Home
ಸುದ್ದಿಜಾಲ

ವಿವೋ Y33e 5G ಸ್ಮಾರ್ಟ್‌ಫೋನ್‌ ಬಿಡುಗಡೆ! 10W ವೇಗದ ಚಾರ್ಜಿಂಗ್ ವಿಶೇಷ!

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ವಿವೋ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಪ್ರಸಿದ್ಧಿ ಪಡೆದುಕೊಂಡಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ವಿವೋ Y33e 5G ಸ್ಮಾರ್ಟ್‌ಫೋನ್‌ ಅನ್ನು ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಮಿಡಿಯಾಟೆಕ್‌ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ.

ವಿವೋ Y33e 5G

ಹೌದು, ವಿವೋ ಕಂಪೆನಿ ತನ್ನ ಹೊಸ ವಿವೋ Y33e 5G ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದ್ದು, 10W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ವಿವೋ Y33e 5G ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.51 ಇಂಚಿನ LCD ಸ್ಕ್ರೀನ್‌ HD+ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್‌, 20:9 ರಚನೆಯ ಅನುಪಾತ ಮತ್ತು 88.99% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಇನ್ನು ಈ ಸ್ಮಾರ್ಟ್‌ಫೋನ್‌ ಮಿಡಿಯಾಟೆಕ್‌ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್ 12 ಆಧಾರಿತ ಒರಿಜಿನ್ ಓಷನ್ ಓಎಸ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM + 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ವಿವೋ Y33e 5G ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ಎರಡನೇ ಕ್ಯಾಮೆರ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ವಿವೋ Y33e 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದ್ದು, 10W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಬ್ಯಾಂಡ್ ವೈ-ಫೈ ಮತ್ತು ಬ್ಲೂಟೂತ್ v5.1 ವೈರ್‌ಲೆಸ್ ಸಂಪರ್ಕವನ್ನು ಬೆಂಬಲಿಸುತ್ತದೆ. ಇದು ಫೇಸ್ ವೇಕ್ ಫೀಚರ್ಸ್‌ ಅನ್ನು ಹೊಂದಿದ್ದು, USB ಟೈಪ್-C ಪೋರ್ಟ್ ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ವಿವೋ Y33e 5G ಸ್ಮಾರ್ಟ್‌ಫೋನ್‌ ಚೀನಾದಲ್ಲಿ ಮಾತ್ರ ಬಿಡುಗಡೆಯಾಗಿದೆ. ಈ ಸ್ಮಾರ್ಟ್‌ಫೋನ್‌ CNY 1,299 (ಅಂದಾಜು 15,000ರೂ) ಬೆಲೆ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಫ್ಲೋರೈಟ್ ಬ್ಲಾಕ್ ಮತ್ತು ಮ್ಯಾಜಿಕ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಬರಲಿದೆ.

ವಿವೋ

ಇದಲ್ಲದೆ ವಿವೋ ಕಂಪೆನಿ ಇತ್ತೀಚಿಗೆ ಭಾರತದಲ್ಲಿ ವಿವೋ Y75 ಸ್ಮಾರ್ಟ್‌ಫೋನ್‌ ಬಿಡುಗಡೆಯಾಗಿದೆ. ಈ ಸ್ಮಾರ್ಟ್‌ಫೋನ್‌ 6.44 ಇಂಚಿನ ಫುಲ್‌ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಈ ಡಿಸ್‌ಪ್ಲೇ ಎಲ್‌ಸಿಡಿ ಸ್ಕ್ರೀನ್‌ ಅನ್ನು ಹೊಂದಿದೆ. ಇದು ವೀಡಿಯೋ ಕರೆ ಮತ್ತು ವೀಡಿಯೋ ವೀಕ್ಷಣೆಗೆ ಯೋಗ್ಯವಾದ ಮಾದರಿಯನ್ನು ಒಳಗೊಂಡಿದೆ. ಇದು ಮೀಡಿಯಾ ಟೆಕ್‌ ಹಿಲಿಯೋ G96 4G SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಆಧಾರಿತ ಫನ್‌ಟಚ್‌ OS 12 ನಲ್ಲಿ ಕಾರ್ಯನಿರ್ವಹಿಸುತ್ತದೆ.

Best Mobiles in India

English summary
Vivo Y33e 5G features a side-mounted fingerprint sensor
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+