ವಿವೋದ ಈ ಹೊಸ ಫೋನ್‌ನಲ್ಲಿ ಹೇಗಿದೆ ಕ್ಯಾಮೆರಾ ಕ್ವಾಲಿಟಿ! ಸೆಲ್ಫಿ ಪ್ರಿಯರಿಗೆ ಇಷ್ಟವಾಗುತ್ತಾ?
ಯುವಜನರ ಸೆಲ್ಫಿ ಮೋಜಿಗೆ ತಕ್ಕಂತ ವಿನ್ಯಾಸವನ್ನು ಹೊಂದಿರುವ ಸ್ಮಾರ್ಟ್‌ಫೋನ್‌ಗಳಲ್ಲಿ ವಿವೋಗೆ ಅಗ್ರಸ್ಥಾನ. ತನ್ನ ವಿಭಿನ್ನ ಶೈಲಿಯ ಕ್ಯಾಮೆರಾ ಸೆಟ್‌ಅಪ್‌ಗಳಿಂದ ವಿವೋ ಸ್ಮಾರ್ಟ್‌ಫೋನ್‌ಗಳಿಗೆ ಭಾರಿ ಬೇಡಿಕೆಯಿದೆ. ಇದಕ್ಕೆ ಅನುಗುಣವಾಗಿ ಅನೇಕ ಸ್ಮಾರ್ಟ್‌ಫೋನ್‌ಗಳು ಬಂದಿವೆ, ಇದೀಗ ಹೊಸ ವಿವೋ Y36 ಸ್ಮಾರ್ಟ್‌ಫೋನ್ ಭಾರತಕ್ಕೆ ಎಂಟ್ರಿ ನೀಡಿದೆ.
ಹೌದು, ವಿವೋ Y36 ಸ್ಮಾರ್ಟ್‌ಫೋನ್ ಭಾರತದಲ್ಲಿ ಲಾಂಚ್ ಆಗಿದೆ. Vivo Y36 ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ವಿವೋ Y36 ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ವಿವೋ Y36 ಸ್ಮಾರ್ಟ್‌ಫೋನ್ 6.64 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080x2,388 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಮತ್ತು 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಒಳಗೊಂಡಿದೆ.
ವಿವೋ Y36 ಪ್ರೊಸೆಸರ್ ಯಾವುದು?
ವಿವೋ Y36 ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ 6nm ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಆಧಾರಿತ ಫಂಟೌಚ್ OS 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ 8GB ವಿಸ್ತೃತ RAM ಅನ್ನು ಹೊಂದಿದೆ. ಜೊತೆಗೆ ಸ್ಮಾರ್ಟ್‌ಫೋನ್‌ನಲ್ಲಿ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ವಿವೋ Y36 ಕ್ಯಾಮೆರಾ ಸೆಟ್‌ಅಪ್ ವಿನ್ಯಾಸ
ವಿವೋ Y36 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದಲ್ಲದೆ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದರೊಂದಿಗೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಸೂಪರ್ ನೈಟ್ ಮೋಡ್, ಮಲ್ಟಿ ಸ್ಟೈಲ್ ಪೋರ್ಟ್ರೇಟ್, ಮತ್ತು ಬೊಕೆ ಫ್ಲೇರ್ ಪೋರ್ಟ್ರೇಟ್ ಸೇರಿದಂತೆ ವಿವಿಧ ಮೋಡ್‌ಗಳನ್ನು ಬೆಂಬಲಿಸಲಿದೆ.
ವಿವೋ Y36 ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ವಿವೋ Y36 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 44W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, ಬ್ಲೂಟೂತ್ 5, GPS/A-GPS ಮತ್ತು USB ಟೈಪ್-C ಪೋರ್ಟ್ ಅನ್ನು ಒಳಗೊಂಡಿದೆ. ಇದಲ್ಲದೆ ಆಕ್ಸಿಲೆರೋಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್, ಪ್ರಾಕ್ಸಿಮಿಟಿ ಸೆನ್ಸಾರ್, ಇ-ದಿಕ್ಸೂಚಿ ಮತ್ತು ಗೈರೊಸ್ಕೋಪ್ ಅನ್ನು ಒಳಗೊಂಡಿದೆ. ಇನ್ನು ಸ್ಮಾರ್ಟ್‌ಫೋನ್ ಇನ್-ಹೌಸ್ ಫಾಸ್ಟ್ ಚಾರ್ಜಿಂಗ್ ತಂತ್ರಜ್ಞಾನ ಹೊಂದಿರುವುದರಿಂದ ಕೇವಲ 15 ನಿಮಿಷಗಳಲ್ಲಿ 0% ನಿಂದ 30% ಬ್ಯಾಟರಿಯನ್ನು ಚಾರ್ಜ್ ಮಾಡಲಿದೆ.

ಭಾರತದಲ್ಲಿ ವಿವೋ Y36 ಸ್ಮಾರ್ಟ್‌ಫೋನ್ ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ವಿವೋ Y36 ಸ್ಮಾರ್ಟ್‌ಫೋನ್ 8GB RAM + 128GB ಸ್ಟೋರೇಜ್ ಮಾದರಿಗೆ 16,999ರೂ. ಬೆಲೆಯನ್ನು ಹೊಂದಿದೆ. ಇದು ಮೆಟಿಯರ್ ಬ್ಲ್ಯಾಕ್ ಮತ್ತು ವೈಬ್ರೆಂಟ್ ಗೋಲ್ಡ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇದನ್ನು ವಿವೋ ಇಂಡಿಯಾದ ಇ-ಸ್ಟೋರ್, ಫ್ಲಿಪ್‌ಕಾರ್ಟ್ ಮತ್ತು ಎಲ್ಲಾ ಪಾಲುದಾರ ಚಿಲ್ಲರೆ ಅಂಗಡಿಗಳ ಮೂಲಕ ಖರೀದಿಸಬಹುದಾಗಿದೆ. ಇದಲ್ಲದೆ ಫ್ಲಿಪ್‌ಕಾರ್ಟ್ ಫ್ಲಾಟ್ HDFC ಬ್ಯಾಂಕ್ ಡೆಬಿಟ್ ಕಾರ್ಡ್‌ಗಳು ಮತ್ತು EMI ವಹಿವಾಟುಗಳ ಮೂಲಕ ಖರೀದಿಸಿದರೆ 1,500ರೂ. ಕ್ಯಾಶ್‌ಬ್ಯಾಕ್ ದೊರೆಯಲಿದೆ.


Click it and Unblock the Notifications








