Home
ಸುದ್ದಿಜಾಲ

ವಿವೋ Y32 ಸ್ಮಾರ್ಟ್‌ಫೋನ್‌ ಬಿಡುಗಡೆ! ವಿಶೇಷತೆ ಏನು?

ವಿವೋ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ತನ್ನ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನ ಮಾರುಕಟ್ಟೆಯಲ್ಲಿ ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ವಿವೋ Y32 ಸ್ಮಾರ್ಟ್‌ಫೋನ್‌ ಅನ್ನು ಲಾಂಚ್‌ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ವಾಟರ್‌ ಡ್ರಾಪ್‌ ಶೈಲಿಯ ಡಿಸ್‌ಪ್ಲೇ ನಾಚ್‌ ಅನ್ನು ಹೊಂದಿದೆ. ಇದು ಕ್ವಾಲ್‌ಕಾಮ್‌ನ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ವಿವೋ Y32 ಸ್ಮಾರ್ಟ್‌ಫೋನ್‌

ಹೌದು, ವಿವೋ ಕಂಪೆನಿ ಹೊಸ ವಿವೋ Y32 ಸ್ಮಾರ್ಟ್‌ಫೋನ್‌ ಅನ್ನು ಚೀನಾ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ 6.51-ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಸಿಂಗಲ್‌ ಚಾರ್ಜ್‌ನಲ್ಲಿ 27 ದಿನಗಳ ಸ್ಟ್ಯಾಂಡ್‌ಬೈ ಟೈಂ ಅಥವಾ 18 ಗಂಟೆಗಳ ಟಾಕ್‌ಟೈಮ್ ಅನ್ನು ನೀಡಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ವಿಶೇಷ

ಡಿಸ್‌ಪ್ಲೇ ವಿಶೇಷ

ವಿವೋ Y32 ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.51-ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಪಡೆದಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್ 11 ನಲ್ಲಿ OriginOS 1.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ.

ಕ್ಯಾಮೆರಾ ಹೇಗಿದೆ?

ಕ್ಯಾಮೆರಾ ಹೇಗಿದೆ?

ವಿವೋ Y32 ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ f/2.2 ಲೆನ್ಸ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ f/2.4 ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ ಸೆಲ್ಫಿಗಳು ಮತ್ತು ವೀಡಿಯೊ ಚಾಟ್‌ಗಳಿಗಾಗಿ 8-ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ವಿವೋ Y32 ಸ್ಮಾರ್ಟ್‌ಫೋನ್‌ 5,000mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VoLTE, Wi-Fi, ಬ್ಲೂಟೂತ್ v5.0, GPS/ A-GPS, USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಒಳಗೊಂಡಿದೆ. ಈ ಫೋನ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಕೂಡ ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಈ ಸ್ಮಾರ್ಟ್‌ಫೋನ್‌ 8GB RAM + 128GB ಸ್ಟೋರೇಜ್ ರೂಪಾಂತರಕ್ಕಾಗಿ CNY 1,399 (ಸುಮಾರು ರೂ. 16,700) ಬೆಲೆಗೆ ನಿಗದಿಪಡಿಸಲಾಗಿದೆ. ಇದು ಫಾಗ್ಗಿ ನೈಟ್ ಮತ್ತು ಹರುಮಿ ಬ್ಲೂ ಬಣ್ಣಗಳಲ್ಲಿಯೂ ಲಭ್ಯವಿರುತ್ತದೆ. ಈ ಫೋನ್‌ ಯಾವಾಗ ಮಾರಾಟವಾಗಲಿದೆ ಅನ್ನೊದು ಇನ್ನು ಕೂಡ ಬಹಿರಂಗವಾಗಿಲ್ಲ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಲಭ್ಯವಾಗುವುದರ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.

ವಿವೋ X70ಪ್ರೊ

ಇನ್ನು ಇತ್ತೀಚಿಗೆ ವಿವೊ ಕಂಪೆನಿ ಭಾರತದಲ್ಲಿ ವಿವೋ X70 ಸರಣಿ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿತ್ತು. ಇದರಲ್ಲಿ ವಿವೋ X70ಪ್ರೊ ಸ್ಮಾರ್ಟ್‌ಫೋನ್‌ 6.56 ಇಂಚಿನ ಫುಲ್ ಹೆಚ್‌ಡಿ ಪ್ಲಸ್‌ AMOLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಹೊಂದಿದ್ದು, HDR10 ಬೆಂಬಲವನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 1200 SoC ಪ್ರೊಸೆಸರ್‌ ಬೆಂಬಲವನ್ನು ಪಡೆದುಕೊಂಡಿದೆ. ಹಾಗೆಯೇ ಈ ಫೋನ್‌ 8GB RAM ಮತ್ತು 128GB ಇಂಟರ್‌ ಸ್ಟೋರೇಜ್ ಅನ್ನು ಹೊಂದಿದೆ. ಇದು ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766V ಅಲ್ಟ್ರಾ-ಸೆನ್ಸಿಂಗ್ ಗಿಂಬಲ್ ಕ್ಯಾಮೆರಾವನ್ನು ಒಳಗೊಂಡಿದೆ. ಎರಡು ಮತ್ತು ಮೂರನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸರ್‌ ಹೊಂದಿದೆ. ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಪೆರಿಸ್ಕೋಪ್ ಲೆನ್ಸ್ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 4,450mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 44W ಫ್ಲ್ಯಾಶ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

Best Mobiles in India

English summary
Vivo Y32 has quietly been listed by the Chinese company as a new model in its Y series.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+