Home
ಸುದ್ದಿಜಾಲ

ವಿವೋ ಕಂಪೆನಿಯ ಈ ಸ್ಮಾರ್ಟ್‌ಫೋನ್‌ಗೆ 28% ಡಿಸ್ಕೌಂಟ್‌ ಲಭ್ಯ: ಕ್ಯಾಮೆರಾದಲ್ಲಿದೆ ಆಕರ್ಷಕ ಫೀಚರ್ಸ್‌!

ವಿವೋ ಸ್ಮಾರ್ಟ್‌ಫೋನ್‌ಗಳಿಗೆ ಭಾರತದಲ್ಲಿ ಸಾಕಷ್ಟು ಡಿಮ್ಯಾಂಡ್‌ ಇದೆ. ಇದೇ ಕಾರಣಕ್ಕೆ ವಿವೋ ಫೋನ್‌ಗಳು ಎಂಟ್ರಿ ಕೊಟ್ಟ ದಿನದಿಂದಲೂ ದೀರ್ಘ ಕಾಲದವರೆಗೆ ಮಾರುಕಟ್ಟೆಯಲ್ಲಿ ಸದ್ದು ಮಾಡುವುದು ಸಾಮಾನ್ಯವಾಗಿದೆ. ಇದೇ ಹಾದಿಯಲ್ಲಿ ಸಾಕಷ್ಟು ಸೌಂಡ್‌ ಮಾಡಿದ್ದ ವಿವೋ Y33T ಸ್ಮಾರ್ಟ್‌ಫೋನ್‌ ಇದೀಗ ಭರ್ಜರಿ ಡಿಸ್ಕೌಂಟ್‌ ಪಡೆದುಕೊಂಡಿದೆ.

ಹೌದು, ವಿವೋ Y33T ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ ತಾಣದಲ್ಲಿ 28% ಡಿಸ್ಕೌಂಟ್‌ನೊಂದಿಗೆ ಮಾರಾಟವಾಗುತ್ತಿದೆ. ಇದರಿಂದ ಸ್ಮಾರ್ಟ್‌ಫೋನ್‌ ಬೆಲೆಯು ಸಾಕಷ್ಟು ಇಳಿಕೆಯಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್‌ ಸ್ನಾಪ್‌ಡ್ರಾಗನ್‌ 680 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗಾದ್ರೆ ವಿವೋ Y33T ಸ್ಮಾರ್ಟ್‌ಫೋನ್‌ ಮೇಲಿನ ಡಿಸ್ಕೌಂಟ್‌ ನಂತರದ ಬೆಲೆ ಎಷ್ಟಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಮುಂದೆ ಓದಿರಿ.

ವಿವೋ ಕಂಪೆನಿಯ ಈ ಸ್ಮಾರ್ಟ್‌ಫೋನ್‌ಗೆ 28% ಡಿಸ್ಕೌಂಟ್‌ ಲಭ್ಯ: ಆಕರ್ಷಕ ಫೀಚರ್ಸ್‌!

ಡಿಸ್ಕೌಂಟ್‌ ನಂತರ ಬೆಲೆ ಎಷ್ಟು?
ವಿವೋ Y33T ಸ್ಮಾರ್ಟ್‌ಫೋನಿನ 8GB RAM ಮತ್ತ 128 GB ಸ್ಟೋರೇಜ್‌ ಅಯ್ಕೆಯು ಫ್ಲಿಪ್‌ಕಾರ್ಟ್‌ನಲ್ಲಿ 28% ಡಿಸ್ಕೌಂಟ್‌ ಪಡೆದುಕೊಂಡಿದೆ. ಇದರಿಂದ 22,990ರೂ ಬೆಲೆಗೆ ಪಟ್ಟಿ ಮಾಡಲಾಗಿರುವ ಈ ಫೋನ್‌ ಅನ್ನು ನೀವು ಕೇವಲ 16,463ರೂ ಬೆಲೆಯಲ್ಲಿ ಖರೀದಿಸಬಹುದಾಗಿದೆ. ಇದರೊಂದಿಗೆ ಬ್ಯಾಂಕ್‌ ಕ್ರೆಡಿಟ್‌ ಕಾರ್ಡ್‌ಗಳನ್ನು ಬಳಸಿ ಸ್ಮಾರ್ಟ್‌ಫೋನ್‌ ಖರೀದಿಸಿದರೆ ಇದರ ಬೆಲೆ ಇನ್ನಷ್ಟು ಕಡಿಮೆ ಆಗಲಿದೆ.

ವಿವೋ Y33T ಫೀಚರ್ಸ್‌ ಏನು?
ವಿವೋ Y33T ಸ್ಮಾರ್ಟ್‌ಫೋನ್‌ 6.58 ಇಂಚಿನ ಫುಲ್‌ HD+ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 1,080x2,408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಡಿಸ್‌ಪ್ಲೇಯು 90Hz ರಿಫ್ರೆಶ್ ರೇಟ್‌ ಹೊಂದಿರುವ ಇನ್-ಸೆಲ್ ಡಿಸ್‌ಪ್ಲೇ ಆಗಿದೆ.

ವಿವೋ ಕಂಪೆನಿಯ ಈ ಸ್ಮಾರ್ಟ್‌ಫೋನ್‌ಗೆ 28% ಡಿಸ್ಕೌಂಟ್‌ ಲಭ್ಯ: ಆಕರ್ಷಕ ಫೀಚರ್ಸ್‌!

ವಿವೋ Y33T ಪ್ರೊಸೆಸರ್‌ ಮಾಹಿತಿ
ವಿವೋ Y33T ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್‌ನಲ್ಲಿ FunTouch OS 12 ನಲ್ಲಿ ರನ್‌ ಆಗಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದಿದೆ. ಇದರೊಂದಿಗೆ ಮೆಮೊರಿ ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ವಿವೋ Y33T ಕ್ಯಾಮೆರಾ ರಚನೆ
ವಿವೋ Y33T ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ರಚನೆಯಲ್ಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ f/1.8 ಲೆನ್ಸ್‌ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಸಹ ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ವಿವೋ ಕಂಪೆನಿಯ ಈ ಸ್ಮಾರ್ಟ್‌ಫೋನ್‌ಗೆ 28% ಡಿಸ್ಕೌಂಟ್‌ ಲಭ್ಯ: ಆಕರ್ಷಕ ಫೀಚರ್ಸ್‌!

ವಿವೋ Y33T ಬ್ಯಾಟರಿ ವಿಶೇಷ
ವಿವೋ Y33T ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್‌ ಬೆಂಬಲವನ್ನು ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi, ಬ್ಲೂಟೂತ್ v5.0, GPS/ A-GPS, FM ರೇಡಿಯೋ ಮತ್ತು USB ಟೈಪ್-C ಪೋರ್ಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಒಳಗೊಂಡಿದೆ.

ವಿವೋ Y33T ಕಲರ್‌ ಆಯ್ಕೆ ಮತ್ತು ಲಭ್ಯತೆ
ಭಾರತದಲ್ಲಿ ವಿವೋ Y33T ಸ್ಮಾರ್ಟ್‌ಫೋನ್‌ ಸ್ಟಾರ್ರಿ ಗೋಲ್ಡ್ ಆಯ್ಕೆಯು ಡಿಸ್ಕೌಂಟ್‌ನಲ್ಲಿ ಸೇಲ್‌ ಆಗುತ್ತಿದೆ. ಆದರಿಂದ ಈ ಫೋನಿನ 8GB RAM ಮತ್ತು 128GB ಸ್ಟೋರೇಜ್‌ ಆಯ್ಕೆಯುನ್ನು ಕೇವಲ 16,463ರೂ ಬೆಲೆಗೆ ಖರೀದಿಸುವುದಕ್ಕೆ ಸಾಧ್ಯವಾಗಲಿದೆ.

Best Mobiles in India

English summary
vivo Y33T Smartphone gets 28% Discount in Flipkart: Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+