Home
ಸುದ್ದಿಜಾಲ

ಬೆಲೆ ಇಳಿಕೆ ಕಂಡ ವಿವೋ Y50 ಮತ್ತು ವಿವೋ S1 ಪ್ರೊ ಸ್ಮಾರ್ಟ್‌ಫೋನ್‌!

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ವಿವೋ ಸಂಸ್ಥೆ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಂದ ಗುರುತಿಸಿಕೊಂಡಿದೆ. ಸದ್ಯ ಇದೀಗ ಕೆಲವೇ ತಿಂಗಳುಗಳ ಹಿಂದೆ ಬಿಡುಗಡೆ ಮಾಡಿದ್ದ, ವಿವೋ Y50 ಮತ್ತು ವಿವೊ S1 ಪ್ರೊ ಸ್ಮಾರ್ಟ್‌ಫೋನ್‌ ಮೇಲೆ ಭಾರತದಲ್ಲಿ ಬೆಲೆ ಕಡಿತವನ್ನು ಘೋಷಿಸಲಾಗಿದೆ. ಇನ್ನು ಈ ಎರಡೂ ಸ್ಮಾರ್ಟ್‌ಫೋನ್‌ಗಳ ಬೆಲೆಯಲ್ಲಿ 1,000ರೂ ಗಳನ್ನ ಕಡಿಮೆ ಮಾಡಲಾಗಿದೆ. ಸದ್ಯ ಈ ಎರಡೂ ಸ್ಮಾರ್ಟ್‌ಫೋನ್‌ಗಳನ್ನ ವಿವೋ ಸಂಸ್ಥೆಯ ತನ್ನ ಅಧಿಕೃತ ವೆಬ್‌ಸೈಟ್ ಮತ್ತು ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್‌ನಲ್ಲಿ ಖರೀದಿಸಬಹುದಾಗಿದೆ.

ವಿವೋ

ಹೌದು, ವಿವೋ ಸಂಸ್ಥೆ ತನ್ನ ವಿವೋ Y50 ಮತ್ತು ವಿವೊ S1 ಪ್ರೊ ಸ್ಮಾರ್ಟ್‌ಫೋನ್‌ಗಳ ಮೇಲೆ ಸಾವಿರು ರೂಗಳಷ್ಟು ಬೆಲೆಯನ್ನು ಇಳಿಕೆ ಮಾಡಿದೆ. ಸದ್ಯ ವಿವೋ Y50 ಸ್ಮಾರ್ಟ್‌ಫೋನ್‌ ಇದೀಗ 8GB RAM + 128GB ರೂಪಾಂತರಕ್ಕೆ 16,990 ರೂ. ಬೆಲೆಯನ್ನು ಹೊಂದಿದೆ. ಇದೇ ಫೋನ್ ಕಳೆದ ಜೂನ್‌ನಲ್ಲಿ ಬಿಡುಗಡೆ ವೇಳೆ ರೂ. 17,990 ಹೊಂದಿತ್ತು. ಇನ್ನು ವಿವೋ S1 ಪ್ರೊ, ಇದೀಗ 18,890 ರೂಗಳಿಗೆ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್‌ಗಳು ಐರಿಸ್ ಬ್ಲೂ , ಪರ್ಲ್ ವೈಟ್ ಮಿಸ್ಟಿಕ್ ಬ್ಲ್ಯಾಕ್, ಜೇಜಿ ಬ್ಲೂ ಮತ್ತು ಡ್ರೀಮಿ ವೈಟ್ ಬಣ್ಣ ಆಯ್ಕೆಗಳಲ್ಲಿ ಲಭ್ಯವಾಗಲಿವೆ. ಇನ್ನುಳಿದಂತೆ ಈ ಎರಡು ಸ್ಮಾರ್ಟ್‌ಫೋನ್‌ಗಳ ಫೀಚರ್ಸ್‌ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ವಿವೋ Y50 ಡಿಸ್‌ಪ್ಲೇ ರಚನೆ

ವಿವೋ Y50 ಡಿಸ್‌ಪ್ಲೇ ರಚನೆ

ವಿವೋ Y50 ಸ್ಮಾರ್ಟ್‌ಫೋನ್‌ 1080x2340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.53-ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇಯನ್ನ ಹೊಂದಿದೆ. ಅಲ್ಲದೆ ಈ ಡಿಸ್‌ಪ್ಲೇಯು ಪಂಚ್‌ಹೋಲ್‌ ವಿನ್ಯಾಸವನ್ನ ಹೊಂದಿರಲಿದ್ದು, 19.5: 9 ರಚನೆಯ ಅನುಪಾತವನ್ನ ಒಳಗೊಂಡಿದೆ.

ಪ್ರೊಸೆಸರ್‌ ಬಲ

ಪ್ರೊಸೆಸರ್‌ ಬಲ

ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್‌ 665 SoC ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ ಆಧಾರಿತ ಫಂಟೌಚ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 8GB RAM ಮತ್ತು 128GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನ ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಣೆ ಮಾಡಬಹುದಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ವಿವೋ Y50 ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 120 ಮೆಗಾಪಿಕ್ಸೆಲ್ ವೈಡ್-ಆಂಗಲ್ ಸೆನ್ಸಾರ್‌ 120 ಡಿಗ್ರಿ ಫೀಲ್ಡ್-ವ್ಯೂ, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಪೋರ್ಟ್ರೇಟ್ ಸೆನ್ಸಾರ್‌, ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾವನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದು ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುವುದಿಲ್ಲ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE , ಡ್ಯುಯಲ್-ಬ್ಯಾಂಡ್ ವೈ-ಫೈ, GPS ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ನಲ್ಲಿ ಅಕ್ಸೆಲೆರೊಮೀಟರ್, ಗೈರೊಸ್ಕೋಪ್, ಆಂಬಿಯೆಂಟ್ ಲೈಟ್ ಸೆನ್ಸಾರ್ ಮತ್ತು ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಸಹ ಒಳಗೊಂಡಿದೆ.

ವಿವೋ S1 ಪ್ರೊ ಸ್ಮಾರ್ಟ್‌ಫೋನ್‌

ವಿವೋ S1 ಪ್ರೊ ಸ್ಮಾರ್ಟ್‌ಫೋನ್‌

ಇನ್ನು ವಿವೊ S1 ಪ್ರೊ ಸ್ಮಾರ್ಟ್‌ಫೋನ್‌ 1080x2340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.38-ಇಂಚಿನ ಫುಲ್‌ ಹೆಚ್‌ಡಿ+ ಸೂಪರ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 665 SoC ಪ್ರೊಸೆಸರ್‌ ಅನ್ನು ಹೊಂದಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ವನ್ನು ಸಹ ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದು 18W ಡ್ಯುಯಲ್ ಎಂಜಿನ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

Best Mobiles in India

English summary
Vivo Y50 and the Vivo S1 Pro are both powered by the Qualcomm Snapdragon 665 SoC.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+