ವಿವೋ Y50 ಸ್ಮಾರ್ಟ್‌ಫೋನ್ ಬಿಡುಗಡೆ! ಆಕರ್ಷಕ ಕ್ಯಾಮೆರಾ ಫೀಚರ್ಸ್!
ಚೀನಾ ಮೂಲದ ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ವಿವೋ ಕಂಪೆನಿ ಈಗಾಗಲೇ ಹಲವು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿದೆ. ಹಲವು ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಬಿಡುಗಡೆ ಮಾಡಿ ಸೈ ಎನಿಸಿಕೊಂಡಿರುವ ವಿವೋ ಇದೀಗ ಫ್ಲಿಪ್‌ಕಾರ್ಟ್ ಲಿಸ್ಟ್ ಲೈವ್ ಶುರುವಾದ ಕೂಡಲೇ ವಿವೋ Y50 ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ.

ಹೌದು, ಜನಪ್ರಿಯ ವಿವೋ ಸ್ಮಾರ್ಟ್‌ಫೋನ್ ಕಂಪೆನಿ ತನ್ನ ಹೊಸ ವಿವೋ Y50 ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 665 SoC ಪ್ರೊಸೆಸರ್ ವೇಗವನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಅನ್ನು ಈ ವಾರದ ಕೊನೆಯಲ್ಲಿ ಆಫ್‌ಲೈನ್ ಮತ್ತು ಆನ್‌ಲೈನ್ ಚಿಲ್ಲರೆ ಚಾನೆಲ್‌ಗಳ ಮೂಲಕ ಖರೀದಿಸಬಹುದು ಎನ್ನಲಾಗಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ
ವಿವೋ Y50 ಸ್ಮಾರ್ಟ್‌ಫೋನ್ 1080x2340 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.53-ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇಯನ್ನ ಹೊಂದಿದೆ. ಅಲ್ಲದೆ ಈ ಡಿಸ್‌ಪ್ಲೇಯು ಪಂಚ್‌ಹೋಲ್ ವಿನ್ಯಾಸವನ್ನ ಹೊಂದಿರಲಿದ್ದು, 19.5: 9 ರಚನೆಯ ಅನುಪಾತವನ್ನ ಒಳಗೊಂಡಿದೆ.

ಪ್ರೊಸೆಸರ್
ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 665 SoC ಪ್ರೊಸೆಸರ್ ವೇಗವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ ಆಧಾರಿತ ಫಂಟೌಚ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್ 8GB RAM ಮತ್ತು 128GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನ ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಣೆ ಮಾಡಬಹುದಾಗಿದೆ.

ಕ್ಯಾಮೆರಾ ವಿನ್ಯಾಸ
ವಿವೋ Y50 ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 120 ಮೆಗಾಪಿಕ್ಸೆಲ್ ವೈಡ್-ಆಂಗಲ್ ಸೆನ್ಸಾರ್ 120 ಡಿಗ್ರಿ ಫೀಲ್ಡ್-ವ್ಯೂ, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಪೋರ್ಟ್ರೇಟ್ ಸೆನ್ಸಾರ್, ಮತ್ತು ನಾಲ್ಕನೇ ಕ್ಯಾಮೆರಾ 4 ಸೆಂ ಫೋಕಲ್ ಉದ್ದದ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾವನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ
ಇನ್ನು ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, ಇದು ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುವುದಿಲ್ಲ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE , ಡ್ಯುಯಲ್-ಬ್ಯಾಂಡ್ ವೈ-ಫೈ, GPS ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ನಲ್ಲಿ ಅಕ್ಸೆಲೆರೊಮೀಟರ್, ಗೈರೊಸ್ಕೋಪ್, ಆಂಬಿಯೆಂಟ್ ಲೈಟ್ ಸೆನ್ಸಾರ್ ಮತ್ತು ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಸಹ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ವಿವೋ Y50 ಸ್ಮಾರ್ಟ್‌ಫೋನ್ ಬೆಲೆ 17,990 ರೂ. ಆಗಿದ್ದು, ಇದು ಐರಿಸ್ ಬ್ಲೂ ಮತ್ತು ಪರ್ಲ್ ವೈಟ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್ ಆನ್‌ಲೈನ್ ಮತ್ತು ಆಫ್‌ಲೈನ್ ಮಳಿಗೆಗಳ ಮೂಲಕ ಇದೇ ಜೂನ್ 10 ರಿಂದ ಮಾರಾಟವಾಗಲಿದೆ.


Click it and Unblock the Notifications





