Home
ಸುದ್ದಿಜಾಲ

ವಿವೋ Y36 ಸ್ಮಾರ್ಟ್‌ಫೋನ್‌ ಲಾಂಚ್!..ಕುತೂಹಲಕರ ಫೀಚರ್ಸ್‌; ಬೆಲೆ ಎಷ್ಟು?

ಜನಪ್ರಿಯ ಮೊಬೈಲ್‌ ಕಂಪೆನಿಗಳಲ್ಲಿ ಒಂದಾದ ವಿವೋ ಬಜೆಟ್‌ ದರದಲ್ಲಿ ಸ್ಮಾರ್ಟ್‌ಫೋನ್‌ಗಳನ್ನು ಗ್ರಾಹಕರಿಗೆ ಪರಿಚಯಿಸುತ್ತಾ ಸಾಗಿದೆ. ಇದೀಗ ವಿವೋ ತನ್ನ Y ಸರಣಿಯಲ್ಲಿ ನೂತನವಾಗಿ ವಿವೋ Y36 ಸ್ಮಾರ್ಟ್‌ಫೋನ್‌ ಅನ್ನು ಲಾಂಚ್ ಮಾಡಿದ್ದು, ಮಾರುಕಟ್ಟೆಯಲ್ಲಿ ಭಾರೀ ಸದ್ದು ಮೊಳಗಿಸಿದೆ.

ಹೌದು, ವಿವೋ ಕಂಪೆನಿಯು ಹೊಸದಾಗಿ ವಿವೋ Y36 ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಈ ಫೋನ್‌ 4G ವೇರಿಯಂಟ್‌ ಹಾಗೂ 5G ವೇರಿಯಂಟ್‌ನಲ್ಲಿ ಸಹ ಖರೀದಿಗೆ ಲಭ್ಯ. ಅಲ್ಲದೇ ಇದು ಡೈಮೆನ್ಸಿಟಿ 700 ಚಿಪ್‌ಸೆಟ್‌ನಿಂದ ಕಾರ್ಯನಿರ್ವಹಿಸಲಿದ್ದು, 8GB RAM ಹಾಗೂ 128GB ವೇರಿಯಂಟ್‌ ಆಯ್ಕೆ ಪಡೆದಿದೆ.

ವಿವೋ Y36 ಸ್ಮಾರ್ಟ್‌ಫೋನ್‌ ಲಾಂಚ್!..ಕುತೂಹಲಕರ ಫೀಚರ್ಸ್‌; ಬೆಲೆ ಎಷ್ಟು?

ಇನ್ನು ಈ ಫೋನ್‌ ಹಿಂಭಾಗದಲ್ಲಿ ತ್ರಿವಳಿ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸಲ್‌ ಒಳಗೊಂಡಿದೆ. ಹಾಗಿದ್ರೆ, ವಿವೋ Y35 ಫೋನಿನ ಇನ್ನಿತರೆ ಫೀಚರ್ಸ್‌ ಏನು ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ ಬನ್ನಿರಿ.

ವಿವೋ Y36 ಡಿಸ್‌ಪ್ಲೇ ರಚನೆ ಹಾಗೂ ವಿನ್ಯಾಸ : ವಿವೋ Y36 ಸ್ಮಾರ್ಟ್‌ಫೋನ್‌ 6.51 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದ್ದು, 720 x 1600 ಪಿಕ್ಸೆಲ್‌ ರೆಸಲ್ಯೂಶನ್‌ ನೀಡಲಿದೆ. ಹಾಗೆಯೇ 90Hz ರಿಫ್ರೆಶ್ ರೇಟ್‌ ಪಡೆದಿದ್ದು, ಉತ್ತಮ ppi ಪಿಕ್ಸೆಲ್ ಸಾಂದ್ರತೆ ಈ ಡಿಸ್‌ಪ್ಲೇನಲ್ಲಿದೆ.

ವಿವೋ Y36 ಪ್ರೊಸೆಸರ್‌ ಸಾಮರ್ಥ್ಯ ಎಷ್ಟು : ವಿವೋ Y36 ಸ್ಮಾರ್ಟ್‌ಫೋನ್‌ ಡೈಮೆನ್ಸಿಟಿ 700 ಚಿಪ್‌ಸೆಟ್‌ ಪ್ರೊಸೆಸರ್ ನಲ್ಲಿ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್‌ 13 ಓಎಸ್‌ ಆಧಾರಿತ ಒರಿಜಿನ್ಓಎಸ್ ಓಷನ್ ಯುಐ ನಲ್ಲಿ ರನ್‌ ಆಗಲಿದೆ. 8 GB RAM ಮತ್ತು 128 GB ಇಂಟರ್ನಲ್‌ ಸ್ಟೋರೇಜ್‌ ಸಾಮರ್ಥ್ಯದ ವೇರಿಯಂಟ್‌ ಆಯ್ಕೆ ಇದ್ದು, ಮೈಕ್ರೊ ಎಸ್‌ಡಿ ಕಾರ್ಡ್ ಸ್ಲಾಟ್ ಮೂಲಕ ಇಂಟರ್ನಲ್‌ ಸ್ಟೋರೇಜ್‌ ಅನ್ನು ಇನ್ನೂ ಹೆಚ್ಚಿಗೆ ಮಾಡಿಕೊಳ್ಳುವ ಅವಕಾಶ ಕಲ್ಪಿಸಲಾಗಿದೆ.

ವಿವೋ Y36 ಟ್ರಿಪಲ್‌ ಕ್ಯಾಮೆರಾ ರಚನೆ : ವಿವೋ Y36 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆ ಪಡೆದುಕೊಂಡಿದೆ. ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಕ್ಯಾಮೆರಾ, 2 ಮೆಗಾ ಪಿಕ್ಸೆಲ್‌ ಮ್ಯಾಕ್ರೋ ಕ್ಯಾಮೆರಾ ಮತ್ತು ಎಲ್‌ಇಡಿ ಫ್ಲ್ಯಾಶ್‌ ಆಯ್ಕೆ ಇದ್ದು, ಮುಂಭಾಗದಲ್ಲಿ 16 ಮೆಗಾ ಪಿಕ್ಸೆಲ್‌ ಕ್ಯಾಮೆರಾ ಹೊಂದಿದೆ.

ವಿವೋ Y36 ಬ್ಯಾಟರಿ ಹಾಗೂ ಇತರೆ ಸೌಲಭ್ಯ : ವಿವೋ Y35 ಸ್ಮಾರ್ಟ್‌ಫೋನ್ 44W ಚಾರ್ಜಿಂಗ್ ಅನ್ನು ಬೆಂಬಲಿಸುವ 5,000 mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದುಕೊಂಡಿದೆ. ಹಾಗೆಯೇ ವೈ-ಫೈ, ಬ್ಲೂಟೂತ್ ಆವೃತ್ತಿ 5.2, ಜಿಪಿಎಸ್, ಯುಎಸ್‌ಬಿ-ಸಿ ಪೋರ್ಟ್ ಮತ್ತು 3.5 ಎಂಎಂ ಆಡಿಯೊ ಜಾಕ್ ಕನೆಕ್ಟಿವಿಟಿ ಆಯ್ಕೆಯ ಜೊತೆಗೆ ಸೆಕ್ಯೂರಿಟಿಗಾಗಿ ಸೈಡ್ ಫೇಸಿಂಗ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಆಯ್ಕೆ ಹೊಂದಿದೆ.

ವಿವೋ Y35 5G ಸ್ಮಾರ್ಟ್‌ಫೋನ್ : ಈ ಫೋನ್‌ 6.51 ಇಂಚಿನ IPS ಎಲ್‌ಸಿಡಿ ಡಿಸ್‌ಪ್ಲೇ ಹೊಂದಿದ್ದು, 720 x 1600 ಪಿಕ್ಸೆಲ್‌ ರೆಸಲ್ಯೂಶನ್‌ ನೀಡಲಿದೆ. ಹಾಗೆಯೇ 60Hz ರಿಫ್ರೆಶ್ ರೇಟ್‌ ಹಾಗೂ 120Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಈ ಫೋನ್‌ ನೀಡಲಿದೆ. ಹಾಗೆಯೇ ಆಕ್ಟಾ ಕೋರ್ ಡೈಮೆನ್ಸಿಟಿ 700 ಚಿಪ್‌ಸೆಟ್‌ನಿಂದ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್‌ 13 ಓಎಸ್‌ ಸಪೋರ್ಟ್‌ ಹೊಂದಿದೆ. ಈ ಫೋನ್ ಡ್ಯುಯಲ್ ರಿಯರ್‌ ಕ್ಯಾಮೆರಾ ರಚನೆ ಒಳಗೊಂಡಿದೆ. ಇದು 5,000mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದುಕೊಂಡಿದೆ.

Best Mobiles in India

English summary
Vivo Y36 Series With 50MP Dual-Camera Launched: Price, Specifications.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+