ವಿವೋ ಕಂಪನಿಯ ಈ ಎರಡು ಫೋನ್‌ಗಳ ಬೆಲೆಯಲ್ಲಿ ಭರ್ಜರಿ ಇಳಿಕೆ!
ವಿವೋ ಮೊಬೈಲ್ ಸಂಸ್ಥೆಯು Y ಸರಣಿಯಲ್ಲಿ ಇತ್ತೀಚಿಗೆ ಭಾರತದಲ್ಲಿ ಬಿಡುಗಡೆ ಮಾಡಿದ್ದ ವಿವೋ Y33s ಮತ್ತು ವಿವೋ Y33T ಸ್ಮಾರ್ಟ್‌ಫೋನ್ ಹಲವು ಫೀಚರ್ಸ್‌ಗಳಿಂದ ಗಮನ ಸೆಳೆದಿದೆ. ಬಜೆಟ್ ಪ್ರೈಸ್ ಟ್ಯಾಗ್ ಹೊಂದಿರುವ ವಿವೋ Y33s ಮತ್ತು ವಿವೋ Y33T ಸ್ಮಾರ್ಟ್‌ಫೋನ್‌ಗಳ ಬೆಲೆಯಲ್ಲಿ ಈಗ ದಿಢೀರ್ ಬೆಲೆ ಇಳಿಕೆ ಕಂಡಿದೆ. ವಿವೋ Y33s ಫೋನ್ ಅಗಷ್ಟ 2021 ರಲ್ಲಿ ಮತ್ತು ವಿವೋ Y33T ಜನೆವರಿ 2022ರಲ್ಲಿ ಬಿಡುಗಡೆ ಆಗಿವೆ.

ವಿವೋ Y33s ಫೋನ್ ಮತ್ತು ವಿವೋ Y33T ಸ್ಮಾರ್ಟ್‌ಫೋನ್‌ಗಳ ಬೆಲೆಯಲ್ಲಿ ಇದೀಗ 1,000ರೂ. ಗಳ ಇಳಿಕೆ ಆಗಿದೆ. ಬೆಲೆ ಇಳಿಕೆಯಿಂದಾಗಿ ವಿವೋ Y33T ಫೋನ್ ಇದೀಗ 17,990ರೂ. ಬೆಲೆಯಲ್ಲಿ ಕಾಣಿಸಿಕೊಂಡಿದೆ. ಹಾಗೆಯೇ ವಿವೋ Y33T ಸ್ಮಾರ್ಟ್‌ಫೋನ್ ಸಹ 17,990ರೂ. ಗಳ ದರದಲ್ಲಿ ಲಭ್ಯ ಆಗಲಿದೆ. ಇನ್ನು ಈ ಎರಡು ಫೋನ್‌ಗಳು ಆಕರ್ಷಕ ಫೀಚರ್ಸ್ ಅನ್ನು ಒಳಗೊಂಡಿವೆ. ಹಾಗಾದರೇ ವಿವೋ Y33s ಫೋನ್ ಮತ್ತು ವಿವೋ Y33T ಸ್ಮಾರ್ಟ್‌ಫೋನ್‌ಗಳ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಆಕರ್ಷಕ ಡಿಸ್‌ಪ್ಲೇ ರಚನೆ
ವಿವೋ Y33s ಸ್ಮಾರ್ಟ್‌ಫೋನ್ 2,408 x 1,080 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.5 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿರಲಿದೆ. ಡಿಸ್‌ಪ್ಲೇಯು Halo ಫುಲ್ ವ್ಯೂವ್ ಮಾದರಿಯನ್ನು ಪಡೆದಿದ್ದು, ಪಂಚ್‌ಹೋಲ್ ವಿನ್ಯಾಸ ಹೊಂದಿದೆ.

ಪ್ರೊಸೆಸರ್ ಬಲ ಯಾವುದು
ವಿವೋ Y33s ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೋ G80 SoC ಪ್ರೊಸೆಸರ್ ಅನ್ನು ಒಳಗೊಂಡಿದೆ. ಇದಕ್ಕೆ ಬೆಂಬಲವಾಗಿ ಫನ್‌ಟಚ್ ಆಂಡ್ರಾಯ್ಡ್ 11 ಓಎಸ್ ಸಪೋರ್ಟ್ ಇದೆ. ಇನ್ನು ಈ ಸ್ಮಾರ್ಟ್‌ಫೋನ್ 8GB RAM ಸಾಮರ್ಥ್ಯ ಮತ್ತು 128GB ಆಂತರಿಕ ಸ್ಟೋರೇಜ್‌ನ ಆಯ್ಕೆಯನ್ನು ಹೊಂದಿದೆ. ಎಸ್‌ಡಿ ಕಾರ್ಡ್ ಮೂಲಕ ಮೆಮೊರಿ ಹೆಚ್ಚಿಸಲು ಅವಕಾಶ ಇದೆ.

ಟ್ರಿಪಲ್ ಕ್ಯಾಮೆರಾ ಸೆನ್ಸಾರ್
ವಿವೋ Y33s ಸ್ಮಾರ್ಟ್‌ಫೋನ್ ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಮುಖ್ಯ ಕ್ಯಾಮೆರಾವು 50 ಎಂಪಿ ಸೆನ್ಸಾರ್ ಇದೆ. ಸೆಕೆಂಡರಿ ಕ್ಯಾಮೆರಾವು 2 ಎಂಪಿ ಸೆನ್ಸಾರ್‌ನಲ್ಲಿದ್ದು, ತೃತೀಯ ಕ್ಯಾಮೆರಾವು 2 ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಇದರೊಂದಿಗೆ 16 ಎಂಪಿಯ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ.

ಅಧಿಕ ಬ್ಯಾಟರಿ ಬ್ಯಾಕ್‌ಅಪ್
ವಿವೋ Y33s ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದ್ದು, ಅದಕ್ಕೆ ಪೂರಕವಾಗಿ 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಇದೆ. ಇದರೊಂದಿಗೆ 4G LTE, ಡ್ಯುಯಲ್-ಬ್ಯಾಂಡ್ ವೈ-ಫೈ, ಬ್ಲೂಟೂತ್ v5 ಮತ್ತು USB OTG ಆಯ್ಕೆ ನೀಡಲಾಗಿದೆ. ಇದು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಒಳಗೊಂಡಿದೆ.

ವಿವೋ Y33T ಸ್ಮಾರ್ಟ್‌ಫೋನ್ ಫೀಚರ್ಸ್
ವಿವೋ Y33T ಸ್ಮಾರ್ಟ್‌ಫೋನ್ 1,080x2,408 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.58 ಇಂಚಿನ ಫುಲ್ HD+ ಡಿಸ್‌ಪ್ಲೇ ಹೊಂದಿದೆ. ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಸ್ಮಾರ್ಟ್‌ಫೋನ್ 18W ವೇಗದ ಚಾರ್ಜಿಂಗ್ ಬೆಂಬಲಿಸುವ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.


Click it and Unblock the Notifications








