ವಿವೋ Y35M ಸ್ಮಾರ್ಟ್‌ಫೋನ್ ಬಿಡುಗಡೆ! ಕ್ಯಾಮೆರಾ ಫೀಚರ್ಸ್ ಹೇಗಿದೆ?
2023ಕ್ಕೆ ಕಾಲಿಡ್ತಿದ್ದ ಹಾಗೇ ಟೆಕ್ ವಲಯದಲ್ಲಿ ಹೊಸ ಸ್ಮಾರ್ಟ್‌ಫೋನ್‌ಗಳ ಆರ್ಭಟ ಜೋರಾಗಿದೆ. ಇದೀಗ ವಿವೋ ಕಂಪೆನಿ ತನ್ನ ಹೊಸ ಸ್ಮಾರ್ಟ್‌ಫೋನ್ ಮೂಲಕ ಮಾರುಕಟ್ಟೆಯಲ್ಲಿ ಸಂಚಲನ ಸೃಷ್ಟಿಸಿದೆ. ವಿವೋ ಕಂಪೆನಿ ಹೊಸ ವಿವೋ Y35M ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ ಎಂಟ್ರಿ ಲೆವೆಲ್ ಸ್ಮಾರ್ಟ್‌ಫೋನ್ ಆಗಿದ್ದು, ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.

ಹೌದು, ವಿವೋ ಕಂಪೆನಿ ಹೊಸ ವಿವೋ Y35M ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ 60Hz ರಿಫ್ರೆಶ್ ರೇಟ್ ಬೆಂಬಲಿಸುವ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ವಿವೋ Y35M ಸ್ಮಾರ್ಟ್‌ಫೋನ್ 5,000mAh ಬ್ಯಾಟರಿಯನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಅನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ವಿವೋ Y35M ಸ್ಮಾರ್ಟ್‌ಫೋನ್ 6.51 ಇಂಚಿನ ಐಪಿಎಸ್ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ ವಾಟರ್‌ಡ್ರಾಪ್ ನಾಚ್ ವಿನ್ಯಾಸವನ್ನು ಪಡೆದಿದೆ. ಇದು 720 x 1600 ಪಿಕ್ಸೆಲ್ ಸ್ಕ್ರೀನ್ HD+ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಜೊತೆಗೆ ಡಿಸ್‌ಪ್ಲೇ 1500:1 ರ ಕಾಂಟ್ರಾಸ್ಟ್ ಅನುಪಾತ, 60Hz ರಿಫ್ರೆಶ್ ರೇಟ್ ಬೆಂಬಲವನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ ಸ್ಕ್ರೀನ್-ಟು ಬಾಡಿ ನಡುವಿನ ಅನುಪಾತ 88.99% ರಷ್ಟಿದೆ.

ಪ್ರೊಸೆಸರ್ ಹೇಗಿದೆ?
ವಿವೋ Y35M ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ವೇಗವನ್ನು ಪಡೆದಿದೆ. ಇದು ಆಂಡ್ರಾಯ್ಡ್ 13 OS ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM+128GB, 6GB ಮತ್ತು 128GB ಹಾಗೂ 8GB RAM ಮತ್ತು 128GB ಇನ್‌ಬಿಲ್ಟ್ ಸ್ಟೋರೇಜ್ ರೂಪಾಂತರದ ಆಯ್ಕೆಗಳಲ್ಲಿ ಬರುತ್ತದೆ. ಇದು ಮೆಮೊರಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ಬೆಂಬಲಿಸುವ ಬಗ್ಗೆ ಯಾವುದೇ ಮಾಹಿತಿಯಿಲ್ಲ.

ಕ್ಯಾಮೆರಾ ಸೆಟ್‌ಅಪ್ ಏನಿದೆ?
ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2-ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಪಡೆದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಹಿಂಭಾಗದಲ್ಲಿ ಎಲ್ಇಡಿ ಫ್ಲ್ಯಾಷ್ ಹೊಂದಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್?
ವಿವೋ Y35M ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. 15W ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ ಸಿಮ್, 5G, Wi-Fi 802.11ac, ಬ್ಲೂಟೂತ್ 5.2, GPS, USB-C ಪೋರ್ಟ್, 3.5mm ಆಡಿಯೋ ಜ್ಯಾಕ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ ಸೈಡ್-ಫೇಸಿಂಗ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್‌ನಂತಹ ಫೀಚರ್ಸ್‌ಗಳನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ವಿವೋ Y35M ಸ್ಮಾರ್ಟ್‌ಫೋನ್ ಪ್ರಸ್ತುತ ಚೀನಾದಲ್ಲಿ ಮಾತ್ರ ಬಿಡುಗಡೆಯಾಗಿದೆ. ಚೀನಾದಲ್ಲಿ ಈ ಸ್ಮಾರ್ಟ್‌ಫೊನ್‌ನ 4GB RAM + 128GB ಸ್ಟೋರೇಜ್ ಆಯ್ಕೆಯ ಬೆಲೆ 1,399 ಯುವಾನ್ (ಅಂದಾಜು 16,753ರೂ), 6GB RAM + 128 GB ಸ್ಟೋರೇಜ್ ಆಯ್ಕೆಯ ಬೆಲೆ 1,599 ಯುವಾನ್ (ಅಂದಾಜು 19,148ರೂ) ಆಗಿದೆ. ಇದರ 8GB RAM + 128GB ಸ್ಟೋರೇಜ್ ಆಯ್ಕೆಯ ಬೆಲೆ 1,699 ಯುವಾನ್ (20,345)ಹೊಂದಿದೆ. ಇದು ಡಾನ್ ಗೋಲ್ಡ್, ಐಸ್ ಕ್ಲೌಡ್ ಬ್ಲೂ ಮತ್ತು ಅಬ್ಸಿಡಿಯನ್ ಬ್ಲ್ಯಾಕ್, Y35m ಸ್ಟಾರ್ ಆರೆಂಜ್ ಮತ್ತು ಸ್ಟಾರಿ ನೈಟ್ ಬ್ಲ್ಯಾಕ್ ಶ್ಯಾಡೋ ಕಲರ್ ಆಯ್ಕೆಗಳಲ್ಲಿ ಬರುತ್ತದೆ.


Click it and Unblock the Notifications








