Home
ಸುದ್ದಿಜಾಲ

Vivo: ವಿವೋ Y36i ಸ್ಮಾರ್ಟ್‌ಫೋನ್‌ ಬಿಡುಗಡೆ!..5000mAh ಬ್ಯಾಟರಿ ಸಾಮರ್ಥ್ಯ!

ವಿವೋ ಕಂಪೆನಿ ಮತ್ತೊಂದು ಹೊಸ ಸ್ಮಾರ್ಟ್‌ಫೋನ್‌ನೊಂದಿಗೆ ಮಾರುಕಟ್ಟೆಯಲ್ಲಿ ಹವಾ ಕ್ರಿಯೆಟ್‌ ಮಾಡಿದೆ. ಇದನ್ನು ವಿವೋ Y36i ಸ್ಮಾರ್ಟ್‌ಫೋನ್‌ ಎಂದು ಹೆಸರಿಸಲಾಗಿದ್ದು, ಮೀಡಿಯಾಟೆಕ್‌ ಡೈಮೆನ್ಸಿಟಿ 6020 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊ೦ಡಿದೆ.

ಹೌದು, ವಿವೋ Y36i ಸ್ಮಾರ್ಟ್‌ಫೋನ್‌ ಬಿಡುಗಡೆ ಆಗಿದೆ. ಈ ಸ್ಮಾರ್ಟ್‌ಫೋನ್‌ Mali-G57 MC2 ಗ್ರಾಫಿಕ್ಸ್ ಪ್ರೊಸೆಸಿಂಗ್ ಯೂನಿಟ್‌ ಅನ್ನು ಒಳಗೊಂಡಿದೆ. ಇದು ವಾಟರ್‌ ಡ್ರಾಪ್‌ ನಾಚ್‌ ವಿನ್ಯಾಸದ ಡಿಸ್‌ಪ್ಲೇಯನ್ನು ಹೊಂದಿದೆ. ಜೊತೆಗೆ ಸ್ಮಾರ್ಟ್‌ಫೋನ್‌ ಫೇಸ್ ವೇಕ್ ಫೇಶಿಯಲ್ ರೆಕಗ್ನಿಷನ್ ಟೆಕ್ನಾಲಜಿಯನ್ನು ಸಹ ಬೆಂಬಲಿಸಲಿದೆ. ಇನ್ನುಳಿದಂತೆ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

Vivo: ವಿವೋ Y36i ಸ್ಮಾರ್ಟ್‌ಫೋನ್‌ ಬಿಡುಗಡೆ!..5000mAh ಬ್ಯಾಟರಿ ಸಾಮರ್ಥ್ಯ!

ವಿವೋ Y36i ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ವಿವೋ Y36i ಸ್ಮಾರ್ಟ್‌ಫೋನ್‌ 6.56 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 720 x 1612 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 20.1:9 ರಚನೆಯ ಅನುಪಾತವನ್ನು ಹೊಂದಿದ್ದು, 89.67% ಸ್ಕ್ರೀನ್-ಟು-ಬಾಡಿ ಅನುಪಾತದಲ್ಲಿ ಬರಲಿದೆ. ಇನ್ನು ಡಿಸ್‌ಪ್ಲೇ 180Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಹಾಗೂ 840 ನಿಟ್ಸ್‌ ಬ್ರೈಟ್‌ನೆಸ್ ಅನ್ನು ಬೆಂಬಲಿಸಲಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಅನ್ನು ನೀಡಲಿದೆ.

ವಿವೋ Y36i ಸ್ಮಾರ್ಟ್‌ಫೋನ್‌ ಪ್ರೊಸೆಸರ್‌ ಯಾವುದು?
ವಿವೋ Y36i ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 6020SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ Mali-G57 GPU ಸಪೋರ್ಟ್‌ ಅನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್‌ 13 ಆಧಾರಿತ OriginOS 3ನಲ್ಲಿ ರನ್‌ ಆಗಲಿದೆ. ಹಾಗೆಯೇ 4GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ.

Vivo: ವಿವೋ Y36i ಸ್ಮಾರ್ಟ್‌ಫೋನ್‌ ಬಿಡುಗಡೆ!..5000mAh ಬ್ಯಾಟರಿ ಸಾಮರ್ಥ್ಯ!

ವಿವೋ Y36i ಸ್ಮಾರ್ಟ್‌ಫೋನ್‌ ಕ್ಯಾಮೆರಾ ಸೆಟ್‌ಅಪ್‌
ವಿವೋ Y36i ಸ್ಮಾರ್ಟ್‌ಫೋನ್‌ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾವನ್ನು ಹೊಂದಿದೆ. ಇದು ಆಂಟಿ-ಸ್ಟ್ರೋಬೋಸ್ಕೋಪಿಕ್ ಸೆನ್ಸಾರ್‌ ನೀಡಲಿದೆ. ಇದಲ್ಲದೆ 5 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಸೆಲ್ಫಿ ಕ್ಯಾಮೆರಾವನ್ನು ವಾಟರ್‌ ಡ್ರಾಪ್‌ ನಾಚ್‌ನಲ್ಲಿರಿಸಲಾಗಿದೆ.

ವಿವೋ Y36i ಸ್ಮಾರ್ಟ್‌ಫೋನ್‌ ಬ್ಯಾಟರಿ ಮತ್ತು ಇತರೆ
ವಿವೋ Y36i ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 15W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್‌, ಹಾಟ್‌ಸ್ಪಾಟ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಹೊಂದಿದೆ. ಇದು ಸೈಡ್ ಫಿಂಗರ್‌ಪ್ರಿಂಟ್ ಸೆನ್ಸರ್, ಫೇಸ್ ವೇಕ್ ಫೇಶಿಯಲ್ ರೆಕಗ್ನಿಷನ್ ಅನ್ನು ಬೆಂಬಲಿಸಲಿದೆ.

Vivo: ವಿವೋ Y36i ಸ್ಮಾರ್ಟ್‌ಫೋನ್‌ ಬಿಡುಗಡೆ!..5000mAh ಬ್ಯಾಟರಿ ಸಾಮರ್ಥ್ಯ!

ವಿವೋ Y36i ಸ್ಮಾರ್ಟ್‌ಫೋನ್‌ ಬೆಲೆ ಮತ್ತು ಲಭ್ಯತೆ
ವಿವೋ Y36i ಸ್ಮಾರ್ಟ್‌ಫೋನ್‌ ಚೀನಾದಲ್ಲಿ ಮಾತ್ರ ಬಿಡುಗಡೆ ಆಗಿದೆ. ಇದರಿಂದ ಈ ಸ್ಮಾರ್ಟ್‌ಫೋನ್‌ ಬೆಲೆ 1,199 ಯುವಾನ್ (ಅಂದಾಜು 14,036ರೂ) ಆಗಿದೆ. ಈ ಸ್ಮಾರ್ಟ್‌ಫೋನ್‌ ಅನ್ನು ನೇರಳೆ ಮತ್ತು ಚಿನ್ನದ ಕಲರ್‌ ಆಯ್ಕೆಗಳಲ್ಲಿ ಖರೀದಿಸಬಹುದಾಗಿದೆ.

ಇನ್ನು ವಿವೋ ಕಂಪೆನಿ ಇತ್ತೀಚಿಗೆ ವಿವೋ Y100i 5G ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ 6.64 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2388 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿದೆ. ಇನ್ನು ಡಿಸ್‌ಪ್ಲೇ ಪಂಚ್-ಹೋಲ್ ಕಟೌಟ್ ವಿನ್ಯಾಸವನ್ನು ಪಡೆದುಕೊಂಡಿದ್ದು, 60Hz ರಿಫ್ರೆಶ್ ರೇಟ್‌ ಹಾಗೂ 93.3% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು Adreno 619 GPU ಸಪೊರ್ಟ್‌ ಪಡೆದುಕೊಂಡಿದೆ. ಹಾಗೆಯೇ 12GB RAM ಮತ್ತು 256GB ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದು ವರ್ಚುವಲ್ RAM ವಿಸ್ತರಣೆಗೆ ಬೆಂಬಲವನ್ನು ನೀಡಲಿದ್ದು, RAM ಅನ್ನು 12GB ವರೆಗೆ ವಿಸ್ತರಿಸಬಹುದು.

Best Mobiles in India

English summary
Vivo Y36i with Dimensity 6020 SoC Launched: Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+