Vivo Y33s ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಈಗ ಭಾರೀ ಏರಿಕೆ!..ಹೊಸ ಬೆಲೆ ಎಷ್ಟು?

|

ಜನಪ್ರಿಯ ಮೊಬೈಲ್ ಕಂಪನಿಗಳಲ್ಲಿ ವಿವೋ ಸಹ ಸ್ಥಾನ ಪಡೆದಿದೆ. ಬಜೆಟ್‌ ಪ್ರೈಸ್‌ ಟ್ಯಾಗ್‌ನಲ್ಲಿ ಹಲವು ಫೋನ್‌ಗಳನ್ನು ಪರಿಚಯಿಸಿ ಗ್ರಾಹಕರ ಗಮನ ಸೆಳೆದಿರುವ ವಿವೋ ಕೆಲವು ಹೊಸ ಫೀಚರ್ಸ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಆದರೆ ವಿವೋ ಮೊಬೈಲ್ ಕಂಪನಿಯು ತನ್ನ ಜನಪ್ರಿಯ ಫೋನ್‌ ಬೆಲೆಯಲ್ಲಿ ಇದೀಗ ದಿಢೀರ್ ಏರಿಕೆ ಮಾಡಿದ್ದು, ಈ ಮೂಲಕ ಗ್ರಾಹಕರಿಗೆ ಭರ್ಜರಿ ಶಾಕ್ ನೀಡಿದೆ.

ಸ್ಟೋರೇಜ್‌

ಹೌದು, ವಿವೋ ಸಂಸ್ಥೆಯು ತನ್ನ ವಿವೋ Y33s ಸ್ಮಾರ್ಟ್‌ಫೋನ್‌ ದರದಲ್ಲಿ ಈಗ 1,000ರೂ.ಗಳ ಹೆಚ್ಚಳ ಮಾಡಿದೆ. ಬೆಲೆ ಹೆಚ್ಚಳವು ವಿವೋ ವೆಬ್‌ಸೈಟ್‌ನಲ್ಲಿ ಕಾಣಿಸಿದೆ. ಬಜೆಟ್‌ ದರದಲ್ಲಿದ್ದ ಈ ಫೋನ್ ಈಗ ಗ್ರಾಹಕರಿಗೆ ಹೊರೆ ನೀಡಿದೆ. ಈಫೋನ್ 8GB + 128GB ಸ್ಟೋರೇಜ್‌ ವೇರಿಯಂಟ್ ದರವು 17,990ರೂ. ಆಗಿತ್ತು. ಆದರೆ ಈಗ ಬೆಲೆ ಏರಿಕೆಯಿಂದ 18,990ರೂ.ಗಳಿಗೆ ಲಭ್ಯವಾಗಲಿದೆ. ಹಾಗಾದರೇ ವಿವೋ Y33s ಸ್ಮಾರ್ಟ್‌ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ ಪಡೆದಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಆಕರ್ಷಕ ಡಿಸ್‌ಪ್ಲೇ ರಚನೆ

ಆಕರ್ಷಕ ಡಿಸ್‌ಪ್ಲೇ ರಚನೆ

ವಿವೋ Y33s ಸ್ಮಾರ್ಟ್‌ಫೋನ್ 2,408 x 1,080 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿರಲಿದೆ. ಡಿಸ್‌ಪ್ಲೇಯು Halo ಫುಲ್‌ ವ್ಯೂವ್ ಮಾದರಿಯನ್ನು ಪಡೆದಿದ್ದು, ಪಂಚ್‌ಹೋಲ್ ವಿನ್ಯಾಸ ಹೊಂದಿದೆ.

ಪ್ರೊಸೆಸರ್ ಬಲ ಯಾವುದು

ಪ್ರೊಸೆಸರ್ ಬಲ ಯಾವುದು

ವಿವೋ Y33s ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೋ G80 SoC ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಇದಕ್ಕೆ ಬೆಂಬಲವಾಗಿ ಫನ್‌ಟಚ್ ಆಂಡ್ರಾಯ್ಡ್ 11 ಓಎಸ್‌ ಸಪೋರ್ಟ್‌ ಇದೆ. ಇನ್ನು ಈ ಸ್ಮಾರ್ಟ್‌ಫೋನ್ 8GB RAM ಸಾಮರ್ಥ್ಯ ಮತ್ತು 128GB ಆಂತರಿಕ ಸ್ಟೋರೇಜ್‌ನ ಆಯ್ಕೆಯನ್ನು ಹೊಂದಿದೆ. ಎಸ್‌ಡಿ ಕಾರ್ಡ್‌ ಮೂಲಕ ಮೆಮೊರಿ ಹೆಚ್ಚಿಸಲು ಅವಕಾಶ ಇದೆ.

ಟ್ರಿಪಲ್ ಕ್ಯಾಮೆರಾ ಸೆನ್ಸಾರ್

ಟ್ರಿಪಲ್ ಕ್ಯಾಮೆರಾ ಸೆನ್ಸಾರ್

ವಿವೋ Y33s ಸ್ಮಾರ್ಟ್‌ಫೋನ್ ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಮುಖ್ಯ ಕ್ಯಾಮೆರಾವು 50 ಎಂಪಿ ಸೆನ್ಸಾರ್ ಇದೆ. ಸೆಕೆಂಡರಿ ಕ್ಯಾಮೆರಾವು 2 ಎಂಪಿ ಸೆನ್ಸಾರ್‌ನಲ್ಲಿದ್ದು, ತೃತೀಯ ಕ್ಯಾಮೆರಾವು 2 ಎಂಪಿ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಇದರೊಂದಿಗೆ 16 ಎಂಪಿಯ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ.

ಅಧಿಕ ಬ್ಯಾಟರಿ ಬ್ಯಾಕ್‌ಅಪ್‌

ಅಧಿಕ ಬ್ಯಾಟರಿ ಬ್ಯಾಕ್‌ಅಪ್‌

ವಿವೋ Y33s ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದ್ದು, ಅದಕ್ಕೆ ಪೂರಕವಾಗಿ 18W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸಪೋರ್ಟ್‌ ಇದೆ. ಇದರೊಂದಿಗೆ 4G LTE, ಡ್ಯುಯಲ್-ಬ್ಯಾಂಡ್ ವೈ-ಫೈ, ಬ್ಲೂಟೂತ್ v5 ಮತ್ತು USB OTG ಆಯ್ಕೆ ನೀಡಲಾಗಿದೆ. ಇದು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಒಳಗೊಂಡಿದೆ.

ಬೆಲೆ ಎಷ್ಟು ಮತ್ತು ಲಭ್ಯತೆ

ಬೆಲೆ ಎಷ್ಟು ಮತ್ತು ಲಭ್ಯತೆ

ವಿವೋ Y33s ಸ್ಮಾರ್ಟ್‌ಫೋನ್ ದರದಲ್ಲಿ ಈಗ 1,000ರೂ.ಗಳ ಹೆಚ್ಚಳ ಮಾಡಿದೆ. ಹೀಗಾಗಿ 8GB + 128GB ಸ್ಟೋರೇಜ್‌ ವೇರಿಯಂಟ್ ದರವು 17,990ರೂ. ಆಗಿತ್ತು. ಆದರೆ ಈಗ ಬೆಲೆ ಏರಿಕೆಯಿಂದ 18,990ರೂ.ಗಳಿಗೆ ಲಭ್ಯವಾಗಲಿದೆ. ಇನ್ನು ಈ ಫೋನ್ ಮಿಡ್ ಡೇ ಡ್ರೀಮ್ ಮತ್ತು ಮೀರರ್ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಗ್ರಾಹಕರಿಗೆ ಲಭ್ಯ.

ಭಾರತದಲ್ಲಿ ವಿವೋ Y3s (2021) ಸ್ಮಾರ್ಟ್‌ಫೋನ್ ಲಾಂಚ್

ಭಾರತದಲ್ಲಿ ವಿವೋ Y3s (2021) ಸ್ಮಾರ್ಟ್‌ಫೋನ್ ಲಾಂಚ್

ವಿವೋ Y3s 2021 ಸ್ಮಾರ್ಟ್‌ಫೋನ್ 720 x 1,600 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.51 ಇಂಚಿನ ವಿಶಾಲ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಈ ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೋ P35 SoC ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ 2GB RAM ಸಾಮರ್ಥ್ಯ ಮತ್ತು 32GB ಆಂತರಿಕ ಸ್ಟೋರೇಜ್‌ನ ಆಯ್ಕೆಯನ್ನು ಹೊಂದಿದೆ. ಹಾಗೆಯೇ ಎಸ್‌ಡಿ ಕಾರ್ಡ್‌ ಮೂಲಕ 1TB ವರೆಗೂ ಬಾಹ್ಯ ಮೆಮೊರಿ ಹೆಚ್ಚಿಸಲು ಅವಕಾಶ ಇದೆ. ಮುಖ್ಯ ಕ್ಯಾಮೆರಾವು 13 ಮೆಗಾ ಪಿಕ್ಸಲ್ ಸೆನ್ಸಾರ್ ನಲ್ಲಿದ್ದು, ಸೆಲ್ಫಿ ಕ್ಯಾಮೆರಾವು 5 ಮೆಗಾ ಪಿಕ್ಸಲ್‌ ಸೆನ್ಸಾರ್ ಪಡೆದಿದೆ. ಹಾಗೆಯೇ 5,000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದೆ. ಈ ಫೋನ್ ಬೆಲೆಯು 9,490 ರೂ. ಆಗಿದೆ.

Best Mobiles in India

English summary
Vivo Y33 Price in India Hiked By Rs. 1,000: Now Available at Rs. 18990.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X