Home
ಸುದ್ದಿಜಾಲ

ವಿವೋ Y31s ಸ್ಮಾರ್ಟ್‌ಫೋನ್‌ ಬಿಡುಗಡೆ!..18W ಫಾಸ್ಟ್‌ ಚಾರ್ಜಿಂಗ್‌ ವಿಶೇಷ!

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ವಿವೋ ಸಂಸ್ಥೆ ತನ್ನ Y ಸರಣಿಯಲ್ಲಿ ಹೊಸ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಇದನ್ನು ವಿವೊ Y31s ಸ್ಮಾರ್ಟ್‌ಫೋನ್‌ ಎಂದು ಹೆಸರಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಇತ್ತೀಚೆಗೆ ಘೋಷಿಸಲಾದ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 480 SoC ಪ್ರೊಸೆಸರ್‌ ಬಲವನ್ನು ಪಡದುಕೊಂಡಿದೆ. ಇದು ಬಜೆಟ್ ಸ್ನೇಹಿ ಫೋನ್ ಆಗಿದ್ದು, ಡ್ಯುಯೆಲ್‌ ರಿಯರ್‌ ಕ್ಯಾಮೆರಾ ಹೊಂದಿದೆ.

ವಿವೋ

ಹೌದು, ವಿವೋ ಕಂಪೆನಿ ತನ್ನ ಹೊಸ Y31s ಸ್ಮಾರ್ಟ್‌ಫೋನ್ ಅನ್ನು ಚೀನಾದಲ್ಲಿ ಬಿಡುಗಡೆ ಮಾಡಿದೆ. ಇದು ಎರಡು RAM ಮತ್ತು ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆಯಲ್ಲಿ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.58 ಇಂಚಿನ ಫುಲ್‌ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಏನೆಲ್ಲಾ ವಿಶೇಷತೆ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ವಿವೋ Y31s ಸ್ಮಾರ್ಟ್‌ಫೋನ್‌ 1,080x2,408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.58 ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಮತ್ತು 90.61% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 480 ಆಕ್ಟಾ-ಕೋರ್ SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಫಂಟೌಚ್ ಓಎಸ್ 10.5 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಇದು 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ.

ಕ್ಯಾಮೆರಾ

ಕ್ಯಾಮೆರಾ

ವಿವೊ Y31s ಸ್ಮಾರ್ಟ್‌ಫೋನ್‌ ಡ್ಯುಯೆಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಪ್ರೈಮರಿ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ಫಾಸ್ಟ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G Volte, ಡ್ಯುಯಲ್-ಬ್ಯಾಂಡ್ ವೈ-ಫೈ, ಬ್ಲೂಟೂತ್ 5.1, GPS, 3.5mm ಹೆಡ್‌ಫೋನ್ ಜ್ಯಾಕ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ವಿವೊ Y31s ಸ್ಮಾರ್ಟ್‌ಫೋನ್‌ 4GB RAM + 128GB ರೂಪಾಂತರಕ್ಕೆ CNY 1,498 (ಸುಮಾರು ರೂ. 17,000) ಮತ್ತು 6GB RAM + 128GB ರೂಪಾಂತರಕ್ಕೆ CNY 1,698 (ಸುಮಾರು ರೂ. 19,300) ಬೆಲೆಯನ್ನು ಹೊಂದಿದೆ. ಇದು ಬೂದು, ಕೆಂಪು ಮತ್ತು ಬೆಳ್ಳಿ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಯಾವಾಗ ಲಭ್ಯವಾಗಲಿದೆ ಅನ್ನೊ ಮಾಹಿತಿ ಇನ್ನು ಬಹಿರಂಗವಾಗಿಲ್ಲ.

Best Mobiles in India

English summary
Vivo Y31s With Snapdragon 480 SoC, 5G Support, 90Hz Refresh Rate Launched.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+