ವಿವೋದ ಈ ಸ್ಟೈಲಿಶ್ ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಸಖತ್ ಇಳಿಕೆ!
ಜನಪ್ರಿಯ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್ ಹಬ್ಬದ ಪ್ರಯುಕ್ತ ವಿಶೇಷ ಸೇಲ್ ಮೇಳವನ್ನು ಆಯೋಜಿಸಿ ಗ್ರಾಹಕರ ಗಮನ ಸೆಳೆದದೆ. ಈ ಸೇಲ್‌ನಲ್ಲಿ ಕೆಲವು ಸ್ಮಾರ್ಟ್‌ಫೋನ್‌ಗಳಿಗೆ ಆಕರ್ಷಕ ರಿಯಾಯಿತಿ ತಿಳಿಸಿದ್ದು, ಆ ಪೈಕಿ ವಿವೋ ಸಂಸ್ಥೆಯ ವಿವೋ Y36 ಸ್ಮಾರ್ಟ್‌ಫೋನ್ ಬಹು ಆಕರ್ಷಕ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ.
ಹೌದು, ಫ್ಲಿಪ್‌ಕಾರ್ಟ್ ತಾಣದ ಸೇಲ್‌ನಲ್ಲಿ ವಿವೋ Y36 ಮೊಬೈಲ್ ಶೇ. 31% ರಷ್ಟು ಡಿಸ್ಕೌಂಟ್ ಪಡೆದುಕೊಂಡಿದೆ. ಹೀಗಾಗಿ ಗ್ರಾಹಕರು 8 GB RAM + 128 GB ಸ್ಟೋರೇಜ್ ವೇರಿಯಂಟ್ ಈ ಫೋನ್ ಅನ್ನು 14,999ರೂ. ಗಳಿಗೆ ಖರೀದಿ ಮಾಡಲು ಅವಕಾಶ ಇದೆ. ಇದರ ಜೊತೆಗೆ ಆಯ್ದ ಬ್ಯಾಂಕ್ ಕೊಡುಗೆಗಳು, ಇಎಮ್‌ಐ ಸೌಲಭ್ಯಗಳು ಹಾಗೂ ಇತರೆ ಕ್ಯಾಶ್‌ಬ್ಯಾಕ್ ಕೊಡುಗೆ ಲಭ್ಯವಾಗಲಿವೆ.

ಇನ್ನು ವಿವೋ Y36 ಫೋನ್ ಡೈಮೆನ್ಸಿಟಿ 700 ಚಿಪ್‌ಸೆಟ್ ಪ್ರೊಸೆಸರ್ ಪವರ್ ಸಾಮರ್ಥ್ಯ ಪಡೆದಿದ್ದು, ಮುಖ್ಯ ರಿಯರ್ ಕ್ಯಾಮೆರಾ 50 ಮೆಗಾ ಪಿಕ್ಸಲ್ ಸೆನ್ಸಾರ್ ರಚನೆ ಹೊಂದಿದೆ. ಹಾಗೆಯೇ ಈ ಮೊಬೈಲ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಹೊಂದಿದೆ. ಅಲ್ಲದೇ 16 ಮೆಗಾ ಪಿಕ್ಸೆಲ್ ಕ್ಯಾಮೆರಾ ಹೊಂದಿದೆ. ಹಾಗಾದರೆ ವಿವೋ Y36 ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ನೋಡೋಣ ಬನ್ನಿರಿ.
ಡಿಸ್‌ಪ್ಲೇ ರಚನೆ ಹಾಗೂ ವಿನ್ಯಾಸ ಹೀಗಿದೆ
ವಿವೋ Y36 ಮೊಬೈಲ್ 6.51 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಹೊಂದಿದ್ದು, 720 x 1600 ಪಿಕ್ಸೆಲ್ ರೆಸಲ್ಯೂಶನ್ ಪಡೆದುಕೊಂಡಿದೆ. ಹಾಗೆಯೇ ಇದು 90Hz ರಿಫ್ರೆಶ್ ರೇಟ್ ಪಡೆದಿದ್ದು, ಉತ್ತಮ ppi ಪಿಕ್ಸೆಲ್ ಸಾಂದ್ರತೆ ಈ ಫೋನ್ ಡಿಸ್‌ಪ್ಲೇನಲ್ಲಿ ಇದೆ.

ಪ್ರೊಸೆಸರ್ ಸಾಮರ್ಥ್ಯದ ಮಾಹಿತಿ ಹೀಗಿದೆ
ವಿವೋ Y36 ಫೋನ್ ಡೈಮೆನ್ಸಿಟಿ 700 ಚಿಪ್‌ಸೆಟ್ ಪ್ರೊಸೆಸರ್ ನಲ್ಲಿ ಕೆಲಸ ನಿರ್ವಹಿಸಲಿದ್ದು, ಆಂಡ್ರಾಯ್ಡ್ 13 ಓಎಸ್ ಆಧಾರಿತ ಒರಿಜಿನ್ ಓಎಸ್ ಓಷನ್ ಯುಐ ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ 8 GB RAM ಮತ್ತು 128 GB ಆಂತರೀಕ ಸ್ಟೋರೇಜ್ ಸಾಮರ್ಥ್ಯದ ವೇರಿಯಂಟ್ ಆಯ್ಕೆ ಇದ್ದು, ಮೈಕ್ರೊ ಎಸ್‌ಡಿ ಕಾರ್ಡ್ ಸ್ಲಾಟ್ ಮೂಲಕ ಇಂಟರ್ನಲ್ ಸ್ಟೋರೇಜ್ ಅನ್ನು ಇನ್ನೂ ಹೆಚ್ಚಿಗೆ ಮಾಡಿಕೊಳ್ಳುವ ಅವಕಾಶ ನೀಡಲಾಗಿದೆ.

ಡ್ಯುಯಲ್ ಕ್ಯಾಮೆರಾ ಸೆನ್ಸಾರ್ ಸ್ಪೆಷಲ್
ವಿವೋ Y36 ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಪಡೆದುಕೊಂಡಿದೆ. ಇದರ ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಕ್ಯಾಮೆರಾ, ದ್ವಿತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ ಮತ್ತು ಎಲ್‌ಇಡಿ ಫ್ಲ್ಯಾಶ್ ಆಯ್ಕೆ ಪಡೆದಿದೆ. ಅದೇ ರೀತಿ ಮುಂಭಾಗದಲ್ಲಿ 16 ಮೆಗಾ ಪಿಕ್ಸೆಲ್ ಕ್ಯಾಮೆರಾ ಸೆನ್ಸಾರ್ ಅನ್ನು ಒದಗಿಸಲಾಗಿದೆ.
ಬ್ಯಾಟರಿ ಬ್ಯಾಕ್‌ಅಪ್ ಹಾಗೂ ಇತರೆ ಸೌಲಭ್ಯಗಳು
ವಿವೋ Y35 ಮೊಬೈಲ್ 44W ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುವ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಆಯ್ಕೆ ಪಡೆದುಕೊಂಡಿದೆ. ಅಲ್ಲದೇ ಇದು ವೈ ಫೈ, ಬ್ಲೂಟೂತ್ ಆವೃತ್ತಿ 5.2, ಜಿಪಿಎಸ್, ಯುಎಸ್‌ಬಿ ಸಿ ಪೋರ್ಟ್ ಮತ್ತು 3.5 ಎಂಎಂ ಆಡಿಯೊ ಜಾಕ್ ಕನೆಕ್ಟಿವಿಟಿ ಆಯ್ಕೆಯ ಜೊತೆಗೆ ಫೋನ್ ಸೆಕ್ಯೂರಿಟಿಗಾಗಿ ಸೈಡ್ ಫೇಸಿಂಗ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಆಯ್ಕೆ ಅನ್ನು ಕೂಡಾ ಪಡೆದುಕೊಂಡಿದೆ.


Click it and Unblock the Notifications








