Just In
Don't Miss
- Sports
"ಮತ್ತಷ್ಟು ಬಲಿಷ್ಠವಾಗಿ ಹಿಂದಿರುತ್ತೇವೆ": ಸೋಲಿನ ಬಳಿಕ ಲಕ್ನೋ ಮೆಂಟರ್ ಗಂಭೀರ್ ಸಂದೇಶ
- Finance
ಕ್ರಿಪ್ಟೋ 'ಕಾಯಿನ್ ಟ್ರಾಕ್ಟರ್' ಭಾರತಕ್ಕೆ ಎಂಟ್ರಿ, ಏನಿದು?
- Movies
ಕರಣ್ ಜೋಹರ್ ಪಾರ್ಟಿಯಲ್ಲಿ ರಶ್ಮಿಕಾ-ವಿಜಯ್ ದೇವರಕೊಂಡ ಒಟ್ಟಿಗೆ ಕಾಣಿಸಿಕೊಳ್ಳಲಿಲ್ಲ ಯಾಕೆ?
- News
ಚೀಪ್ ಆಯ್ತು ಚಿನ್ನ: ಮೇ 26ರ ಬಂಗಾರ-ಬೆಳ್ಳಿ ಬೆಲೆ ಓದಿ ತಿಳಿಯಿರಿ
- Automobiles
ಪತ್ನಿ ಕಷ್ಟ ನೋಡಲಾಗದೆ 90 ಸಾವಿರ ಮೌಲ್ಯದ ಮೊಪೆಡ್ ಗಿಫ್ಟ್ ಕೊಟ್ಟ ಭಿಕ್ಷುಕ
- Education
ITBP Recruitment 2022 : 248 ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Lifestyle
ಹೀಗೆ ಮಾಡಿ ನೋಡಿ ಐದೇ ನಿಮಿಷದಲ್ಲಿ ನಿಮ್ಮ ಸ್ಟ್ರೆಸ್ ದೂರಾಗುವುದು
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ದೇಶಿ ಮಾರುಕಟ್ಟೆಯಲ್ಲಿ ವಿವೋ Y33T ಸ್ಮಾರ್ಟ್ಫೋನ್ ಬಿಡುಗಡೆ! ಫೀಚರ್ಸ್ ಹೇಗಿದೆ!
ವಿವೋ ಸ್ಮಾರ್ಟ್ಫೋನ್ ತಮ್ಮ ಆಕರ್ಷಕ ಕ್ಯಾಮೆರಾ ಫೀಚರ್ಸ್ಗಳಿಗೆ ಹೆಸರುವಾಸಿಯಾಗಿವೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್ಫೋನ್ಗಳನ್ನು ಪರಿಚಯಿಸಿ ತನ್ನ ಸ್ಥಾನ ಭದ್ರಪಡಿಸಿಕೊಂಡಿದೆ. ಸದ್ಯ ಇದೀಗ ಭಾರತದ ಮಾರುಕಟ್ಟೆಯಲ್ಲಿ ವಿವೋ Y33T ಸ್ಮಾರ್ಟ್ಫೋನ್ ಲಾಂಚ್ ಮಾಡಿದೆ. ಈ ಸ್ಮಾರ್ಟ್ಫೋನ್ ವಾಟರ್ಡ್ರಾಪ್-ಶೈಲಿಯ ಡಿಸ್ಪ್ಲೇ ನಾಚ್ ಅನ್ನು ಹೊಂದಿದೆ. ಇನ್ನು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಜೊತೆಗೆ ಈ ಸ್ಮಾರ್ಟ್ಫೋನ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 680 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ.

ಹೌದು, ವಿವೋ ಕಂಪೆನಿ ಹೊಸ ವಿವೋ Y33T ಸ್ಮಾರ್ಟ್ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್ಫೋನ್ 58-ಇಂಚಿನ ಫುಲ್ HD+ ಡಿಸ್ಪ್ಲೇ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನು ವಿವೋ Y21T ಮಿಡ್ ಡೇ ಡ್ರೀಮ್ ಮತ್ತು ಮಿರರ್ ಬ್ಲ್ಯಾಕ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್ಫೋನ್ 18,990ರೂ ಬೆಲೆಯನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್ಫೋನ್ ಯಾವೆಲ್ಲಾ ಫೀಚರ್ಸ್ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್ಪ್ಲೇ ವಿಶೇಷ
ವಿವೋ Y33T ಸ್ಮಾರ್ಟ್ಫೋನ್ 1,080x2,408 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.58 ಇಂಚಿನ ಫುಲ್ HD+ ಡಿಸ್ಪ್ಲೇ ಹೊಂದಿದೆ. ಇನ್ನು ಈ ಡಿಸ್ಪ್ಲೇ 90Hz ರಿಫ್ರೆಶ್ ರೇಟ್ ಹೊಂದಿರುವ ಇನ್-ಸೆಲ್ ಡಿಸ್ಪ್ಲೇ ಆಗಿದೆ.

ಪ್ರೊಸೆಸರ್ ಯಾವುದು?
ಈ ಸ್ಮಾರ್ಟ್ಫೋನ್ ಆಕ್ಟಾ-ಕೋರ್ ಸ್ನಾಪ್ಡ್ರಾಗನ್ 680 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ನಲ್ಲಿ FunTouch OS 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಬಹುದಾಗಿದೆ.

ಕ್ಯಾಮೆರಾ ವಿನ್ಯಾಸ
ವಿವೋ Y33T ಸ್ಮಾರ್ಟ್ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ f/1.8 ಲೆನ್ಸ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಸಹ ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಬ್ಯಾಟರಿ ಮತ್ತು ಇತರೆ
ವಿವೋ Y33T ಸ್ಮಾರ್ಟ್ಫೋನ್ 18W ವೇಗದ ಚಾರ್ಜಿಂಗ್ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi, ಬ್ಲೂಟೂತ್ v5.0, GPS/ A-GPS, FM ರೇಡಿಯೋ ಮತ್ತು USB ಟೈಪ್-C ಪೋರ್ಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಇತರೆ
ಭಾರತದಲ್ಲಿ ವಿವೋ Y33T ಸ್ಮಾರ್ಟ್ಫೋನ್ ಏಕೈಕ 8GB RAM + 128GB ಸ್ಟೋರೇಜ್ ಕಾನ್ಫಿಗರೇಶನ್ಗೆ 18,990.ರೂ ಬೆಲೆ ಹೊಂದಿದೆ. ಇನ್ನು ಈ ಫೋನ್ ಮಿಡ್ ಡೇ ಡ್ರೀಮ್ ಮತ್ತು ಮಿರರ್ ಬ್ಲ್ಯಾಕ್ ಬಣ್ಣಗಳಲ್ಲಿ ಬರುತ್ತದೆ. ಇದು ಇಂದಿನಿಂದ (ಜನವರಿ 10) ಅಮೆಜಾನ್, ಫ್ಲಿಪ್ಕಾರ್ಟ್, ವಿವೋ ಇಂಡಿಯಾ ಇ ಸ್ಟೋರ್, ಪೇಟಿಎಂ ಮತ್ತು ವಿವಿಧ ಆಫ್ಲೈನ್ ರಿಟೇಲ್ ಸ್ಟೋರ್ಗಳ ಮೂಲಕ ಖರೀದಿಗೆ ಲಭ್ಯವಿರುತ್ತದೆ. ಹಾಗೇ ನೋಡಿದರೆ ವಿವೋ ಕಂಪೆನಿ ಈ ಹಿಂದೆ ಬಿಡುಗಡೆ ಮಾಡಿದ್ದ ವಿವೋ Y21T ಸ್ಮಾರ್ಟ್ಫೋನ್ 4GB + 128GB ರೂಪಾಂತರಕ್ಕೆ 16,490.ರೂ ಬೆಲೆ ಹೊಂದಿತ್ತು.
-
54,535
-
1,19,900
-
54,999
-
86,999
-
49,975
-
49,990
-
20,999
-
1,04,999
-
44,999
-
64,999
-
20,699
-
49,999
-
11,499
-
54,999
-
7,999
-
8,980
-
17,091
-
10,999
-
34,999
-
39,600
-
25,750
-
33,590
-
27,760
-
44,425
-
13,780
-
1,25,000
-
45,990
-
1,35,000
-
82,999
-
17,999