶೇಖರಣಾ ರೂಪಾಂತರಕ್ಕೆ CNY 1,699 (ಸುಮಾರು ರೂ. 19,100) ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಪ್ರಸ್ತುತ ಚೀನಾದಲ್ಲಿ ಲೇಕ್ ಲೈಟ್ ಬ್ಲೂ, ಟೈಟಾನಿಯಂ ಗ್ರೇ ಮತ್ತು ವೈಟ್ ಕಲರ್ ಆಯ್ಕೆಗಳಲ್ಲಿ ಖರೀದಿಸಲು ಲಭ್ಯವಿದೆ. ಇನ್ನು ಭಾರತದಲ್ಲಿ ಯಾವಾಗ ಲಭ್ಯವಾಗಲಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.


Click it and Unblock the Notifications