Home
ಸುದ್ದಿಜಾಲ

ವಿವೋ ಸಂಸ್ಥೆಯಿಂದ ವಿವೋ Y50 ಸ್ಮಾರ್ಟ್‌ಫೋನ್‌ ಬಿಡುಗಡೆ!

ಸ್ಮಾರ್ಟ್‌ಫೋನ್‌ ವಲಯದಲ್ಲಿ ಸಾಕಷ್ಟು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ನಾವಿಂದು ಕಾಣಬಹುದಾಗಿದೆ. ಹಲವು ಕಂಪೆನಿಗಳು ತಮ್ಮ ಬಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಮಾರುಕಟ್ಟೆಯಲ್ಲಿ ತಮ್ಮದೆ ಆದ ಬ್ರ್ಯಾಂಡ್‌ ಅನ್ನು ಸೃಷ್ಟಿಸಿಕೊಂಡಿವೆ. ಇಂತಹ ಮಾದರಿಯ ಕಂಪೆನಿಗಳಲ್ಲಿ ವಿವೋ ಕಂಪೆನಿ ಕೂಡ ಒಂದಾಗಿದೆ. ಸದ್ಯ ವಿವೋ ತನ್ನ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಸದ್ಯ ಇದೀಗ ಮತ್ತೊಂದು ಹೊಸ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ.

ಹೌದು

ಹೌದು, ಚೀನಾ ಮೂಲದ ವಿವೋ ಕಂಪೆನಿ ತನ್ನ ವಿವೋ Y50 ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಹೊಸ ವಿನ್ಯಾಸವನ್ನ ಹೊಂದಿದ್ದು, 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಒಳಗೊಂಡಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 665 SoC,ಪ್ರೊಸೆಸರ್‌ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫಿಚರ್ಸ್‌ಗಳನ್ನ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಬನ್ನಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ವಿವೋ Y50 ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್ ರೆಸಲ್ಯೂಶನ್‌ ಸ್ಕ್ರೀನ್‌ ಸಾಮರ್ಥ್ಯ ಹೊಂದಿರುವ 6.53 ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು IPS LCD ವಿನ್ಯಾಸ ಡಿಸ್‌ಪ್ಲೇ ಆಗಿದೆ. ಅಲ್ಲದೆ ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತವನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ಪಂಚ್‌ಹೋಲ್‌ ಡಿಸ್‌ಪ್ಲೇ ಮಾದರಿಯನ್ನ ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇಯು 403PPI ಪಿಕ್ಸೆಲ್‌ ಸಾಂದ್ರತೆಯನ್ನ ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇ ಟಚ್‌ಸ್ಕ್ರೀನ್, ಮಲ್ಟಿ-ಟಚ್ ಅನ್ನು ಒಳಗೊಂಡಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 665 SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ವಿವೋ Y50 ಸ್ಮಾರ್ಟ್‌ಫೋನ್‌ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೆ ಕ್ಯಾಮೆರಾ 8 ಮೆಗಾಪಿಕ್ಸೆಲ್ ವೈಡ್-ಆಂಗಲ್ ಲೆನ್ಸ್, ಮುರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಡಿಜಿಟಲ್ ಜೂಮ್‌, ಆಟೋ ಫ್ಲ್ಯಾಶ್‌, ಫೇಸ್‌ ಡಿಟೆಕ್ಷನ್‌, ಟಚ್‌ ಟು ಫೋಕಸ್‌, ಫೀಚರ್ಸ್‌ ಹೊಂದಿದೆ.

ಬ್ಯಾಟರಿ ಮತ್ತು ಲಭ್ಯತೆ

ಬ್ಯಾಟರಿ ಮತ್ತು ಲಭ್ಯತೆ

ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, 18W ಫಾಸ್ಟ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಅನ್ನು ಬೆಂಬಲಿಸಲಿದೆ. ಇದಲ್ಲದೆ ಫಿಂಗರ್‌ಪ್ರಿಂಟ್‌ ಸ್ಕ್ಯಾನರ್‌, ಅಲ್ಲದೆ MU-MIMO ಟೆಕ್ನಾಲಜಿ ಯನ್ನು ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ RMB 1,698 ಬೆಲೆಯನ್ನ ಹೊಂದಿದ್ದು, ಇದು ಭಾರತದಲ್ಲಿ ಸುಮಾರು 18,310 ರೂ. ಬೆಲೆಗೆ ಲಬ್ಯವಾಗಲಿದೆ. ಸದ್ಯ ಇದು ವಿವೊ ಅಧಿಕೃತ ವೆಬ್‌ಸೈಟ್ ಮತ್ತು ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳ ಮೂಲಕ ಲಭ್ಯವಿರುತ್ತದೆ. ಗ್ಲೇಸಿಯರ್ ಬ್ಲೂ, ಸಿಲ್ವರ್, ಮತ್ತು ಅಬ್ಸಿಡಿಯನ್ ಬ್ಲ್ಯಾಕ್ ಸೇರಿದಂತೆ ಮೂರು ವಿಭಿನ್ನ ಬಣ್ಣಗಳಲ್ಲಿ ನೀಡಲಾಗುತ್ತಿದೆ.

Best Mobiles in India

English summary
The newly launched Vivo Y50 will be available with a price label of RMB 1,698, which is around Rs 18,310 in India.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+